ಪೆಹಲ್ಗಾಮ್ ಉಗ್ರರಿಗೆ ಹಣ ನೀಡಿದ ಸುಳ್ಳು ಆರೋಪ; ಮುಂಬೈ ಪೊಲೀಸ್ ಸೋಗಿನಲ್ಲಿ ವ್ಯಕ್ತಿಗೆ 1.3 ಕೋಟಿ ರೂ. ವಂಚನೆ!

ಪೆಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾಯಿಸಿದ್ದೀರಿ ಎಂದು ಮುಂಬೈ ಪೊಲೀಸ್ ಹಾಗೂ ಎಟಿಎಸ್ ಅಧಿಕಾರಿಗಳ ಸೋಗಿನಲ್ಲಿ ಬೆದರಿಕೆ ಹಾಕಿ, ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.31 ಕೋಟಿ ರೂ. ವಂಚಿಸಿರುವ ಘಟನೆ ನಡೆದಿದೆ. ವಾಟ್ಸಾಪ್ ವಿಡಿಯೋ ಕಾಲ್ ಮೂಲಕ 'ಡಿಜಿಟಲ್ ಅರೆಸ್ಟ್' ಮಾಡಿ ವಂಚಿಸಿದ ಜಾಲದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೆಹಲ್ಗಾಮ್ ಉಗ್ರರಿಗೆ ಹಣ ನೀಡಿದ ಸುಳ್ಳು ಆರೋಪ; ಮುಂಬೈ ಪೊಲೀಸ್ ಸೋಗಿನಲ್ಲಿ ವ್ಯಕ್ತಿಗೆ 1.3 ಕೋಟಿ ರೂ. ವಂಚನೆ!
ಸಾಂದರ್ಭಿಕ ಚಿತ್ರ
Image Credit source: gettyimages.com
Edited By:

Updated on: Oct 13, 2026 | 10:58 AM

ಮುಖ್ಯಾಂಶಗಳು

  • ಎಟಿಎಸ್ ಅಧಿಕಾರಿಗಳ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಗೆ 'ಡಿಜಿಟಲ್ ಅರೆಸ್ಟ್' ಮಾಡಿ ವಂಚನೆ.
  • ಪೆಹಲ್ಗಾಮ್ ದಾಳಿಕೋರರಿಗೆ ಹಣ ನೀಡಿದ ಸುಳ್ಳು ಆರೋಪ ಹೊರಿಸಿ ಬೆದರಿಕೆ ಹಾಕಿದ ವಂಚಕರು.
  • ಸೆಪ್ಟೆಂಬರ್‌ನಿಂದ ಅಕ್ಟೋಬರ್‌ವರೆಗೆ ಹಂತ ಹಂತವಾಗಿ 1.31 ಕೋಟಿ ರೂಪಾಯಿ ವರ್ಗಾವಣೆ.

ಮಂಗಳೂರು, ಅಕ್ಟೋಬರ್ 13: ಪೆಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ ಎಂದು ಸುಳ್ಳು ಆರೋಪ ಹೊರಿಸಿ, ಮುಂಬೈ ಪೊಲೀಸ್ ಹಾಗೂ ಎಟಿಎಸ್ (ATS) ಅಧಿಕಾರಿಗಳ ಸೋಗಿನಲ್ಲಿ ಬೆದರಿಕೆ ಹಾಕಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 1.31 ಕೋಟಿ ರೂ. ಅಧಿಕ ಹಣವನ್ನು ವಂಚಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂಬೈ ಪೊಲೀಸರ ಸೋಗಿನಲ್ಲಿ ವೀಡಿಯೋ ಕಾಲ್!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನಿವಾಸಿಯೊಬ್ಬರನ್ನು ಗುರಿಯಾಗಿಸಿಕೊಂಡು ವಂಚಕರು ಈ ಕೃತ್ಯವೆಸಗಿದ್ದಾರೆ. ಆರೋಪಿಗಳು ತಮ್ಮನ್ನು ಮುಂಬೈ ಪೊಲೀಸ್ ಮತ್ತು ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡು ದೂರುದಾರರಿಗೆ ವಾಟ್ಸಾಪ್ ವಿಡಿಯೋ ಕರೆಗಳ ಮೂಲಕ ನಿರಂತರವಾಗಿ ಬೆದರಿಕೆ ಹಾಕಿದ್ದಾರೆ. ಪೆಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ನೀವು ಹಣ ವರ್ಗಾವಣೆ ಮಾಡಿದ್ದೀರಿ ಎಂದು ಸುಳ್ಳು ಆರೋಪ ಹೊರಿಸಿ ಬಂಧನದ ಭೀತಿ ಹುಟ್ಟಿಸಿದ್ದಾರೆ.

ಒಂದು ತಿಂಗಳಲ್ಲಿ ಹಂತ ಹಂತವಾಗಿ ಕೋಟ್ಯಾಂತರ ರೂ. ವರ್ಗಾವಣೆ!

ಬ್ಯಾಂಕ್ ಖಾತೆಗಳ ಪರಿಶೀಲನೆ ಹಾಗೂ ಹಣದ ದೃಢೀಕರಣದ ನೆಪ ಹೇಳಿ, ವಿವಿಧ ಬ್ಯಾಂಕ್ ಖಾತೆಗಳಿಗೆ ಆರ್‌ಟಿಜಿಎಸ್ ಮೂಲಕ ಹಣ ವರ್ಗಾಯಿಸುವಂತೆ ವಂಚಕರು ಸೂಚಿಸಿದ್ದಾರೆ. ಇದನ್ನು ನಂಬಿದ ದೂರುದಾರರು ಸೆಪ್ಟೆಂಬರ್ 02 ರಿಂದ ಅಕ್ಟೋಬರ್ 06 ರವರೆಗೆ ಹಂತ ಹಂತವಾಗಿ ಒಟ್ಟು 1,31,50,000 ರೂಪಾಯಿಗಳನ್ನು ಆರೋಪಿಗಳು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ ಮೋಸ ಹೋಗಿದ್ದಾರೆ.

ನಂತರ ತಾವು ಸೈಬರ್ ವಂಚನೆಗೆ ಒಳಗಾಗಿರುವುದನ್ನು ಅರಿತ ದೂರುದಾರರು ಕೂಡಲೇ ಸೈಬರ್ ಸಹಾಯವಾಣಿ 1930ಕ್ಕೆ ಕರೆ ಮಾಡಿ ದೂರು ದಾಖಲಿಸಿದ್ದಾರೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಪೊಲೀಸ್ ಠಾಣೆಯಲ್ಲಿ ಐಟಿ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us