AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಕೇಸ್​: ಬಂಧಿತ ಮಾಸ್ಕ್​​ಮ್ಯಾನ್ ಸಿಎನ್​ ಚಿನ್ನಯ್ಯ​ ಯಾರು? ಇಲ್ಲಿದೆ ಮಾಹಿತಿ

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟಿರುವುದಾಗಿ ಅನಾಮಿಕ ದೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತಂಡವು ಸಾಕ್ಷಿದಾರ ಮಾಸ್ಕ್‌ಮ್ಯಾನ್‌ನನ್ನು ಶನಿವಾರ ಬಂಧಿಸಿದೆ. ಸದ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಆತನನ್ನು ಹಾಜರುಪಡಿಸಲಾಗಿದೆ. ಹಾಗಾದರೆ ಈ ಮಾಸ್ಕ್‌ಮ್ಯಾನ್​ ಯಾರು, ಎಲ್ಲಿಯವನು ಮತ್ತು ಸಾಕ್ಷಿದಾರನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದು ಹೇಗೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಧರ್ಮಸ್ಥಳ ಕೇಸ್​: ಬಂಧಿತ ಮಾಸ್ಕ್​​ಮ್ಯಾನ್ ಸಿಎನ್​ ಚಿನ್ನಯ್ಯ​ ಯಾರು? ಇಲ್ಲಿದೆ ಮಾಹಿತಿ
ಬಂಧಿತ ಮಾಸ್ಕ್‌ಮ್ಯಾನ್‌ ಸಿಎನ್​​ ಚಿನ್ನಯ್ಯ
ಗಂಗಾಧರ​ ಬ. ಸಾಬೋಜಿ
|

Updated on:Aug 23, 2025 | 1:47 PM

Share

ಮಂಗಳೂರು, ಆಗಸ್ಟ್​ 23: ಧರ್ಮಸ್ಥಳದಲ್ಲಿ (Dharmasthala case) ಶವಗಳನ್ನ ಹೂತಿಟ್ಟ ಆರೋಪ ರಾಜಕೀಯ ತಿರುವು ಪಡೆದುಕೊಂಡಿದೆ. ಇತ್ತ ಬಿಜೆಪಿ ಧರ್ಮದ ಉಳಿವಿಗಾಗಿ ಧರ್ಮಯುದ್ಧ ಎಂಬ ಚಳವಳಿ ಶುರುಮಾಡಿದೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವ ಬೆಳವಣಿಗೆಯೊಂದು ನಡೆದಿದೆ. ಸಾಕ್ಷಿದಾರನಾಗಿ ಬಂದಿದ್ದ ಅನಾಮಿಕ ಮಾಸ್ಕ್​ಮ್ಯಾನ್ (Masked man) ​​ನನ್ನು ಇದೀಗ ಎಸ್​​ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಸಿಎನ್​ ಚಿನ್ನಯ್ಯ ಅಲಿಯಾಸ್ ಚೆನ್ನ ಬಂಧಿತ ಆರೋಪಿ. ಈ ಮಾಸ್ಕ್​ಮ್ಯಾನ್​ ಯಾರು, ಎಲ್ಲಿಯವನು ಎಂದು ಸಾಕಷ್ಟು ಚರ್ಚೆಗಳು ನಡೆದಿದ್ದವು. ಸ್ವತಃ ಎಸ್ಐಟಿ ಅಧಿಕಾರಿಗಳು ದಾಖಲೆ ಸಮೇತ ಈತ ಮಂಡ್ಯದ ಚಿಕ್ಕಬಳ್ಳಿ ಗ್ರಾಮದವನು ಎಂದು ಬಯಲು ಮಾಡಿದ್ದಾರೆ.

