ಧರ್ಮಸ್ಥಳ ಮಂಜುನಾಥಸ್ವಾಮಿ ಸನ್ನಿಧಿಯಲ್ಲಿ ಸಪ್ತಪದಿ ತುಳಿಯಲಿರುವ 201 ಜೋಡಿಗಳು: ಶುಭ ಮಸ್ತು

ಧರ್ಮಸ್ಥಳದಲ್ಲಿ ನಡೆಯುತ್ತಿರುವ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 201 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ಧರ್ಮಸ್ಥಳ ಮಂಜುನಾಥಸ್ವಾಮಿ ಸನ್ನಿಧಿಯಲ್ಲಿ ಸಪ್ತಪದಿ ತುಳಿಯಲಿರುವ 201 ಜೋಡಿಗಳು: ಶುಭ ಮಸ್ತು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: May 02, 2023 | 3:23 PM

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮೇ 3ರ ಬುಧವಾರ ಸಂಜೆ 6.40ರ ಗೋಧೂಳಿ ಲಗ್ನದಲ್ಲಿ 201 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಪತ್ನಿ ಹೇಮಾವತಿ ಹೆಗ್ಗಡೆ ಅವರು ಜೋಡಿಗಳಿಗೆ ಮಂಗಳಸೂತ್ರ ವಿತರಿಸಲಿದ್ದಾರೆ.

ಮೇ 3ರಂದು ಸಂಜೆ 5ರಿಂದ ವಧೂ-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ವಿವಾಹ ನೆರವೇರಲಿರುವ ಅಮೃತವರ್ಷಿಣಿ ಸಭಾ ಮಂಟಪಕ್ಕೆ ಭವ್ಯ ಮೆರವಣಿಗೆಯಲ್ಲಿ ಸಾಗುವರು. ಬಳಿಕ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಪತ್ನಿ ಹೇಮಾವತಿ ಹೆಗ್ಗಡೆ ಅವರು ಜೋಡಿಗಳಿಗೆ ಮಂಗಳಸೂತ್ರ ವಿತರಿಸುತ್ತಾರೆ. ವಿವಾಹ ಸಮಾರಂಭ ಅವರವರ ಜಾತಿ ಸಂಪ್ರದಾಯದಂತೆ ನೆರವೇರಲಿದೆ. ಬಳಿಕ ಅನ್ನಪೂರ್ಣ ಭೋಜನಾಲಯದಲ್ಲಿ ಭೋಜನ ಇರಲಿದೆ.

ಕಾರ್ಯಕ್ರಮದ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಭರಿಸಲಿದೆ. ಇಂದು ಎಲ್ಲರ ದಾಖಲೆಗಳನ್ನು ಪರಿಶೀಲಿಸಿ ಟ್ರಸ್ಟ್ ಕಡೆಯಿಂದ ವರನಿಗೆ ಧೋತಿ ಮತ್ತು ಶಾಲು ನೀಡಲಾಗುತ್ತೆ. ಹಾಗೂ ವಧುವಿಗೆ ಸೀರೆ, ಕುಪ್ಪಸ ಹಾಗೂ ಮಂಗಳಸೂತ್ರ ನೀಡಲಾಗುವುದು. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ವರದಕ್ಷಿಣೆ ಮತ್ತು ಮದುವೆಯ ಮೇಲಿನ ಅನಗತ್ಯ ವೆಚ್ಚಗಳನ್ನು ತಡೆಯಲು ಈ ಯೋಜನೆಯನ್ನು ಜಾರಿಗೆ ತಂದರು. ಈ ಯೋಜನೆಯಡಿ ಇಲ್ಲಿಯವರೆಗೆ 12,576 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಪ್ರತಿ ವರ್ಷ ಈ ಕಾರ್ಯಕ್ರಮ ನಡೆಯುತ್ತದೆ.

ಮಂಗಳೂರಿಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸಿದ್ದರಾಮಯ್ಯ ಸರ್ಕಾರಕ್ಕೆ ಹಿಂದೂಗಳನ್ನು ಕಂಡರಾಗಲ್ಲ, ಅಲರ್ಜಿ: ಅಶೋಕ
ಸಿದ್ದರಾಮಯ್ಯ ಸರ್ಕಾರಕ್ಕೆ ಹಿಂದೂಗಳನ್ನು ಕಂಡರಾಗಲ್ಲ, ಅಲರ್ಜಿ: ಅಶೋಕ
ಬಾಯ್ಮುಚ್ಚಿಕೊಂಡಿರುವಂತೆ ಬಸನಗೌಡ ಯತ್ನಾಳ್​ರನ್ನು ಎಚ್ಚರಿಸಿದ ರೇಣುಕಾಚಾರ್ಯ
ಬಾಯ್ಮುಚ್ಚಿಕೊಂಡಿರುವಂತೆ ಬಸನಗೌಡ ಯತ್ನಾಳ್​ರನ್ನು ಎಚ್ಚರಿಸಿದ ರೇಣುಕಾಚಾರ್ಯ
ಅಂಗವಿಕಲರ ಅನುದಾನ ಗ್ಯಾರಂಟಿಗಳಿಗೆ ಬಳಕೆ: ಸರ್ಕಾರದ ವಿರುದ್ಧ ಮತ್ತೊಂದು ಆರೋಪ
ಅಂಗವಿಕಲರ ಅನುದಾನ ಗ್ಯಾರಂಟಿಗಳಿಗೆ ಬಳಕೆ: ಸರ್ಕಾರದ ವಿರುದ್ಧ ಮತ್ತೊಂದು ಆರೋಪ
ಮಂಜು ವಿರುದ್ಧ ತಂತ್ರ ರೂಪಿಸಿದ ರಜತ್, ತ್ರಿವಿಕ್ರಮ್; ಸಾಥ್ ಕೊಟ್ಟ ಭವ್ಯಾ
ಮಂಜು ವಿರುದ್ಧ ತಂತ್ರ ರೂಪಿಸಿದ ರಜತ್, ತ್ರಿವಿಕ್ರಮ್; ಸಾಥ್ ಕೊಟ್ಟ ಭವ್ಯಾ
ಸಾಲ ಸಿಗದಿದ್ದರೆ ರೈತ ಸಂಕಷ್ಟ ಮತ್ತು ಶೋಷಣೆಗೆ ಒಳಗಾಗುತ್ತಾನೆ: ಸಿದ್ದರಾಮಯ್ಯ
ಸಾಲ ಸಿಗದಿದ್ದರೆ ರೈತ ಸಂಕಷ್ಟ ಮತ್ತು ಶೋಷಣೆಗೆ ಒಳಗಾಗುತ್ತಾನೆ: ಸಿದ್ದರಾಮಯ್ಯ
ಹಾಸನ ಸಮಾವೇಶಕ್ಕೆ ಅಪಸ್ವರ ಎತ್ತಿದವರಿಗೆ ಹೈಕಮಾಂಡ್​ ಅಂಗಳದಿಂದಲೇ ಸ್ಪಷ್ಟನೆ
ಹಾಸನ ಸಮಾವೇಶಕ್ಕೆ ಅಪಸ್ವರ ಎತ್ತಿದವರಿಗೆ ಹೈಕಮಾಂಡ್​ ಅಂಗಳದಿಂದಲೇ ಸ್ಪಷ್ಟನೆ
ಕಾಂಗ್ರೆಸ್ ಸೇರುವಾಗ ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿರಲಿಲ್ಲ: ಯೋಗೇಶ್ವರ್
ಕಾಂಗ್ರೆಸ್ ಸೇರುವಾಗ ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿರಲಿಲ್ಲ: ಯೋಗೇಶ್ವರ್
ಜೈಲಿನಲ್ಲಿ ಕಣ್ಣೀರು ಹಾಕಿದ ಶೋಭಾ ಶೆಟ್ಟಿ, ಮನೆ ಮಂದಿಯ ಟಾರ್ಗೆಟ್ ಆದರೆ?
ಜೈಲಿನಲ್ಲಿ ಕಣ್ಣೀರು ಹಾಕಿದ ಶೋಭಾ ಶೆಟ್ಟಿ, ಮನೆ ಮಂದಿಯ ಟಾರ್ಗೆಟ್ ಆದರೆ?
ಒಂದೇ ಓವರ್​ನಲ್ಲಿ 28 ರನ್ ಚಚ್ಚಿದ ಹಾರ್ದಿಕ್ ಪಾಂಡ್ಯ; ವಿಡಿಯೋ ನೋಡಿ
ಒಂದೇ ಓವರ್​ನಲ್ಲಿ 28 ರನ್ ಚಚ್ಚಿದ ಹಾರ್ದಿಕ್ ಪಾಂಡ್ಯ; ವಿಡಿಯೋ ನೋಡಿ
ಎಲ್ಲ ಪಕ್ಷಗಳಂತೆ ಕಾಂಗ್ರೆಸ್​ನಲ್ಲೂ ಭಿನ್ನಮತವಿದೆ: ಸತೀಶ್ ಜಾರಕಿಹೊಳಿ
ಎಲ್ಲ ಪಕ್ಷಗಳಂತೆ ಕಾಂಗ್ರೆಸ್​ನಲ್ಲೂ ಭಿನ್ನಮತವಿದೆ: ಸತೀಶ್ ಜಾರಕಿಹೊಳಿ