ಉಡುಪಿ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು: ಚುನಾವಣೆ ಹೊತ್ತಲ್ಲೇ ವಿವಾದದ ಕಿಡಿ ಹೊತ್ತಿಸಿದ ಮಿಥುನ್​ ರೈ, ಭುಗಿಲೆದ್ದ ಆಕ್ರೋಶ

ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಟಿಕೆಟ್​ ಆಕಾಂಕ್ಷಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಪ್ತ ಮಿಥುನ್ ರೈ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುತ್ತಿಗೆಯಲ್ಲಿ ನಡೆದ ನಮ್ಮೂರ ಮಸೀದಿ ನೋಡ ಬನ್ನಿ' ಕಾರ್ಯಕ್ರಮದಲ್ಲಿ ಉಡುಪಿ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು ಎಂದು ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

Follow us
ವಿವೇಕ ಬಿರಾದಾರ
|

Updated on:Mar 08, 2023 | 12:10 PM

ಮಂಗಳೂರು: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ರಾಜಕೀಯ ಪಕ್ಷದ ನಾಯಕರು ಸಾಕಷ್ಟು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದರಲ್ಲಿ ಕೆಲವು ವಿವಾದಾತ್ಮ ಹೇಳಿಕೆಗಳನ್ನು ನೀಡುವ ಮೂಲಕ ಸಕಷ್ಟು ಸುದ್ದಿಯಲ್ಲಿರುತ್ತಾರೆ. ಈಗ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಟಿಕೆಟ್​ ಆಕಾಂಕ್ಷಿ, ಕೆಪಿಸಿಸಿ (KPCC) ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಆಪ್ತ ಮಿಥುನ್ ರೈ (Mithun Rai) ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಜಿಲ್ಲೆಯ ಮೂಡಬಿದ್ರೆ (Moodbidri) ತಾಲೂಕಿನ ಪುತ್ತಿಗೆಯಲ್ಲಿ ನಡೆದ ನಮ್ಮೂರ ಮಸೀದಿ ನೋಡ ಬನ್ನಿ’ ಕಾರ್ಯಕ್ರಮದಲ್ಲಿ ಉಡುಪಿ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು ಎಂದು ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಸದ್ಯ ಸಾಮಾಜಿಕ ತಾಣಗಳಲ್ಲಿ ಮಿಥುನ್ ರೈ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದೆ.

ಯಾರು ಈ ಮಿಥುನ್​ ರೈ

ಮಿಥುನ್​ ರೈ ಕಾಂಗ್ರೆಸ್​ ಯುವ ನಾಯಕನಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಆಪ್ತ ಬಣದಲ್ಲಿ ಕಾಣಸಿಕೊಂಡಿದ್ದಾರೆ. ಇವರು ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ನಳೀನ್​ ಕುಮಾರ್​ ವಿರುದ್ಧ ಸ್ಪರ್ಧಿಸಿ ಸೋತಿದ್ದರು.

ಹಾಗೇ ಮಿಥುನ್​ ರೈ ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಆದರೆ ಕೆಲವು ದಿನಗಳ ಬಳಿಕ ಸ್ಪರ್ಧೆಯಿಂದ ಹಿಂದೆ ಸರಿದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದರು. ‘ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸಲಹೆಯಂತೆ ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ. ಅಧಿಕಾರ ಮುಖ್ಯವಲ್ಲ, ಪಕ್ಷದ ನಿರ್ಧಾರಕ್ಕೆ ಬೆಲೆ ಕೊಡುವುದು ನನ್ನ ಧರ್ಮ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷರೂ ಆಗಿರುವ ಮಿಥುನ್‌ ರೈ ಹೇಳಿದ್ದರು.

ನಾನು ಸೌಹಾರ್ದಯುತ ಹೇಳಿಕೆ ನೀಡಿದ್ದೇನೆ

ಕಾಂಗ್ರೆಸ್ ನಾಯಕ ಮಿಥುನ್​ ರೈ ತಮ್ಮ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ. ಪತ್ರಿಕೆಗಳಲ್ಲಿ ಬಂದಿದ್ದ ವರದಿ ನೋಡಿ ನಾನು ಹೇಳಿಕೆ ನೀಡಿದ್ದೇನೆ. ನಾನು ಸೌಹಾರ್ದಯುತ ಹೇಳಿಕೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಮಿಥುನ್ ರೈ ಹೇಳಿಕೆಗೆ ಹಿಂದೂ ಮುಖಂಡರ ಆಕ್ರೋಶ

ಮಿಥುನ್ ರೈ ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾದದು. ಶ್ರೀಕೃಷ್ಣ ಮಠಕ್ಕೆ 800 ವರ್ಷಗಳ ಇತಿಹಾಸ ಇದೆ. ಹಿಂದೂಗಳಿಗೆ ಅವಮಾನ ಆಗುವಂತಹ ಹೇಳಿಕೆ ನೀಡಿದ್ದಾರೆ. ಮಿಥುನ್ ರೈ ಕೂಡಲೇ ಹಿಂದೂಗಳ ಕ್ಷಮೆ ಕೇಳಬೇಕು ಎಂದು ಮಿಥುನ್ ರೈ ಹೇಳಿಕೆಗೆ ಪ್ರಮೋದ್ ಮುತಾಲಿಕ್ ಖಂಡನೆ ವ್ಯಕ್ತಪಡಿಸಿದ್ದಾರೆ.

