ಡಿಕೆ ಶಿವಕುಮಾರ್ ಕಾಂಗ್ರೆಸ್ ಟಿಕೆಟ್​ ಮಾರಾಟ ಮಾಡಿಕೊಂಡಿದ್ದಾರೆ; ಮೊಯ್ದೀನ್ ಬಾವಾ ಗಂಭೀರ ಆರೋಪ

ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ ಆಕಾಂಕ್ಷಿಯಾಗಿದ್ದ ಮೊಯ್ದೀನ್ ಬಾವಾ ಅವರಿಗೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನಲೆ ‘ ಟಿವಿ9 ಜೊತೆ ಮಾತನಾಡುತ್ತಾ ಮೋಯ್ದೀನ್ ಬಾವಾ ಅವರು ಬಾವುಕರಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಮತ್ತು ಮಾಜಿ ಸಚಿವ ಖಾದರ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಡಿಕೆ ಶಿವಕುಮಾರ್ ಕಾಂಗ್ರೆಸ್ ಟಿಕೆಟ್​ ಮಾರಾಟ ಮಾಡಿಕೊಂಡಿದ್ದಾರೆ; ಮೊಯ್ದೀನ್ ಬಾವಾ ಗಂಭೀರ ಆರೋಪ
ಮೊಯ್ದೀನ್ ಬಾವಾ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Apr 20, 2023 | 11:57 AM

ಮಂಗಳೂರು: ವಿಧಾನಸಭೆ ಚುನಾವಣಾ(Karnataka Assembly Election) ಕಾವು ಜೋರಾಗಿದ್ದು, ಇಂದು (ಏ.20) ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.  ಅದರಂತೆ ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ ಆಕಾಂಕ್ಷಿಯಾಗಿದ್ದ ಮೊಯ್ದೀನ್ ಬಾವಾ ಅವರಿಗೆ ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನಲೆ ‘ ಟಿವಿ9 ಜೊತೆ ಮಾತನಾಡುತ್ತಾ ಮೋಯ್ದೀನ್ ಬಾವಾ ಬಾವುಕರಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(D. K. Shivakumar) ಮತ್ತು ಮಾಜಿ ಸಚಿವ ಖಾದರ್(U. T. Khader) ವಿರುದ್ದ ವಾಗ್ದಾಳಿ ನಡೆಸಿದ್ದಾರೆ.‘ಡಿಕೆ ಶಿವಕುಮಾರ್ ಕಾಂಗ್ರೆಸ್ ಟಿಕೆಟ್​ನ್ನು ಮಾರಾಟ ಮಾಡಿದ್ದು, ಹಾಲಿ ಅಭ್ಯರ್ಥಿ ಇನಾಯತ್ ಅಲಿ ಟಿಕೆಟ್​ಗಾಗಿ 2 ಕೋಟಿ ರೂ. ಕೊಟ್ಟಿದ್ದಾರೆ. ಇನಾಯತ್ ಅಲಿ ಡಿಕೆ ಶಿವಕುಮಾರ್​ ಅವರ ಬಿಸ್ನೆಸ್ ಪಾರ್ಟ್ನರ್. ಇನಾಯತ್ ತಮ್ಮನಿಗೆ ಡಿಕೆಶಿ ವಿಚಾರವಾಗಿ ಇಡಿ, ಡ್ರಿಲ್ ಮಾಡಿತ್ತು. ಇದೇ ಕಾರಣಕ್ಕೆ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇನ್ನು ಆರು ತಿಂಗಳ ಹಿಂದೆ ಜಿಲ್ಲೆಗೆ ಬಂದ ಗುತ್ತಿಗೆದಾರನಿಗೆ ಟಿಕೆಟ್ ಮಾರಾಟ ಮಾಡಿದ್ದಾರೆ. ಇವರ ಸರ್ಕಾರದಲ್ಲಿ ಇನಾಯತ್ ಅಲಿಗೆ ಗುತ್ತಿಗೆ ಕೊಡಿಸುತ್ತಿದ್ದರು. ಬಿಜೆಪಿ ಸರ್ಕಾರದಲ್ಲೂ ಇನಾಯತ್ ಅಲಿಗೆ ಗುತ್ತಿಗೆ ಕೊಡಿಸಿ 40, 50 ಪರ್ಸೆಂಟ್​​ ಕಮಿಷನ್ ಕೊಡಿಸಿದ್ದಾರೆ. ಈ ಬಗ್ಗೆ ವಿಜಯೇಂದ್ರ ಅವರ ಬಳಿ ಕೇಳಿ. ಬಿಜೆಪಿ ವಿರುದ್ಧ ಭ್ರಷ್ಟಾಚಾರ ಕುರಿತು ಮಾತನಾಡಲು ಕಾಂಗ್ರೆಸ್​ಗೆ ನೈತಿಕತೆ ಇಲ್ಲ. ಯಾವುದೇ ಪ್ರಭಾವ ಇಲ್ಲದೇ ರಾಹುಲ್ ಗಾಂಧಿಯವರು ಕಳಿಸಿದ ಸರ್ವೇ ಟೀಂ ಆಧಾರದಲ್ಲಿ ಟಿಕೆಟ್ ಎಂದು ಹೇಳಿದ್ದರು. ಸಿಇಸಿ ಚೇರ್​ಮನ್ ಮೋಹನ್ ಪ್ರಕಾಶ್ ಸಮೀಕ್ಷೆ ರಿಪೋರ್ಟ್ ನನಗೆ ತೋರಿಸಿದ್ದರು ಎಂದಿದ್ದಾರೆ.

