AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಕೇರಳ ಕಮ್ಯೂನಿಸ್ಟ್ ಸಂಸದ ಸಂತೋಷ್ ಕುಮಾರ್​ಗೆ ಎದುರಾಯ್ತು ಸಂಕಷ್ಟ

ಧರ್ಮಸ್ಥಳದ ‘ತಲೆಬುರುಡೆ’ ಪ್ರಕರಣದಲ್ಲಿ ಆಘಾತಕಾರಿ ಬೆಳವಣಿಗೆಗಳು ನಡೆದಿರುವುದು ಬೆಳಕಿಗೆ ಬಂದಿದೆ. ಆರೋಪಿ ಚಿನ್ನಯ್ಯ ಹಾಗೂ ಇತರರು ತಲೆಬುರುಡೆಯನ್ನು ಕೇರಳದ ಕಮ್ಯೂನಿಸ್ಟ್ ಸಂಸದರಿಗೆ ತೋರಿಸಿದ್ದರು ಎಂಬುದು ಬಹಿರಂಗಗೊಂಡಿದೆ. ಈ ಪ್ರಕರಣದಲ್ಲಿ ಈವರೆಗೆ ಒಟ್ಟು 11 ಸೆಕ್ಷನ್​​ಗಳ ಅಡಿ ಎಸ್​ಐಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ವಿವರಗಳು ಇಲ್ಲಿವೆ.

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಕೇರಳ ಕಮ್ಯೂನಿಸ್ಟ್ ಸಂಸದ ಸಂತೋಷ್ ಕುಮಾರ್​ಗೆ ಎದುರಾಯ್ತು ಸಂಕಷ್ಟ
ಧರ್ಮಸ್ಥಳ ಬುರುಡೆ ಪ್ರಕರಣ (ಸಾಂದರ್ಭಿಕ ಚಿತ್ರ)
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Sep 06, 2025 | 10:53 AM

Share

ಮಂಗಳೂರು, ಸೆಪ್ಟೆಂಬರ್ 6: ಧರ್ಮಸ್ಥಳದಲ್ಲಿ (Dharmasthala Case) ನೂರಾರು ಶವಗಳನ್ನು ಹೂತಿದ್ದೆ ಎಂದು ಮಾಸ್ಕ್​ಮ್ಯಾನ್ ಚಿನ್ನಯ್ಯ ತಂದಿದ್ದ ತಲೆಬುರುಡೆ ಪ್ರಕರಣದಲ್ಲಿ ಇದೀಗ ಕೇರಳದ ಕಮ್ಯೂನಿಸ್ಟ್ (CPI) ಸಂಸದ ಸಂತೋಷ್ ಕುಮಾರ್​ಗೆ (Santosh Kumar) ಸಂಕಷ್ಟ ಎದುರಾಗಿದೆ. ತಲೆಬುರುಡೆಯನ್ನು ತೆಗೆದುಕೊಂಡು ಆರೋಪಿ ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ ಕೇರಳದ ಸಂಸದನ ಬಳಿ ತೆರಳಿ ಅವರ ಮುಂದೆ ವಿಚಾರ ಪ್ರಸ್ತಾಪಿಸಿತ್ತು ಎಂಬ ಸ್ಫೋಟಕ ಮಾಹಿತಿ ಎಸ್​​ಐಟಿ ತನಿಖೆ ವೇಳೆ ತಿಳಿದು ಬಂದಿರುವುದಾಗಿ ಮೂಲಗಳು ತಿಳಿಸಿವೆ. ಇದರೊಂದಿಗೆ ಪ್ರಕರಣಕ್ಕೆ ಇದೀಗ ಮತ್ತೊಂದು ತಿರುವು ದೊರೆತಂತಾಗಿದೆ.

ಏತನ್ಮಧ್ಯೆ, ತಲೆಬುರುಡೆಯನ್ನು ಕೊಟ್ಟಿದ್ದು ಜಯಂತ್. ತಾನು ಅದನ್ನು ಧರ್ಮಸ್ಥಳದಿಂದ ತಂದೇ ಇಲ್ಲವೆಂದು ಚೆನ್ನಯ್ಯ ಎಸ್​ಐಟಿ ಮುಂದೆ ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ಆದರೆ, ಜಯಂತ್ ಮಾತ್ರ ಬುರುಡೆಯನ್ನು ಗಿರೀಶ್ ಮಟ್ಟಣ್ಣನವರ್ ಕೊಟ್ಟಿದ್ದು ಎಂದಿದ್ದಾರೆ. ಮಟ್ಟಣನವರ್ ನಿರಾಕರಿಸಿದ್ದಾರೆ. ಈ ಎಲ್ಲ ಬೆಳವಣಿಗೆ ಮಧ್ಯೆ ಕೇರಳ ಸಂಸದನ ಹೆಸರು ಪ್ರಕರಣದಲ್ಲಿ ತಳಕುಹಾಕಿಕೊಂಡಿದೆ.