ಧರ್ಮಸ್ಥಳದ ಸುತ್ತ ಎದ್ದಿರುವ ಇಷ್ಟು ದೊಡ್ಡ ವಿವಾದದ ಕೇಂದ್ರ ಬಿಂದುವೇ ಮಾಸ್ಕ್​ಮ್ಯಾನ್ ಆಗಿದ್ದ. ಅಕ್ರಮವಾಗಿ ನೂರಾರು ಹೆಣಗಳನ್ನ ಹೂತಿದ್ದೇನೆ ಅಂತಾ ಮಾಡಿದ್ದ ಆರೋಪ ದೇಶದಲ್ಲೇ ಸಂಚಲನ ಎಬ್ಬಿಸಿತ್ತು. ತನಿಖೆಗೆ ಸರ್ಕಾರ ಎಸ್​ಐಟಿ ಕೂಡ ರಚಿಸಿತ್ತು. ಈತ ತೋರಿಸಿದ 17 ಪಾಯಿಂಟ್‌ಗಳಲ್ಲೂ ಶೋಧ ಮಾಡಲಾಗಿತ್ತು. ಆದರೆ ಈತ ಹೇಳಿದಂತೆ ಅಸ್ಥಿಪಂಜರಗಳು ಸಿಕ್ಕಿಲ್ಲ. ಹೀಗಾಗಿ, ಈ ಮಾಸ್ಕ್‌ಮ್ಯಾನ್‌ ಯಾರು? ಈತನ ಬ್ಯಾಕ್‌ಗ್ರೌಂಡ್‌ ಏನು? ಅವನ ಉದ್ದೇಶ ಏನು? ಅಂತಾ ಮುಖವಾಡ ಕಳಚಲಾಗಿದೆ.

ಮಂಡ್ಯ ಮೂಲದ ಮಾಸ್ಕ್‌ಮ್ಯಾನ್‌ ವಿವಾದಿತ ವ್ಯಕ್ತಿ

ಇನ್ನು ಮಾಸ್ಕ್‌ಮ್ಯಾನ್ ಹುಟ್ಟಿ ಬೆಳೆದಿದ್ದು ನಮ್ಮ ಗ್ರಾಮದಲ್ಲೇ, ಆತ ಹುಟ್ಟು ಸೋಮಾರಿ ಎಂದು ಮಂಡ್ಯ ಜಿಲ್ಲೆಯ ಚಿಕ್ಕಬಳ್ಳಿ ಗ್ರಾಮದ ನಿಂಗರಾಜು ಮತ್ತು ಶಂಕರೇಗೌಡ ಎಂಬುವವರು ಟಿವಿ9ಗೆ ಹೇಳಿಕೆ ನೀಡಿದ್ದರು. ದೂರುದಾರ ಮಂಡ್ಯ ಮೂಲದವನು. ಹುಟ್ಟಿ ಬೆಳೆದಿದ್ದು ನಮ್ಮ ಗ್ರಾಮದಲ್ಲೇ. ಆತ ಧರ್ಮಾಧಿಕಾರಿ ಬಗ್ಗೆ ಹೇಳುತ್ತಿರುವುದು ಸುಳ್ಳು ಎಂದಿದ್ದರು.

ಮೊದಲ ಪತ್ನಿಯೊಂದಿಗೆ ಧರ್ಮಸ್ಥಳದಲ್ಲಿದ್ದ ಮಾಸ್ಕ್‌ಮ್ಯಾನ್‌

ಮುಸುಕುಧಾರಿಯ ಮೊದಲ ಪತ್ನಿ ಇತ್ತೀಚೆಗೆ ಮಾಧ್ಯಮದ ಎದುರು ಬಂದು ಧರ್ಮಸ್ಥಳದಲ್ಲಿದ್ದಾಗ ಆತ ಹೇಳಿದಂತೆ ಯಾವುದೇ ಘಟನೆಗಳು ನಡೆದಿಲ್ಲ ಅಂತಾ ಸ್ಫೋಟಕ ಹೇಳಿಕೆ ನೀಡಿದ್ದರು. ಮಂಡ್ಯದವರೇ ಆದ ಇವರನ್ನ ಮದುವೆಯಾಗಿ 7 ವರ್ಷ ಸಂಸಾರ ಮಾಡಿದ್ದ. ಮದುವೆ ಬಳಿಕ ಧರ್ಮಸ್ಥಳದ ನೇತ್ರಾವತಿಯಲ್ಲಿ 7 ವರ್ಷ ಇದ್ದೆವು ಎಂದಿದ್ದರು.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

ಧರ್ಮಸ್ಥಳದಲ್ಲೇ ಈತನಿಗೆ ತಮಿಳುನಾಡು ಮೂಲದ ಮತ್ತೊಬ್ಬಳ ಜೊತೆಗೆ ಅಫೇರ್‌ ಶುರುವಾಗಿತ್ತಂತೆ ಆಕೆಯನ್ನ 2ನೇ ಮದುವೆ ಆಗಲು ಪತ್ನಿಗೆ ಚಿತ್ರಹಿಂಸೆ ಕೊಟ್ಟು ಮನೆಯಿಂದ ಓಡಿಸಿದ್ದಂತೆ. ಹಣಕ್ಕಾಗಿಯೇ ಈ ರೀತಿ ಮಾಡುತ್ತಿರಬಹುದು ಅಂತಾ ಮಾಸ್ಕ್‌ಮ್ಯಾನ್‌ ಮೊದಲ ಪತ್ನಿ ಆರೋಪಿಸಿದ್ದರು.

