ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವರ ಅವಹೇಳನ ಆರೋಪ; ಕಾಂಗ್ರೆಸ್‌ನ ಐಟಿ ಸೆಲ್‌ನ ಕಾರ್ಯದರ್ಶಿ ವಿರುದ್ಧ ದೂರು

ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವರ ಅವಹೇಳನ ಆರೋಪ; ಕಾಂಗ್ರೆಸ್‌ನ ಐಟಿ ಸೆಲ್‌ನ ಕಾರ್ಯದರ್ಶಿ ವಿರುದ್ಧ ದೂರು
ಪುತ್ತೂರ್​ ಪೊಲೀಸ್​​ ಠಾಣೆ

ಶ್ರೀರಾಮ, ಸೀತೆ, ಹನುಮಂತ ದೇವರನ್ನು ಶ್ರೀರಾಮ ಸಲಿಂಗಕಾಮಿ, ರಾಮನಿಗೆ ಹಂದಿ ಮಾಂಸ ಇಷ್ಟ ಎಂದು ಅಶ್ಲೀಲವಾಗಿ ಅವಹೇಳನ ಮಾಡಿದ್ದಾರೆ. ಇದು ಹಿಂದೂಗಳ ಧಾರ್ಮಿಕ ನಂಬಿಕೆ ಭಾವನೆಗೆ ಧಕ್ಕೆ ತಂದಿದೆ.

TV9kannada Web Team

| Edited By: sandhya thejappa

Jun 18, 2022 | 8:56 PM

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ (Social Media) ಹಿಂದೂ ದೇವರನ್ನು (Hindu God) ಅವಹೇಳನ ಮಾಡಿದ ಆರೋಪದ ಮೇಲೆ ಕಾಂಗ್ರೆಸ್‌ನ (Congress) ಐಟಿ (IT) ಸೆಲ್‌ನ ಕಾರ್ಯದರ್ಶಿ ಶೈಲಜಾ ಅಮರನಾಥ್‌, ಪ್ರೀತುಶೆಟ್ಟಿ, ಅನಿಲ್‌, ಪುನೀತ್‌ ಮತ್ತು ಇತರರ ವಿರುದ್ಧ ದೂರು ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೊಲೀಸ್​​ ಠಾಣೆಗೆ ವಿಶ್ವ ಹಿಂದೂ ಪರಿಷತ್ (VHP)​ ಕಾರ್ಯಕರ್ತ ಪ್ರವೀಣ್ ಕುಮಾರ್ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣ ಕ್ಲಬ್‌ಹೌಸ್‌ನಲ್ಲಿ ಹಿಂದೂ ದೇವರುಗಳನ್ನು ಅವಹೇಳನ ಮಾಡಿದ್ದು, ಇದು  ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಆರೋಪಿಸಿದ್ದಾರೆ. ಜೊತೆಗೆ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದಾರೆ.

ಇದನ್ನು ಓದಿ: ಕರ್ನಾಟಕದಲ್ಲಿ ಮತ್ತೊಮ್ಮೆ ಕಮಲ ಅರಳಲಿದೆ- ಬಿಜೆಪಿ ಜನಪ್ರತಿನಿಧಿಗಳ ಸಮಾವೇಶದಲ್ಲಿ ಜೆಪಿ ನಡ್ಡಾ ಭಾಷಣ

ಶ್ರೀರಾಮ, ಸೀತೆ, ಹನುಮಂತ ದೇವರನ್ನು ಶ್ರೀರಾಮ ಸಲಿಂಗಕಾಮಿ, ರಾಮನಿಗೆ ಹಂದಿ ಮಾಂಸ ಇಷ್ಟ ಎಂದು ಅಶ್ಲೀಲವಾಗಿ ಅವಹೇಳನ ಮಾಡಿದ್ದಾರೆ. ಇದು ಹಿಂದೂಗಳ ಧಾರ್ಮಿಕ ನಂಬಿಕೆ ಭಾವನೆಗೆ ಧಕ್ಕೆ ತಂದಿದೆ. ಹೀಗಾಗಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವಿ.ಎಚ್.ಪಿ ಒತ್ತಾಯ ಮಾಡಿದೆ.

ಇನ್ನು ರಾಜ್ಯ ಕಾಂಗ್ರೆಸ್‌ ಐಟಿ ಸೆಲ್‌ನ ಕಾರ್ಯದರ್ಶಿ ಶೈಲಜಾ ಅಮರನಾಥ್ ಅವರ ಪುತ್ತೂರು ತಾಲೂಕಿನ ಬಪ್ಪಳಿಗೆಯಲ್ಲಿರುವ ನಿವಾಸದ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಮನೆಯ ಕಿಟಕಿಯ ಗಾಜು ಒಡೆದು ಅಪರಿಚಿತರು ಮಡ್ ಆಯಿಲ್ ಬಳಿದಿದ್ದಾರೆ. ಘಟನಾ ಸ್ಥಳಕ್ಕೆ ಪುತ್ತೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow us on

Related Stories

Most Read Stories

Click on your DTH Provider to Add TV9 Kannada