11 ಸೆಕ್ಷನ್ ಗಳ ಅಡಿ ಪ್ರಕರಣ ದಾಖಲಿಸಿ ತನಿಖೆ

ತಲೆಬುರುಡೆ ಪ್ರಕರಣ ಹಾಗೂ ಒಟ್ಟಾರೆ ಧರ್ಮಸ್ಥಳ ಪ್ರಕರಣವನ್ನು ಎಸ್​ಐಟಿ ಪೊಲೀಸರು ಈವರೆಗೆ ಒಟ್ಟು 11 ಸೆಕ್ಷನ್​ಗಳ ಅಡಿ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈವರೆಗಿನ ತನಿಖೆಯಲ್ಲಿ ಬೆಳಕಿಗೆ ಬಂದ ವಿಚಾರಗಳನ್ನು ಆಧರಿಸಿ ಸೆಕ್ಷನ್​ಗಳನ್ನು ಅಳವಡಿಕೆ ಮಾಡಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ FIR ನಂಬರ್ 39/2025 ರಲ್ಲಿ BNS 211(A), 336, 230, 231, 229, 227, 228, 240, 236, 233, 248 ಸೆಕ್ಷನ್ ಅಳವಡಿಕೆ ಮಾಡಲಾಗಿದೆ.

ಧರ್ಮಸ್ಥಳ ಪ್ರಕರಣ: ಯಾವ್ಯಾವ ಸೆಕ್ಷನ್​ಗಳ ಅಡಿ ಕೇಸ್?

  1. BNS 211(A) – ಅಧಿಕಾರಿಗೆ ಕಾನೂನಾತ್ಮಕವಾಗಿ ನೀಡಬೇಕಾದ ಮಾಹಿತಿಯನ್ನು ನೀಡದೆ ಉದ್ದೇಶಪೂರ್ವಕವಾಗಿ ತಪ್ಪಿಸುವುದು.
  2. BNS 336 – ನಕಲಿ ದಾಖಲೆ ಸೃಷ್ಟಿಸುವುದು‌.
  3. BNS 230 – ಸುಳ್ಳು ಸಾಕ್ಷಿ ಕೊಡಲು ಅಥವಾ ಸುಳ್ಳು ಸಾಕ್ಷಿ ತಯಾರಿಸುವುದು‌.
  4. BNS 231 – ಜೀವಾವಧಿ ಶಿಕ್ಷೆ ಅಥವಾ ಜೈಲು ಶಿಕ್ಷೆ ವಿಧಿಸಬಹುದಾದ ಅಪರಾಧದ ಬಗ್ಗೆ ಸುಳ್ಳು ಸಾಕ್ಷ್ಯ ನೀಡುವುದು ಅಥವಾ ಅದನ್ನು ಸೃಷ್ಟಿಸುವುದು.
  5. BNS 229 – ನ್ಯಾಯಾಂಗ ಪ್ರಕ್ರಿಯೆಯಲ್ಲಿ ಸುಳ್ಳು ಪುರಾವೆ ನೀಡಿದರೆ.
  6. BNS 227 – ಸುಳ್ಳೆಂದು ತಿಳಿದಿದ್ದರು ಸುಳ್ಳು ಸಾಕ್ಷ್ಯವನ್ನು ಹೇಳೋದು.
  7. BNS 228 – ನ್ಯಾಯಾಂಗ ಅಥವಾ ಕಾನೂನು ಪ್ರಕ್ರಿಯೆಯನ್ನು ದಾರಿತಪ್ಪಿಸುವ ಉದ್ದೇಶದಿಂದ, ಪುಸ್ತಕಗಳು ಅಥವಾ ದಾಖಲೆಗಳಲ್ಲಿ ಸುಳ್ಳು ನಮೂದುಗಳನ್ನು ಮಾಡುವುದು.
  8. BNS 240 – ಅಪರಾಧದ ಬಗ್ಗೆ ತಪ್ಪು ಮಾಹಿತಿ ನೀಡುವುದು.
  9. BNS 236 – ನ್ಯಾಯಾಲಯಕ್ಕೆ ತಾನು ನೀಡಿದ ಮಾಹಿತಿ ಸುಳ್ಳು ಎಂದು ತಿಳಿದಿದ್ದರೂ ಅಥವಾ ನಂಬದಿದ್ದರೂ, ಅದನ್ನು ನಿಜವೆಂದು ಹೇಳುವುದು‌.
  10. BNS 233 – ನ್ಯಾಯಾಲಯದಲ್ಲಿ ಸುಳ್ಳು ಎಂದು ತಿಳಿದಿರುವ ಯಾವುದೇ ಪುರಾವೆಯನ್ನು ನಿಜವಾದ ಪುರಾವೆಯಂತೆ ಬಳಸಲು ಪ್ರಯತ್ನಿಸುವುದು, ಈಗಾಗಲೇ ಸುಳ್ಳು ಎಂದು ತಿಳಿದಿರುವ ಪುರಾವೆಯನ್ನು ಬಳಸೋದು.
  11. BNS 248 – ಒಬ್ಬ ವ್ಯಕ್ತಿಯನ್ನು ಹಾನಿ ಮಾಡುವ ದುರುದ್ದೇಶದಿಂದ, ಅವನ ಮೇಲೆ ಯಾವ ಕಾನೂನು ಆಧಾರಗಳೂ ಇಲ್ಲದಿದ್ದರೂ ಸುಳ್ಳು ಅಪರಾಧದ ಆರೋಪ ಹೊರಿಸುವುದು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:38 am, Sat, 6 September 25

ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್