ಧರ್ಮಸ್ಥಳಕ್ಕೂ ಈತನಿಗೂ ಹೇಗೆ ಸಂಬಂಧ?

ಸದ್ಯ ಬಂಧಿತ ಮಾಸ್ಕ್‌ಮ್ಯಾನ್​​ ಮಂಡ್ಯ ಜಿಲ್ಲೆಯ ಹಲ್ಲೆಗೆರೆ ಪಂಚಾಯಿತಿಯಲ್ಲಿ ಕೆಲಸ ಮಾಡುತ್ತಿದ್ದ. ಬಳಿಕ ಇಟ್ಟಿಗೆ ಫ್ಯಾಕ್ಟರಿಯಲ್ಲೂ ಕೆಲಸ ಮಾಡಿಕೊಂಡಿದ್ದ. ಕಳೆದ 25 ವರ್ಷಗಳ ಹಿಂದೆ ಆತ ಧರ್ಮಸ್ಥಳಕ್ಕೆ ಹೋಗಿದ್ದ. ಅಲ್ಲಿ ಕಸಗುಡಿಸುವುದು, ಬಾತ್‌ರೂಂ ತೊಳೆಯುವ ಕೆಲಸ ಮಾಡಿಕೊಂಡಿದ್ದ. ಒಡವೆ ಕಳ್ಳತನ ಮಾಡಿದ್ದರಿಂದ ಆತನನ್ನ ಧರ್ಮಸ್ಥಳದಿಂದ ಕಳುಹಿಸಿದ್ದರು. ಬಳಿಕ ಐದಾರು ವರ್ಷಗಳ ಹಿಂದೆ ಮತ್ತೆ ಗ್ರಾಮಕ್ಕೆ ಬಂದು ಇದ್ದು ಹೋಗಿದ್ದ.

ತಮಿಳುನಾಡಿನಲ್ಲೂ ವಾಸ

ಸದ್ಯ ಎಸ್​ಐಟಿಯಿಂದ ಮಾಸ್ಕ್​ಮ್ಯಾನ್​ ಚಿನ್ನಯ್ಯನನ್ನು ಬಂಧಿಸಿ ವಿಚಾರಣೆ ಮಾಡಿದ್ದು, ಈ ವೇಳೆ ಎರಡು ವರ್ಷ ತಮಿಳುನಾಡಿನ ಈರೋಡ್​ನ ಚಿಕ್ಕರಸಿನಪಾಳ್ಯದಲ್ಲಿ ಇದಿದ್ದಾಗಿ ಹೇಳಿಕೆ ನೀಡಿದ್ದಾನೆ. ಬಳಿಕ ಮತ್ತೆ ಉಜಿರೆಗೆ ಬಂದು ಪಂಚಾಯತ್​ನ ಸಫಾಯಿ ಕರ್ಮಚಾರಿ ಕೆಲಸಕ್ಕೆ ಸೇರಿದ್ದ. ಅಲ್ಲಿ ಜಯಂತ್ ಟಿ ಪರಿಚಯ ಆದ ಬಗ್ಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.

ದೂರುದಾರ ಮಾಸ್ಕ್​ಮ್ಯಾನ್​ ​ನನ್ನು ಬಂಧಿಸಿದ್ದು ಹೇಗೆ?

ಪ್ರಕರಣದಲ್ಲಿ ಅನಾಮಿಕ ದೂರುದಾರನನ್ನು ಸಾಕ್ಷಿದಾರನನ್ನಾಗಿ ಪರಿಗಣಿಸಲಾಗಿತ್ತು. ಹೀಗಾಗಿ, ಸಾಕ್ಷ್ಯ ಸಂರಕ್ಷಣಾ ಕಾಯ್ದೆಯಡಿ ಆತನನ್ನು ರಕ್ಷಣೆ ಮಾಡಲಾಗುತ್ತಿತ್ತು. ಆದರೆ ಎಸ್​ಐಟಿ ಅಧಿಕಾರಿಗಳ ಸತತ ವಿಚಾರಣೆ ಈತನ ಬಂಡವಾಳ ಬಯಲು ಮಾಡಿದೆ. ಬಳಿಕ ಆತನನ್ನು ಬಂಧಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:08 pm, Sat, 23 August 25

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