AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಪ್ರಕರಣ: ಸುಜಾತ ಭಟ್ ಕೇಸ್​ನಲ್ಲಿ ದಕ್ಷಿಣ ಭಾರತದ ಹೆಸರಾಂತ ನಟನ ಸಹೋದರನಿಗೆ ಸಂಕಷ್ಟ? ಎಸ್​ಐಟಿ ನೋಟಿಸ್ ಸಾಧ್ಯತೆ

ಧರ್ಮಸ್ಥಳ ಷಡ್ಯಂತ್ರ ಪ್ರಕರಣದಲ್ಲಿ ಹೊಸ ತಿರುವು ಕಾಣಿಸಿಕೊಂಡಿದೆ. ಸುಜಾತಾ ಭಟ್-ಅನನ್ಯ ಭಟ್ ಕಟ್ಟುಕತೆ ಪ್ರಕರಣದಲ್ಲಿ ಖ್ಯಾತ ನಟನ ಸಹೋದರನಿಗೆ ಶೀಘ್ರದಲ್ಲೇ ಎಸ್​ಐಟಿ ನೋಟಿಸ್ ನೀಡುವ ಸಾಧ್ಯತೆಯಿದೆ. ದಕ್ಷಿಣ ಭಾರತದ ಖಳನಾಯಕನ ಸಹೋದರ ಚೆನ್ನೈನಲ್ಲಿದ್ದು, ವಿಳಾಸ ಪತ್ತೆಗೆ ಎಸ್​ಐಟಿ ಯತ್ನಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಧರ್ಮಸ್ಥಳ ಪ್ರಕರಣ: ಸುಜಾತ ಭಟ್ ಕೇಸ್​ನಲ್ಲಿ ದಕ್ಷಿಣ ಭಾರತದ ಹೆಸರಾಂತ ನಟನ ಸಹೋದರನಿಗೆ ಸಂಕಷ್ಟ? ಎಸ್​ಐಟಿ ನೋಟಿಸ್ ಸಾಧ್ಯತೆ
ಸುಜಾತ ಭಟ್, ಅನನ್ಯಾ ಭಟ್
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Oct 06, 2025 | 11:09 AM

Share

ಮಂಗಳೂರು, ಅಕ್ಟೋಬರ್ 6: ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ಪ್ರಕರಣದಲ್ಲಿ (Dharmasthala Case) ಸುಜಾತಾ ಭಟ್ – ಅನನ್ಯ ಭಟ್ ಕಟ್ಟುಕತೆ ಪ್ರಕರಣದಲ್ಲಿ ಹೊಸ ತಿರುವು ಕಾಣಿಸಿಕೊಂಡಿದೆ. ದಕ್ಷಿಣ ಭಾರತದ ಖ್ಯಾತ ನಟ, ಖಳನಾಯಕ ಹಾಗೂ ನಿರ್ದೇಶಕನ ಸಹೋದರನ (ಆತನೂ ಕಾಲಿವುಡ್ ನಟ) ವಿರುದ್ಧ ಶೀಘ್ರದಲ್ಲೇ ಎಸ್ಐಟಿ (SIT) ನೋಟಿಸ್ ನೀಡುವ ಸಾಧ್ಯತೆ ಇದೆ ಎಂಬ ಮಾಹಿತಿ ದೊರೆತಿದೆ. ಪ್ರಕರಣದ ತನಿಖೆಯ ವೇಳೆ ಎಸ್ಐಟಿಗೆ ಆ ನಟನ ಹೆಸರು ಸಿಕ್ಕಿದ್ದು, ಅದರ ಹಿನ್ನೆಲೆಯಲ್ಲಿ ಆತನ ಚೆನ್ನೈ ವಿಳಾಸ ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ.

