AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಬುರುಡೆ ಕೇಸ್​​ಗೆ ಮೇಜರ್​​ ಟ್ವಿಸ್ಟ್​​: SIT ತನಿಖೆಯಿಂದ ಕೊನೆಗೂ ಬಯಲಾಯ್ತು ಸತ್ಯ!

ಧರ್ಮಸ್ಥಳ 'ಬುರುಡೆ' ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಎಸ್​ಐಟಿ ತನಿಖೆಯಲ್ಲಿ  ಸತ್ಯ ಹೊರಬಂದಿದ್ದು, ಎಲ್ಲ ಮಾಹಿತಿಯನ್ನು ತನಿಖಾ ವರದಿ ಬಟಾಬಯಲು ಮಾಡಿದೆ. ಆ ಮೂಲಕ ಧರ್ಮಸ್ಥಳದಲ್ಲಿ ನೂರಾರು ಅಪರಿಚಿತ ಶವ ಹೂಳಲಾಗಿತ್ತು ಎಂಬ ಆರೋಪಕ್ಕೆ ಬಹುತೇಕ ತೆರೆ ಬಿದ್ದಿದ್ದು, ಆರೋಪಿಗಳ ಎದೆಯಲ್ಲಿ ನಡುಕ ಶುರುವಾಗಿದೆ.

ಧರ್ಮಸ್ಥಳ ಬುರುಡೆ ಕೇಸ್​​ಗೆ ಮೇಜರ್​​ ಟ್ವಿಸ್ಟ್​​: SIT ತನಿಖೆಯಿಂದ ಕೊನೆಗೂ ಬಯಲಾಯ್ತು ಸತ್ಯ!
ಶವಗಳಿಗಾಗಿ ನಡೆದಿದ್ದ ಶೋಧ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Dec 10, 2025 | 12:06 PM

Share

ಮಂಗಳೂರು, ಡಿಸೆಂಬರ್​​ 10: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರೋದಾಗಿ ಮಾಸ್ಕ್​​ಮ್ಯಾನ್​​ ಚಿನ್ನಯ್ಯ ಆರೋಪಿಸಿದ್ದ ಹಿನ್ನಲೆ ಎಸ್​ಐಟಿ ತನಿಖೆ ವೇಳೆ ಸ್ಫೋಟಕ ಮಾಹಿತಿ ಬಯಲಾಗಿದೆ. ಧರ್ಮಸ್ಥಳದ ವಿರುದ್ಧ ಬುರುಡೆ ಗ್ಯಾಂಗ್ ಷಡ್ಯಂತ್ರ ಪ್ರಾಥಮಿಕ ತನಿಖೆಯಲ್ಲಿ ಸಾಬೀತಾಗಿದೆ. ಚಿನ್ನಯ್ಯ, ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ವಿಠ್ಠಲ ಗೌಡ, ಟಿ. ಜಯಂತ್ ಹಾಗೂ ಸುಜಾತಾ ಭಟ್ ಸೇರಿ ಆರೂ ಆರೋಪಿಗಳು ಅಪರಾಧ ಕೃತ್ಯದಲ್ಲಿ ಶಾಮೀಲಾಗಿರುವ ಬಗ್ಗೆ ಎಸ್​ಐಟಿ ದೃಢಪಡಿಸಿದೆ.

