AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸ್ಫೋಟಕ ತಿರುವು: 30 ಮೃತದೇಹಗಳ ದಾಖಲೆಯಲ್ಲಿ ಭಾರೀ ವ್ಯತ್ಯಾಸ; ಸರ್ಕಾರಕ್ಕೆ ಮಹಿಳಾ ಆಯೋಗ ಪತ್ರ

ಎಸ್​​ಐಟಿಯೂ ಬೆಳ್ತಂಗಡಿ ಧರ್ಮಸ್ಥಳದಲ್ಲಿ ಅಸ್ವಾಭಾವಿಕ ಸಾವುಗಳ ತನಿಖೆಯನ್ನು ನಡೆಸಿ, ಸರ್ಕಾರಕ್ಕೆ ವರದಿಯೊಂದಿಯನ್ನು ನೀಡಿದೆ. ಆದರೆ ಈ ವರದಿಯಲ್ಲಿ ಸ್ಫೋಟಕ ಮಾಹಿತಿಯೊಂದನ್ನು ನೀಡಿದೆ. ಪೊಲೀಸ್ ಮತ್ತು ಪಂಚಾಯತ್ ದಾಖಲೆಗಳಲ್ಲಿ 30 ಮೃತದೇಹಗಳ ವ್ಯತ್ಯಾಸ ಕಂಡು ಬಂದಿದೆ. 1998-2014ರ ಅವಧಿಯ ಈ ವ್ಯತ್ಯಾಸ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿರುವ ಕಾರಣ ಮಹಿಳಾ ಆಯೋಗವು ಈ ಸ್ಫೋಟಕ ವರದಿಯ ನಂತರ, ಎಸ್​​ಐಟಿ ವ್ಯಾಪ್ತಿಯನ್ನು ವಿಸ್ತರಿಸಲು ಮತ್ತು ಮೂಲ ದಾಖಲೆಗಳನ್ನು ರಕ್ಷಿಸಲು ಸರ್ಕಾರಕ್ಕೆ ಪತ್ರ ಬರೆದಿದೆ.

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸ್ಫೋಟಕ ತಿರುವು: 30 ಮೃತದೇಹಗಳ ದಾಖಲೆಯಲ್ಲಿ ಭಾರೀ ವ್ಯತ್ಯಾಸ; ಸರ್ಕಾರಕ್ಕೆ ಮಹಿಳಾ ಆಯೋಗ ಪತ್ರ
ಧರ್ಮಸ್ಥಳ ದಾಖಲೆ ವ್ಯತ್ಯಾಸ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Sep 30, 2026 | 1:01 PM

Share

ಮುಖ್ಯಾಂಶಗಳು

  • ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಇದೀಗ ಸ್ಫೋಟಕ ಮಾಹಿತಿ
  • SIT ಸರ್ಕಾರಕ್ಕೆ ಅತ್ಯಂತ ಆಘಾತಕಾರಿ ವರದಿಯೊಂದನ್ನು ಸಲ್ಲಿಸಿದೆ
  • ಮಹಿಳಾ ಆಯೋಗ ಕೂಡ ಒಂದು ಮಹತ್ವ ಪತ್ರವನ್ನು ಸರ್ಕಾರಕ್ಕೆ ಬರೆದಿದೆ

ಬೆಳ್ತಂಗಡಿ, ಸೆ.30: ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಮಂಗಳೂರಿನ ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಇದೀಗ ಸ್ಫೋಟಕ ಮಾಹಿತಿಯೊಂದು ಸಿಕ್ಕಿದೆ. ಈ ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡ (SIT) ಸರ್ಕಾರಕ್ಕೆ ಅತ್ಯಂತ ಆಘಾತಕಾರಿ ವರದಿಯೊಂದನ್ನು ಸಲ್ಲಿಸಿದೆ. ಧರ್ಮಸ್ಥಳ ಗ್ರಾಮದಲ್ಲಿ ದಾಖಲಾಗಿರುವ ಅಸ್ವಾಭಾವಿಕ ಸಾವು ಪ್ರಕರಣಗಳ ದಾಖಲೆಗಳಲ್ಲಿ ಭಾರಿ ವ್ಯತ್ಯಾಸಗಳು ಇರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಎಸ್‌ಐಟಿ ಸಲ್ಲಿಸಿರುವ ಪ್ರಾಥಮಿಕ ವರದಿಯ ಪ್ರಕಾರ, 1998 ರಿಂದ 2014ರವರೆಗಿನ (16 ವರ್ಷಗಳ ಕಾಲಾವಧಿ) ಯುಡಿಆರ್ ಪ್ರಕರಣಗಳನ್ನು ಕೂಲಂಕುಷವಾಗಿ ಪರಿಶೀಲಿಸಿದಾಗ ಧರ್ಮಸ್ಥಳ ಗ್ರಾಮ ಪಂಚಾಯತ್ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯ ದಾಖಲೆಗಳಲ್ಲಿ ಭಾರಿ ವ್ಯತ್ಯಾಸ ಪತ್ತೆಯಾಗಿರುವ ಬಗ್ಗೆ  ವರದಿಯನ್ನು ಸಲ್ಲಿಸಿದೆ.  ಈ  ವಿಚಾರವಾಗಿ ಮಹಿಳಾ ಆಯೋಗವು ಸರ್ಕಾರಕ್ಕೆ ವಿಸ್ತಾರವಾಗಿ ಪತ್ರ ಬರೆದಿದೆ.

