AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕೆಂಡ್ ಕರ್ಫ್ಯೂ ಹಿನ್ನೆಲೆ ಶ್ರೀ ಕ್ಷೇತ್ರ ಧರ್ಮಸ್ಥಳ ದೇಗುಲಕ್ಕೆ ಭಕ್ತರ ಪ್ರವೇಶ ನಿರ್ಬಂಧ

ಮುಂದಿನ‌ ಆದೇಶದವರೆಗೂ ಸೇವೆ ರದ್ದುಪಡಿಸಿ ಶ್ರೀಕ್ಷೇತ್ರದಿಂದ ಆದೇಶ ಹೊರಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿರುವ ಧರ್ಮಸ್ಥಳ ಕ್ಷೇತ್ರದಲ್ಲಿ ವೀಕೆಂಡ್ ಕರ್ಫ್ಯೂ ಹಿನ್ನೆಲೆ ಹೊಸ ನಿಯಮಾವಳಿ ಜಾರಿಗೊಳಿಸಲಾಗಿದೆ.

ವೀಕೆಂಡ್ ಕರ್ಫ್ಯೂ ಹಿನ್ನೆಲೆ ಶ್ರೀ ಕ್ಷೇತ್ರ ಧರ್ಮಸ್ಥಳ ದೇಗುಲಕ್ಕೆ ಭಕ್ತರ ಪ್ರವೇಶ ನಿರ್ಬಂಧ
ಧರ್ಮಸ್ಥಳ ಕ್ಷೇತ್ರ
TV9 Web
| Edited By: |

Updated on: Jan 07, 2022 | 7:38 PM

Share

ಮಂಗಳೂರು: ವೀಕೆಂಡ್ ಕರ್ಫ್ಯೂ ಹಿನ್ನೆಲೆ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ದೇಗುಲಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ವಾರದ 5 ದಿನ ಮಾತ್ರ ದೇವರ ದರ್ಶನಕ್ಕೆ ಅವಕಾಶ ಇರಲಿದೆ. ವಸತಿ ಹಾಗೂ ತುಲಾಭಾರ ಉತ್ಸವಾದಿ ಸೇವೆಗಳು ರದ್ದು ಆಗಲಿದೆ. ಮುಂದಿನ‌ ಆದೇಶದವರೆಗೂ ಸೇವೆ ರದ್ದುಪಡಿಸಿ ಶ್ರೀಕ್ಷೇತ್ರದಿಂದ ಆದೇಶ ಹೊರಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿರುವ ಧರ್ಮಸ್ಥಳ ಕ್ಷೇತ್ರದಲ್ಲಿ ವೀಕೆಂಡ್ ಕರ್ಫ್ಯೂ ಹಿನ್ನೆಲೆ ಹೊಸ ನಿಯಮಾವಳಿ ಜಾರಿಗೊಳಿಸಲಾಗಿದೆ.

ಕರ್ನಾಟಕ ಕೊರೊನಾ ಪ್ರಕರಣಗಳ ವಿವರ ಕರ್ನಾಟಕದಲ್ಲಿ ಶುಕ್ರವಾರ (ಜ.7) ಒಂದೇ ದಿನ 8449 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. 505 ಮಂದಿ ಸೋಂಕಿನಿಂದ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ 4.15 ಇದ್ದು, ಸೋಂಕಿನಿಂದ ಮೃತಪಡುವವರ ಪ್ರಮಾಣ ಶೇ 0.04 ಇದೆ. ರಾಜ್ಯದಲ್ಲಿ ಈವರೆಗೆ 30,31,052 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಈವರೆಗೆ 29,62,548 ಮಂದಿ ಚೇತರಿಸಿಕೊಂಡಿದ್ದಾರೆ. ಕೊರೊನಾದಿಂದ ಒಟ್ಟು 38,362 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 30,113 ಸಕ್ರಿಯ ಪ್ರಕರಣಗಳಿವೆ.

ಎಂದಿನಂತೆ ಬೆಂಗಳೂರು ನಗರದಲ್ಲಿಯೇ ಅತಿಹೆಚ್ಚು ಜನರಲ್ಲಿ ಸೋಂಕು ದೃಢಪಟ್ಟಿದೆ. ನಗರದ 6812 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 352 ಮಂದಿ ಚೇತರಿಸಿಕೊಂಡಿದ್ದಾರೆ. ಮೂವರು ಸಾವನ್ನಪ್ಪಿದ್ದಾರೆ. ನಗರದಲ್ಲಿ ಪ್ರಸ್ತುತ 25,370 ಸಕ್ರಿಯ ಪ್ರಕರಣಗಳಿವೆ. ನಗರದಲ್ಲಿ ಈವರೆಗೆ ಒಟ್ಟು 16,417 ಮಂದಿ ಕೊವಿಡ್​ನಿಂದ ಮೃತಪಟ್ಟಿದ್ದಾರೆ. ಈವರೆಗೆ ಒಟ್ಟು 12,83,186 ಜನರಲ್ಲಿ ಸೋಂಕು ದೃಢಪಟ್ಟಿದ್ದು, 12,41,398 ಮಂದಿ ಚೇತರಿಸಿಕೊಂಡಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ 6812, ದಕ್ಷಿಣ ಕನ್ನಡ 211, ಮೈಸೂರು 219, ಮಂಡ್ಯ 129, ಬೆಳಗಾವಿ 114, ಬೆಂಗಳೂರು ಗ್ರಾಮಾಂತರ 74, ಬಾಗಲಕೋಟೆ, ರಾಯಚೂರು 2, ಬಳ್ಳಾರಿ 62, ಬೀದರ್ 20, ಚಾಮರಾಜನಗರ 7, ಚಿಕ್ಕಬಳ್ಳಾಪುರ 21, ಚಿಕ್ಕಮಗಳೂರು 24, ಚಿತ್ರದುರ್ಗ 14, ದಾವಣಗೆರೆ 18, ಧಾರವಾಡ 66, ಗದಗ 10, ಹಾಸನ 89, ಕಲಬುರಗಿ 43, ಕೊಡಗು 29, ಕೋಲಾರ 98, ಕೊಪ್ಪಳ 5, ರಾಮನಗರ 20, ಶಿವಮೊಗ್ಗ 43, ತುಮಕೂರು 96, ಉಡುಪಿ 148, ಉತ್ತರ ಕನ್ನಡ, ವಿಜಯಪುರ 36, ಯಾದಗಿರಿ 1.

ಇದನ್ನೂ ಓದಿ: ಇನ್ನೂ ಕೆಲ ಸಮಯ ಕೊರೊನಾ ಸೋಂಕಿನೊಂದಿಗೆ ಬದುಕುವುದು ಕಲಿಯಬೇಕಿದೆ: ದಕ್ಷಿಣ ಆಫ್ರಿಕಾದ ತಜ್ಞ ವೈದ್ಯೆ ಆಂಜೆಲಿಕ್ ಕೊಯೆಟ್ಜಿ

ಇದನ್ನೂ ಓದಿ: Sirsi Marikamba Jatre: ಮಾ. 15ರಿಂದ ಶಿರಸಿ ಮಾರಿಕಾಂಬಾ ಜಾತ್ರೆ; ಕೊರೊನಾ ನಿಯಮ ಪಾಲನೆ ಕಡ್ಡಾಯ

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!