ಹಣದ ಆಮಿಷಕ್ಕೆ ಒಳಗಾಗಿ ಎ೧ ಚಿನ್ನಯ್ಯ ಬುರುಡೆ ಕಥೆ ಕಟ್ಟಿದ್ದ. ಬುರುಡೆ ಗ್ಯಾಂಗ್ ಚಿನ್ನಯ್ಯನಿಗೆ ಹಣ ಕೊಟ್ಟು ಪುಸಲಾಯಿಸಿತ್ತು. ಅಪರಿಚಿತ ಶವಗಳನ್ನು ಹೂತಿದ್ದೇನೆಂದು ಚಿನ್ನಯ್ಯನಿಂದ ಸುಳ್ಳು ಹೇಳಿಸಿ ವಿಡಿಯೋ ರೆಕಾರ್ಡ್ ಮಾಡಿಕೊಳ್ಳಲಾಗಿತ್ತು. ಚಿನ್ನಯ್ಯನಿಗೆ ಮೊದಲಿಂದ ಪರಿಚಿತನಾಗಿದ್ದ ವಿಠ್ಠಲಗೌಡ ಮಹೇಶ್ ತಿಮರೋಡಿ ಮನೆಗೆ ಆತನನ್ನು ಕರೆದೊಯ್ದಿದ್ದ. ತಿಮರೋಡಿ ಮನೆಯಲ್ಲಿ ನಡೆದಿದ್ದ ಸಭೆಯಲ್ಲಿ ಮಟ್ಟಣ್ಣನವರ್, ಜಯಂತ್, ವಿಠ್ಠಲಗೌಡ ಭಾಗಿಯಾಗಿದ್ದು, ಧರ್ಮಸ್ಥಳ ಮೇಲ್ವಿಚಾರಕರ ವಿರುದ್ಧ ಪಿತೂರಿಗೆ ಪ್ಲ್ಯಾನ್ ನಡೆದಿತ್ತು. ಅದರಂತೆ ತಲೆ ಬುರುಡೆಯೊಂದನ್ನು ಚಿನ್ನಯ್ಯನಿಗೆ ಕೊಟ್ಟು ಪೊಲೀಸರಿಗೆ ದೂರು ಕೊಡಿಸಿದ್ದರು. ನ್ಯಾಯಾಧೀಶರ ಮುಂದೆ ಚಿನ್ನಯ್ಯ ಹೇಳಿಕೆ ಕೊಡುವಂತೆ ಪ್ರೇರೇಪಿಸಿದ್ದರು.

ಇದನ್ನೂ ಓದಿ: ಮಾಸ್ಕ್​ಮ್ಯಾನ್ ಚಿನ್ನಯ್ಯ, ಪ್ರಭಾವಿ ಸ್ವಾಮೀಜಿ ನಡುವಣ ಮೀಟಿಂಗ್ ರಹಸ್ಯ ಬಿಚ್ಚಿಟ್ಟ ಮಹೇಶ್ ಶೆಟ್ಟಿ ತಿಮರೋಡಿ

ಧರ್ಮಸ್ಥಳ ಪ್ರಕರಣ ಸಂಬಂಧ ಇತ್ತೀಚೆಗೆ ಸ್ವಾಮೀಜಿ ಒಬ್ಬರ ಹೆಸರನ್ನು ಮಹೇಶ್​​ ಶೆಟ್ಟಿ ತಿಮರೋಡಿ ಉಲ್ಲೇಖಿಸಿದ್ದರು. ನಾನು ಮತ್ತು ಚಿನ್ನಯ್ಯ ಆ ಮಠಕ್ಕೆ ಹೋಗಿರುವುದು ಸತ್ಯ. ನಮ್ಮ ಜೊತೆಗೆ ಸೌಜನ್ಯ ಮನೆಯವರೂ ಬಂದಿದ್ದರು. ಆ ವೇಳೆ ಸ್ವಾಮೀಜಿ ಮುಂದೆ ಒಂದೂವರೆ ಗಂಟೆಗಳ ಕಾಲ ಚಿನ್ನಯ್ಯ ಎಲ್ಲವನ್ನೂ ಹೇಳಿದ್ದಾನೆ. ಯಾರೆಲ್ಲ ಅತ್ಯಾಚಾರ ಎಸಗಿದ್ದಾರೆ, ಮಾಡಿಸಿದ್ದಾರೆ ಎಂಬುದನ್ನು ಆತ ಬಹಿರಂಗಪಡಿಸಿದ್ದ ಎಂದು ತಿಳಿಸಿದ್ದರು. ಮತ್ತೊಂದೆಡೆ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಕೋರ್ಟ್​​ ಜಾಮೀನು ನೀಡಿದರೂ ಬಿಡುಗಡೆ ಭಾಗ್ಯಮಾತ್ರ ಸಿಕ್ಕಿಲ್ಲ. ನವೆಂಬರ್​ 26ರಂದು ಚಿನ್ನಯ್ಯಗೆ ನ್ಯಾಯಾಲಯದಿಂದ ಜಾಮೀನು ಮಂಜೂರು ಆಗಿತ್ತು. ಇಬ್ಬರು ಜಾಮೀನುದಾರರು, 1 ಲಕ್ಷ ಭದ್ರತೆ ಬಾಂಡ್ ನೀಡಲು ಕೋರ್ಟ್​​ ಆದೇಶಿಸಿತ್ತು. ಆದರೆ, ಯಾರೂ ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆ ಇನ್ನೂ ಶಿವಮೊಗ್ಗದ ಜೈಲಿನಲ್ಲಿಯೇ ಚಿನ್ನಯ್ಯ ಇರುವಂತಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:04 pm, Wed, 10 December 25

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!