ಸುಜಾತ ಭಟ್ ಕಟ್ಟುಕಥೆ ಮತ್ತು ಕೊಡಗು ಮೂಲದ ವಾಸಂತಿ ಪ್ರಕರಣದ ಜಾಡು ಹಿಡಿದ ಎಸ್​​ಐಟಿಗೆ ಖ್ಯಾತ ನಟನ ಲಿಂಕ್ ಬಗ್ಗೆ ಮಾಹಿತಿ ದೊರೆತಿದೆ. ಕೊಡಗು ಮೂಲದ ವಾಸಂತಿ ಮದುವೆ ಆಗಿ ಬೆಂಗಳೂರಿನಲ್ಲಿದ್ದರು. ವಾಸಂತಿ ಅವರ ಗಂಡ ಹಾಗೂ ಆ ನಟ ಇಬ್ಬರೂ ಸ್ನೇಹಿತರಾಗಿದ್ದರು. ಬೆಂಗಳೂರಿನ ಆ ಮನೆಗೆ ಆಗಾಗ ಆ ಪ್ರಖ್ಯಾತ ನಟನ ತಮ್ಮ ಬರುತ್ತಿದ್ದ. ವಾಸಂತಿ ಗಂಡನ ಮನೆಯಲ್ಲಿ ಉಳಿದುಕೊಳ್ಳುತ್ತಿದ್ದ. ವಾಸಂತಿ ದಾಂಪತ್ಯ ರಹಸ್ಯ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಆ ನಟನಿಗೆ ಅರಿವು ಇತ್ತು. ವಾಸಂತಿ ಹಾಗೂ ಆಕೆ ಪತಿ ಜೊತೆ ಆ ನಟ ತುಂಬಾ ಅನ್ಯೋನ್ಯವಾಗಿದ್ದ ಎಂಬ ಮಾಹಿತಿ ಎಸ್​ಐಟಿಗೆ ದೊರೆತಿರುವುದಾಗಿ ಮೂಲಗಳು ತಿಳಿಸಿವೆ.

ಚೆನ್ನೈ ಬೀಚ್ ಪ್ರದೇಶದ ಆಸುಪಾಸಿನಲ್ಲೇ ವಾಸ ಇರುವ ನಟ!

ಸದ್ಯ ಚೆನ್ನೈ ಬೀಚ್ ಪ್ರದೇಶದ ಆಸುಪಾಸಿನಲ್ಲಿ ಆ ಖ್ಯಾತ ನಟ ವಾಸವಿದ್ದಾನೆ ಎನ್ನಲಾಗಿದ್ದು, ಎಸ್ಐಟಿ ಶೀಘ್ರದಲ್ಲೇ ನೋಟಿಸ್ ನೀಡುವ ಸಾಧ್ಯತೆ ಇದೆ. ವಿಳಾಸ ದೃಢಪಡಿಸಲು ಪ್ರಯತ್ನ ನಡೆಯುತ್ತಿದ್ದು, ಅದರಲ್ಲಿ ವಿಳಂಬವಾಗಿರುವ ಕಾರಣ ನೋಟಿಸ್ ನೀಡುವ ಪ್ರಕ್ರಿಯೆ ವಿಳಂಬವಾಗುತ್ತಿದೆ ಎನ್ನಲಾಗಿದೆ. ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ಪ್ರಕರಣದಲ್ಲಿ ಎಸ್ಐಟಿ ತನಿಖೆ ಮುಂದುವರಿದಿದ್ದು, ಆ್ಯಂಬುಲೆನ್ಸ್ ಚಾಲಕರಾದ ಜಲೀಲ್ ಬಾಬಾ ಮತ್ತು ಹಮೀದ್ ಅವರನ್ನು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಶನಿವಾರ ಸಂಜೆ 7.30ರವರೆಗೂ ಇವರನ್ನು ವಿಚಾರಣೆ ನಡೆಸಿದ್ದ ಎಸ್ಐಟಿ, ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ಶವಗಳನ್ನು ಸಾಗಿಸಿದ್ದ ಪ್ರಕರಣದ ಕುರಿತಂತೆ ಹೆಚ್ಚಿನ ವಿವರಗಳನ್ನು ಸಂಗ್ರಹಿಸಿತ್ತು. ಈ ಇಬ್ಬರು ಚಾಲಕರಿಂದ ದೊರೆತ ಮಾಹಿತಿಯು ತನಿಖೆಗೆ ಪ್ರಮುಖ ಸುಳಿವು ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಸುಜಾತಾ ಭಟ್ ಪ್ರಕರಣದ ಹಿನ್ನೆಲೆ