ಸದ್ಯ ಇರುವ ಜಾಮಿಯಾ ಮಸೀದಿ ಕೂಡ ಜಂಗಮರ ಮಠದ ಜಾಗದಲ್ಲಿತ್ತು ಎಂದು ಹೇಳಲಾಗುತ್ತೆ

ಮುಸಲ್ಮಾನ ಅರಸರು ಯಾವುದೇ ಜಾಗವನ್ನು ಕೃಷ್ಣಮಠಕ್ಕಾಗಲಿ ಅನಂತೇಶ್ವರಕ್ಕಾಗಲಿ ನೀಡಿಲ್ಲ. ಅನಂತೇಶ್ವರ ದೇಗುಲಕ್ಕೆ ರಾಮಭೋಜನು ಭೂಮಿ ಕೊಟ್ಟ ಬಗ್ಗೆ ಉಲ್ಲೇಖ ಇದೆ. ಮುಂದೆ ಆ ಭೂಮಿಯೆ ಕೃಷ್ಣ ಮಠಕ್ಕೆ ಬಳಕೆಯಾಗಿದೆ. ಅನಂತೇಶ್ವರ ದೇಗುಲ ನಂತರ ಕೃಷ್ಣ ಮಠ ನಿರ್ಮಾಣಗೊಂಡಿದೆ ಎಂದು ಉಡುಪಿ ಶಾಸಕ ಕೆ ರಘುಪತಿ ಭಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ಇರುವ ಜಾಮಿಯಾ ಮಸೀದಿ ಕೂಡ ಜಂಗಮರ ಮಠದ ಜಾಗದಲ್ಲಿತ್ತು ಎಂದು ಹೇಳಲಾಗುತ್ತೆ. ಶೋಕಮಾತಾ ಚರ್ಚ್ ಕೃಷ್ಣ ಮಠದವರು ಕೊಟ್ಟ ಲೀಸ್ ಭೂಮಿಯಲ್ಲಿದೆ. ಉಡುಪಿ ಸೌಹಾರ್ದತೆಗೆ ಹೆಸರಾದ ಕ್ಷೇತ್ರ. ಮುಸಲ್ಮಾನರಿಗೂ ಮಸೀದಿ ಕಟ್ಟಲು ಜಂಗಮರ ಮಠ ಜಾಗ ಕೊಟ್ಟಿದೆ. ಕ್ರಿಶ್ಚಿಯನ್ ಸಮುದಾಯಕ್ಕೆ ಚರ್ಚ್ ಕಟ್ಟಲು ಕೃಷ್ಣಾಪುರ ಮಠ ಭೂಮಿ ಕೊಟ್ಟಿದೆ. ಹಾಜಿ ಅಬ್ದುಲ್ಲಾ ಸಾಹೇಬರು ಭಕ್ತರಾಗಿ ಕೃಷ್ಣ ಮಠಕ್ಕೆ ಸಹಾಯ ಮಾಡಿದ ಉಲ್ಲೇಖವಿದೆ. ಮಿಥುನ್ ರೈಗಳು ಯಾವ ಮುಸಲ್ಮಾನ ರಾಜನ ಬಗ್ಗೆ ಮಾತನಾಡುತ್ತಾರೋ ಗೊತ್ತಿಲ್ಲ. ಮಧ್ವಾಚಾರ್ಯರು 850 ವರ್ಷಗಳ ಹಿಂದೆ ಕೃಷ್ಣಮಠ ಸ್ಥಾಪಿಸಿದರು. ಮಿಥುನ್ ರೈ ಅಯೋಧ್ಯೆಯ ಪರಿಸ್ಥಿತಿ ಬಗ್ಗೆ ಚಿಂತನೆ ಮಾಡಲಿ. ಮಥುರದಲ್ಲಿ ಕೃಷ್ಣ ಮಂದಿರ, ಕಾಶಿ ಬಗ್ಗೆ ದೇಶದ ಜನತೆಗೆ ಗೊತ್ತಿದೆ. ಈಗ ಒಂದೊಂದೇ ಕ್ಷೇತ್ರಗಳು ಮುಕ್ತವಾಗುತ್ತಿದೆ ಎಂದು ರಘುಪತಿ ಭಟ್ ತಿರುಗೇಟು ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:30 am, Wed, 8 March 23

ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