ಮಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ದೈಹಿಕ ಶಿಕ್ಷಣ ನಿರ್ದೇಶಕ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ವಿರುದ್ಧ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.
ಅಕ್ಟೋಬರ್ 23 ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ವಿದ್ಯಾರ್ಥಿನಿ ವಿದ್ಯಾಸಂಸ್ಥೆಗೆ ಸೇರಿದ ಹಾಸ್ಟೆಲ್ನಲ್ಲಿ ಇದ್ದಳು. ವ್ಯಾಯಾಮ ಹೇಳುವ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ಶಿಕ್ಷಕನ ಕಿರುಕುಳದ ಬಗ್ಗೆ ವಿದ್ಯಾರ್ಥಿನಿ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ಬಳಿಕ ಎಚ್ಚೆತ್ತ ವಿದ್ಯಾರ್ಥಿನಿ ಪೋಷಕರು ಆರೋಪಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಎಲ್ಯಾಸ್ ಪಿಂಟೋನನ್ನು ಪೋಲಿಸರು ಬಂಧಿಸಿದ್ದಾರೆ.
48 ಗಂಟೆಗಳಲ್ಲಿ ಆರೋಪಿ ರಾಜೇಶ್ ಬಂಧಿಸದಿದ್ದರೆ ಸರ್ವ ಕಾಲೇಜು ಬಂದ್
ಇಂಟರ್ನ್ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ರಾಜೇಶ್ರನ್ನು ಇನ್ನೂ ಬಂಧಿಸಿಲ್ಲ. ವಾರ ಕಳೆದರೂ ಆರೋಪಿ ಬಂಧನವಾಗದ ಹಿನ್ನೆಲೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿ ಸಂಘಟನೆ ಮಂಗಳೂರು ಪೊಲೀಸ್ ಕಮಿಷನರ್ಗೆ ಡೆಡ್ಲೈನ್ ನೀಡಿದೆ. 48 ಗಂಟೆಗಳ ಒಳಗಾಗಿ ಆರೋಪಿ ವಕೀಲ ರಾಜೇಶ್ರನ್ನು ಬಂಧಿಸಬೇಕು. ಇಲ್ಲದಿದ್ದರೆ ಸರ್ವ ಕಾಲೇಜು ಬಂದ್ ಮಾಡಲಾಗುತ್ತದೆ ಅಂತ ವಿದ್ಯಾರ್ಥಿ ಸಂಘ ಎಚ್ಚರಿಕೆ ನೀಡಿದೆ.
ಆರೋಪಿಯನ್ನು 48 ಗಂಟೆಗಳಲ್ಲಿ ಬಂಧಿಸದಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕಾಲೇಜುಗಳನ್ನು ಬಂದ್ ಮಾಡಿ ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಅಂತ ಮಂಗಳೂರು ಪೊಲೀಸ್ ಇಲಾಖೆಗೆ ದಕ್ಷಿಣ ಕನ್ನಡ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ತಿಳಿಸಿದೆ.
ಮಂಗಳೂರಿನ ಪ್ರಖ್ಯಾತ ವಕೀಲ ಕೆಎಸ್ಎನ್ ರಾಜೇಶ್ ವಿರುದ್ಧ ಇಂಟರ್ನ್ಶಿಪ್ ವಿದ್ಯಾರ್ಥಿನಿ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರು ನೀಡಿದ್ದಳು. ಮಂಗಳೂರಿನ ಕಚೇರಿಯಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಸೆಪ್ಟೆಂಬರ್ 25ರಂದು ದೂರು ನೀಡಿದ್ದಳು. ಲೈಂಗಿಕ ಕಿರುಕುಳದ ಜೊತೆ ಜೀವ ಬೆದರಿಕೆ ಹಾಕಿರುವ ಬಗ್ಗೆಯೂ ಪ್ರಕರಣ ದಾಖಲಾಗಿತ್ತು. ದೂರು ದಾಖಲಾಗಿ ವಾರ ಕಳೆದರೂ ಆರೋಪಿ ರಾಜೇಶ್ ಬಂಧನವಾಗಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ ಬಗ್ಗೆ ರಜನಿಕಾಂತ್ ಸ್ನೇಹಿತ ರಾಜ್ ಬಹದ್ದೂರ್ ಮೊದಲ ಪ್ರತಿಕ್ರಿಯೆ ಏನು?
Published On - 2:20 pm, Tue, 26 October 21