ಧರ್ಮಸ್ಥಳದ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂಳಲಾಗಿತ್ತು ಎಂಬ ಆರೋಪ ಮುನ್ನೆಲೆಗೆ ಬರುತ್ತಿದ್ದಂತೆಯೇ ರಾಜ್ಯ ಸರ್ಕಾರ ತನಿಖೆಗಾಗಿ ಎಸ್​ಐಟಿ ರಚನೆ ಮಾಡಿತ್ತು. ಸುಜಾತಾ ಭಟ್ ಎಂಬವರು ತಮ್ಮ ಮಗಳು, ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ 2003 ರಲ್ಲಿ ಧರ್ಮಸ್ಥಳದಿಂದ ನಾಪತ್ತೆಯಾಗಿದ್ದಳು. ಅವಳ ಅಸ್ಥಿಪಂಜರವನ್ನಾದರೂ ಹುಡುಕಿಕೊಡಿ ಎಂದು ಎಸ್​ಐಟಿಗೆ ಮನವಿ ಮಾಡಿದ್ದರು. ಬಳಿಕ ಸುಜಾತ ಭಟ್ ಆಸ್ತಿ ವಿಚಾರಕ್ಕೆ ಮಗಳ ಬಗ್ಗೆ ಕಥೆ ಕಟ್ಟಿರುವುದಾಗಿ ಒಪ್ಪಿಕೊಂಡು ವೀಡಿಯೊ ಬಿಡುಗಡೆ ಮಾಡಿದ್ದರು. ತನ್ನ ಅಜ್ಜನ ಭೂಮಿ ಮತ್ತು ಧರ್ಮಸ್ಥಳ ದೇವಾಲಯಕ್ಕೆ ಸಂಬಂಧಿಸಿದ ಆಸ್ತಿ ವಿವಾದದ ಕಾರಣಕ್ಕೆ ಹೋರಾಟಗಾರರ ಒತ್ತಡಕ್ಕೆ ಮಣಿದು ಆರೋಪ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದರು.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ: ಸಮೀರ್ ಎಂಡಿ ಸೇರಿ ಐದಕ್ಕೂ ಹೆಚ್ಚು ಯೂಟ್ಯೂಬರ್‌ಗಳಿಗೆ SIT ನೋಟೀಸ್

ಅದಾದ ನಂತರ ಮತ್ತೆ ಯೂಟರ್ನ್ ತೆಗೆದುಕೊಂಡು, ಯೂಟ್ಯೂಬರ್ ಒಬ್ಬ ತನಗೆ ಮಗಳೇ ಇರಲಿಲ್ಲ ಎಂದು ಹೇಳುವಂತೆ ಒತ್ತಾಯಿಸಿದ್ದಾನೆ ಎಂದು ಟಿವಿ ಮಾಧ್ಯಮವೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಹೇಳಿಕೊಂಡರು . ನಂತರದ ಎಸ್​ಐಟಿ ವಿಚಾರಣೆಯ ಸಮಯದಲ್ಲಿ, ಆಕೆಯ ಹೇಳಿಕೆಗಳು ವಿರೋಧಾಭಾಸದಿಂದ ಕೂಡಿರುವುದು ಕಂಡುಬಂತು. ನಂತರ ಸುಜಾತ ಭಟ್ ದೂರನ್ನು ಹಿಂಪಡೆಯುವುದಾಗಿ ಎಸ್​ಐಟಿಗೆ ಹೇಳಿದ್ದರು. ಇದೀಗ ಅದೇ ಪ್ರಕರಣದಲ್ಲಿ ಖ್ಯಾತ ನಟನ ಸಹೋದರ ಹೆಸರು ಕೇಳಿಬಂದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:22 am, Mon, 6 October 25

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?