ಧರ್ಮಸ್ಥಳ ಕೇಸ್: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ 3 ತಲವಾರು ಪತ್ತೆ,

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ಮಾಸ್ಕ್​ ಮ್ಯಾನ್ ಚಿನ್ನಯ್ಯಗೆ ಪೂರ್ವಪರ ಕೆದಕಿದ ಎಸ್ಐಟಿ, ಆತನ ಹೇಳಿಕೆ ಆಧರಿಸಿ ಮಹೇಶ್ ತಿಮರೋಡಿ ಮನೆ ಮೇಲೆ ದಾಳಿ ಮಾಡಿದೆ. ಮಾಸ್ಕ್‌ಮ್ಯಾನ್ ಸಮ್ಮುಖದಲ್ಲಿ ಮಹಜರು ನಡೆಸಿ ಹಲವು ವಸ್ತುಗಳನ್ನ ಸೀಜ್ ಮಾಡಿದ್ದಾರೆ. ಇನ್ನು ಈ ವೇಳೆ ಮೂರು ತಲವಾರುಗಳುನ ಪತ್ತೆಯಾಗಿವೆ.

ಧರ್ಮಸ್ಥಳ ಕೇಸ್: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ  3 ತಲವಾರು ಪತ್ತೆ,
Mahesh Thimarodi
Edited By:

Updated on: Aug 27, 2025 | 2:39 PM

ಮಂಗಳೂರು, (ಆಗಸ್ಟ್ 27): ಧರ್ಮಸ್ಥಳದಲ್ಲಿ (Dharmasthala mass burials case) ಮಾಸ್ಕ್‌ಮ್ಯಾನ್ ಚಿನ್ನಯ್ಯ ಬಿಟ್ಟ ಬುರುಡೆ ಕೇಸ್‌ನ ಬಂಡವಾಳ ಬಗೆದಷ್ಟು ಬಯಲಾಗುತ್ತಿದೆ. ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡಲು ಹಿಂದೂಗಳ ನಂಬಿಕೆ ಘಾಸಿಗೊಳಿಸಲು ಮಾಡಿದ ಪ್ರಯತ್ನಗಳು ಹೊರಬಂದಿದೆ. ಶವ ಹೂತಿಟ್ಟ ಉತ್ಖನನ ಕಾರ್ಯದಿಂದ ಇದೀಗ ದೂರುದಾರ, ಆರೋಪ ಮಾಡಿದವವರ ಮೇಲೆ ತನಿಖೆ ನಡೆಯುತ್ತಿದೆ. ಅರೆಸ್ಟ್ ಆಗಿರುವ ಚಿನ್ನಯ್ಯ ನೀಡಿದ ಮಾಹಿತಿ ಹಿನ್ನಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ (mahesh thimarodi) ಮನೆ ಮೇಲೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇಷ್ಟೇ ಅಲ್ಲ ಮಹೇಶ್ ಶೆಟ್ಟಿ ತಿಮರೋಡಿ ಮನೆಯಿಂದ ಮೂರು ತಲವಾರು ವಶಕ್ಕೆ ಪಡೆಯಲಾಗಿದೆ.

ನಿನ್ನೆ (ಆ.26) ತಡ ರಾತ್ರಿವರೆಗೂ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಜಾಲಾಡಿದ್ದಾರೆ. ಎಲ್ಲಾ ದಾಖಲೆಗಳನ್ನು ವಶಕ್ಕೆ ಪಡೆದು ರಿಪೋರ್ಟ್ ತಯಾರಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಪತ್ತೆಯಾದ ಮೂರು ತಲವಾರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ದಾಳಿ ಮಾಡುವ ಮೊದಲೇ ಮಹೇಶ್ ಶೆಟ್ಟಿ ಮನೆಯಿಂದ ತೆರಳಿದ್ದರು. ದಾಳಿ ವೇಳೆ ತಿಮರೋಡಿ ಮನೆಯಲ್ಲಿ ಇರಲಿಲ್ಲ. ಇತ್ತ ಮನೆ, ತೋಟ ಸೇರಿದಂತೆ ಎಲ್ಲಾ ಕಡೆ ಪರಿಶೋಧನೆ ನಡೆಸಿದ ಎಸ್ಐಟಿ ಅಧಿಕಾರಿಗಳು ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಮಹೇಶ್ ಶೆಟ್ಟಿ ಪತ್ನಿ, ಮಗ ಹಾಗೂ ಮಗಳ ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25 ವಿಡಿಯೋ ಮಾಡಿಟ್ಟುಕೊಂಡಿದ್ದ ‘ಬುರುಡೆ’ ಗ್ಯಾಂಗ್: ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ

ಮಹೇಶ್ ಶೆಟ್ಟಿ ಮನೆಯಲ್ಲಿ ಉಳಿದುಕೊಂಡಿದ್ದ ಚಿನ್ನಯ ತನ್ನ ಎರಡೂ ಮೊಬೈಲ್ ಅಲ್ಲೆ ಇಟ್ಟಿದ್ದ. ವಿಚಾರಣೆ ವೇಳೆ ತನ್ನ ಬಳಿ ಮೊಬೈಲ್ ಇಲ್ಲ ಎಂದಿದ್ದ. ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧ ವೇಳೆ ಚಿನ್ನಯ್ಯನ ಎರಡು ಮೊಬೈಲ್ ಪತ್ತೆಯಾಗಿವೆ. ಒಂದು ಕೀಪ್ಯಾಡ್ ಮೊಬೈಲ್ ಮತ್ತೊಂದು ಆ್ಯಂಡ್ರಾಯ್ಡ್ ಮೊಬೈಲ್. ಆರಂಭದಲ್ಲಿ ಕೀ ಪ್ಯಾಡ್ ಮೊಬೈಲ್ ಬಳಸುತ್ತಿದ್ದ ಚಿನ್ನಯ್ಯ, ಬಳಿಕ ಆ್ಯಂಡ್ರಾಯ್ಡ್ ಮೊಬೈಲ್ ಫೋನ್ ಬಳಸಲು ಆರಂಭಿಸಿದ್ದ. ಕಳೆದ ಕೆಲ ತಿಂಗಳುಗಳಿಂದ ಆ್ಯಂಡ್ರಾಯ್ಡ್ ಫೋನ್ ಬಳಕೆ ಮಾಡುತ್ತಿದ್ದ. ಇದರ ಜೊತೆಗೆ ಚಿನ್ನಯ್ಯನ ಲಗೇಜ್ ಬ್ಯಾಗ್, ಬೆನ್ನ ಹಿಂದೆ ಹಾಕುವ ಬ್ಯಾಗ್, ಬಟ್ಟೆ ಸೇರಿದಂತೆ ಕೆಲ ದಾಖಲೆಯನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಚಿನ್ನಯ್ಯ ಬಳಸುತ್ತಿದ್ದ ಆಂಡ್ರಾಯ್ಡ್‌ ಮೊಬೈಲ್, ಸಿಸಿಕ್ಯಾಮರಾ ಹಾರ್ಡ್‌ಡಿಸ್ಕ್, ಮಹತ್ವದ ದಾಖಲೆಗಳು, ಚಿನ್ನಯ್ಯನ ಬಟ್ಟೆ ಬ್ಯಾಗ್ ವಶಪಡಿಸಿಕೊಳ್ಳಲಾಗಿದೆ. ಮಾಸ್ಕ್‌ಮ್ಯಾನ್‌ನ ಐಡಿಕಾರ್ಡ್ ಸೇರಿ ಎಲ್ಲ ವಸ್ತುಗಳ ವಿವರ ಬರೆದಿರೋ ಅಧಿಕಾರಿಗಳು, FSLಗೆ ಕಳುಹಿಸಲಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