ಧರ್ಮಸ್ಥಳ ಗ್ರಾಮ ಪಂಚಾಯತ್ ದಾಖಲೆಗಳ ಪ್ರಕಾರ, ಪಂಚಾಯತ್ ವ್ಯಾಪ್ತಿಯಲ್ಲಿ ದಫನ ಮಾಡಲಾದ ಒಟ್ಟು ಮೃತದೇಹಗಳ ಸಂಖ್ಯೆ 1,510. ಆದರೆ ಧರ್ಮಸ್ಥಳ ಪೊಲೀಸ್ ಠಾಣೆ ದಾಖಲೆ ಪ್ರಕಾರ, ಪೊಲೀಸ್ ಠಾಣೆಯ ಅಧಿಕೃತ ರಿಜಿಸ್ಟರ್‌ನಲ್ಲಿ ದಾಖಲಾಗಿರುವ ಯುಡಿಆರ್ ಪ್ರಕರಣಗಳ ಸಂಖ್ಯೆ 1,480. ಪಂಚಾಯತ್ ದಾಖಲೆಯಲ್ಲಿ 1,510 ತೋರಿಸಿದ್ರೆ, ಪೊಲೀಸ್​​ ಠಾಣೆ ದಾಖಲೆಯಲ್ಲಿ 1,480 ತೋರಿಸುತ್ತಿರುವ ಭಾರೀ ಅನುಮಾನಕ್ಕೆ ಕಾರಣವಾಗಿದೆ ಎಂದು ಮಹಿಳಾ ಆಯೋಗವು ಹೇಳಿದೆ.

ಪಂಚಾಯತ್ ದಫನ ಮಾಡಿದ ಉಳಿದ 30 ಮೃತದೇಹಗಳ ಕುರಿತು ಪೊಲೀಸ್ ಠಾಣೆಯ ದಾಖಲೆಗಳಲ್ಲಿ ಯಾವುದೇ ಮಾಹಿತಿಯಿಲ್ಲ. ಈ 30 ಮೃತದೇಹಗಳ ದಾಖಲೆಗಳು ಎಲ್ಲಿ ಹೋದವು ಮತ್ತು ಅವು ಯಾರದ್ದು ಎಂಬ ಪ್ರಶ್ನೆ ತನಿಖಾ ಸಂಸ್ಥೆಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಇದನ್ನೂ ಓದಿ: ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ: ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ

ಈ ಸ್ಫೋಟಕ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಪ್ರಕರಣದ ವರದಿ ತರಿಸಿಕೊಂಡು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸುದೀರ್ಘ ಪತ್ರ ಬರೆದಿದೆ. ತನಿಖೆಯ ಕಾನೂನುಬದ್ಧತೆ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳಲು ಆಯೋಗ ಹಲವು ಪ್ರಮುಖ ನಿರ್ದೇಶನಗಳನ್ನು ನೀಡಿದೆ. ತನಿಖೆ ವೇಳೆ ಹೊಸದಾಗಿ ಪತ್ತೆಯಾಗಿರುವ ಈ 30 ಮೃತದೇಹಗಳ ವ್ಯತ್ಯಾಸದ ಸಂಗತಿಗಳು ಸ್ವಯಂಚಾಲಿತವಾಗಿ ಎಸ್‌ಐಟಿ ತನಿಖಾ ವ್ಯಾಪ್ತಿಗೆ ಒಳಪಡುವುದಿಲ್ಲ. ಆದ್ದರಿಂದ ರಾಜ್ಯ ಸರ್ಕಾರ ತಕ್ಷಣವೇ ಅಧಿಕೃತ ಆದೇಶ ಹೊರಡಿಸಿ, ಎಸ್‌ಐಟಿ ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಬೇಕು ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಮೂಲ ದಾಖಲೆಗಳು, ಪೊಲೀಸ್ ರಿಜಿಸ್ಟರ್‌ಗಳು, ಗ್ರಾಮ ಪಂಚಾಯತ್ ಮರಣ ನೋಂದಣಿ ಪುಸ್ತಕಗಳು ಹಾಗೂ ವೈದ್ಯಕೀಯ ವರದಿಗಳು ದುರುಪಯೋಗವಾಗದಂತೆ ಸುರಕ್ಷಿತವಾಗಿಡಲು ಆಡಳಿತಾತ್ಮಕ ನಿರ್ದೇಶನ ನೀಡಬೇಕು ಎಂದು ಮಹಿಳಾ ಆಯೋಗ ಹೇಳಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:00 pm, Wed, 30 September 26

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More