AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಾಯಾಮ ಹೇಳಿಕೊಡುವ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ದೈಹಿಕ ಶಿಕ್ಷಣ ನಿರ್ದೇಶಕನನ್ನು ಬಂಧಿಸಿದ ಪೊಲೀಸರು

ಅಕ್ಟೋಬರ್ 23 ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ವಿದ್ಯಾರ್ಥಿನಿ ವಿದ್ಯಾಸಂಸ್ಥೆಗೆ ಸೇರಿದ ಹಾಸ್ಟೆಲ್ನಲ್ಲಿ ಇದ್ದಳು. ವ್ಯಾಯಾಮ ಹೇಳುವ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ.

ವ್ಯಾಯಾಮ ಹೇಳಿಕೊಡುವ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ದೈಹಿಕ ಶಿಕ್ಷಣ ನಿರ್ದೇಶಕನನ್ನು ಬಂಧಿಸಿದ ಪೊಲೀಸರು
ಎಲ್ಯಾಸ್ ಪಿಂಟೋ
TV9 Web
| Edited By: ಆಯೇಷಾ ಬಾನು|

Updated on:Oct 26, 2021 | 2:21 PM

Share

ಮಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ದೈಹಿಕ ಶಿಕ್ಷಣ ನಿರ್ದೇಶಕ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ವಿರುದ್ಧ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.

ಅಕ್ಟೋಬರ್ 23 ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ವಿದ್ಯಾರ್ಥಿನಿ ವಿದ್ಯಾಸಂಸ್ಥೆಗೆ ಸೇರಿದ ಹಾಸ್ಟೆಲ್ನಲ್ಲಿ ಇದ್ದಳು. ವ್ಯಾಯಾಮ ಹೇಳುವ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ಶಿಕ್ಷಕನ ಕಿರುಕುಳದ ಬಗ್ಗೆ ವಿದ್ಯಾರ್ಥಿನಿ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ಬಳಿಕ ಎಚ್ಚೆತ್ತ ವಿದ್ಯಾರ್ಥಿನಿ ಪೋಷಕರು ಆರೋಪಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಎಲ್ಯಾಸ್ ಪಿಂಟೋನನ್ನು ಪೋಲಿಸರು ಬಂಧಿಸಿದ್ದಾರೆ.

48 ಗಂಟೆಗಳಲ್ಲಿ ಆರೋಪಿ ರಾಜೇಶ್ ಬಂಧಿಸದಿದ್ದರೆ ಸರ್ವ ಕಾಲೇಜು ಬಂದ್ ಇಂಟರ್ನ್​ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ರಾಜೇಶ್​ರನ್ನು ಇನ್ನೂ ಬಂಧಿಸಿಲ್ಲ. ವಾರ ಕಳೆದರೂ ಆರೋಪಿ ಬಂಧನವಾಗದ ಹಿನ್ನೆಲೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿ ಸಂಘಟನೆ ಮಂಗಳೂರು ಪೊಲೀಸ್ ಕಮಿಷನರ್ಗೆ ಡೆಡ್ಲೈನ್ ನೀಡಿದೆ. 48 ಗಂಟೆಗಳ ಒಳಗಾಗಿ ಆರೋಪಿ ವಕೀಲ ರಾಜೇಶ್​ರನ್ನು ಬಂಧಿಸಬೇಕು. ಇಲ್ಲದಿದ್ದರೆ ಸರ್ವ ಕಾಲೇಜು ಬಂದ್ ಮಾಡಲಾಗುತ್ತದೆ ಅಂತ ವಿದ್ಯಾರ್ಥಿ ಸಂಘ ಎಚ್ಚರಿಕೆ ನೀಡಿದೆ.

ಆರೋಪಿಯನ್ನು 48 ಗಂಟೆಗಳಲ್ಲಿ ಬಂಧಿಸದಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕಾಲೇಜುಗಳನ್ನು ಬಂದ್ ಮಾಡಿ ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಅಂತ ಮಂಗಳೂರು ಪೊಲೀಸ್ ಇಲಾಖೆಗೆ ದಕ್ಷಿಣ ಕನ್ನಡ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ತಿಳಿಸಿದೆ.

ಮಂಗಳೂರಿನ ಪ್ರಖ್ಯಾತ ವಕೀಲ ಕೆಎಸ್ಎನ್ ರಾಜೇಶ್ ವಿರುದ್ಧ ಇಂಟರ್ನ್​ಶಿಪ್ ವಿದ್ಯಾರ್ಥಿನಿ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರು ನೀಡಿದ್ದಳು. ಮಂಗಳೂರಿನ ಕಚೇರಿಯಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಸೆಪ್ಟೆಂಬರ್ 25ರಂದು ದೂರು ನೀಡಿದ್ದಳು. ಲೈಂಗಿಕ ಕಿರುಕುಳದ ಜೊತೆ ಜೀವ ಬೆದರಿಕೆ ಹಾಕಿರುವ ಬಗ್ಗೆಯೂ ಪ್ರಕರಣ ದಾಖಲಾಗಿತ್ತು. ದೂರು ದಾಖಲಾಗಿ ವಾರ ಕಳೆದರೂ ಆರೋಪಿ ರಾಜೇಶ್ ಬಂಧನವಾಗಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ‘ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿ’ ಬಗ್ಗೆ ರಜನಿ​ಕಾಂತ್​ ಸ್ನೇಹಿತ ರಾಜ್ ​ಬಹದ್ದೂರ್​ ಮೊದಲ ಪ್ರತಿಕ್ರಿಯೆ ಏನು?

Published On - 2:20 pm, Tue, 26 October 21

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್