ಇದನ್ನೂ ಓದಿ:ರಾಜಕೀಯ ತಿರುವು ಪಡೆದುಕೊಂಡ ಬಿಜೆಪಿ ಯುವ ಮೋರ್ಚಾ ಮುಖಂಡ ಹತ್ಯೆ ಕೇಸ್; ಇದು ರಾಜಕೀಯ ಕೊಲೆ ಎಂದ ಪ್ರಲ್ಹಾದ್ ಜೋಶಿ

ಈ ರಿಪೋರ್ಟ್ ಅಲ್ಲಿ​ 78% ಜನರು ನನಗೆ ಆಶೀರ್ವಾದ ಮಾಡಿದ್ದರು, 7% ಈಗಿನ ಅಭ್ಯರ್ಥಿ ಪರ ಇತ್ತು. ಹೀಗಾಗಿ ಮೋಹನ್ ಪ್ರಕಾಶ್ ಕ್ಷೇತ್ರಕ್ಕೆ ಹೋಗಿ ಕೆಲಸ ಮಾಡಿ ಅಂದಿದ್ರು. ಆದರೆ ರಾಹುಲ್ ಗಾಂಧಿ ಕೋಲಾರಕ್ಕೆ ಬಂದಾಗ, ಇನಾಯತ್ ಆಲಿ ಲಾಬಿ ಮಾಡಿದರೂ ರಾಹುಲ್ ಗಾಂಧಿ ಗಮ‌ನ ಕೊಟ್ಟಿಲ್ಲ. ಇದಾದ ಬಳಿಕ ಡಿಕೆ ಶಿವಕುಮಾರ ಅವರು ಖರ್ಗೆ ಜೊತೆ ಹೋಗಿ ನನ್ನ ಹೆಸರು ತಡೆದಿದ್ದಾರೆ. ವಾಮಮಾರ್ಗ ಉಪಯೋಗಿಸಿ ಕಾಂಗ್ರೆಸ್ ಟಿಕೆಟ್ ತಪ್ಪಿಸಿದ್ದಾರೆ. ಒಬ್ಬ ಗುತ್ತಿಗೆದಾರನಿಗೆ ಅಧ್ಯಕ್ಷರು ಅಭ್ಯರ್ಥಿಯನ್ನ ಮಾರಾಟ ಮಾಡಿದ್ದಾರೆ. ಇದು ಟಿಕೆಟ್ ಮಾರಾಟ, ಕಾಂಗ್ರೆಸ್ ಪಕ್ಷಕ್ಕೆ ಇದು ಶೇಮ್ ಎಂದಿದ್ದಾರೆ.

ಡಿಕೆಶಿ ನನ್ನನ್ನ ವೈರಿಯಾಗಿ ಕಾಡಿ ಇನಾಯತ್ ಆಲಿಗೆ ಟಿಕೆಟ್ ಕೊಟ್ಟರು

ಇನಾಯತ್ ಆಲಿ ಬಿಜೆಪಿ ವಿರುದ್ದ ಹೋರಾಟ ಮಾಡಿಲ್ಲ, ನನ್ನ ಅಭಿಮಾನಿಗಳ ಜೊತೆ ಹೊರಗಡೆಯಿಂದ ಜನ ತಂದು ಹಣದ ಆಮಿಷವೊಡ್ಡಿದ್ದಾರೆ. ಇನಾಯತ್ ಆಲಿ ಎರಡು ಕೋಟಿ ರೂ. ನ್ಯಾಶನಲ್ ಹೆರಾಲ್ಡ್​ಗೆ ಕೊಟ್ಟಿದ್ದಾರಂತೆ. ಇದನ್ನು ಡಿಕೆಶಿ ಸಿಇಸಿ ಸಭೆಯಲ್ಲಿ ರಾಹುಲ್ ಗಾಂಧಿ ಎದುರಲ್ಲೇ ಹೇಳಿದ್ದಾರೆ. ಕರಾವಳಿ ಭಾಗದ ಕೆಲವರು ವ್ಯವಸ್ಥೆ ಮಾಡಿ ನನ್ನ ಟಿಕೆಟ್ ತಪ್ಪಿಸಿದ್ದಾರೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಮುಳುಗಿಸಿದ ಎಂಎಲ್ಸಿ ನನಗೆ ಟಿಕೆಟ್ ತಪ್ಪಿಸಿದ್ದಾರೆ ಎಂದು ಖಾದರ್ ಮತ್ತು ಎಂಎಲ್​ಸಿ ಮಂಜುನಾಥ ಭಂಡಾರಿ ವಿರುದ್ದ ಆರೋಪ ಮಾಡಿದ್ದಾರೆ.

ಇದನ್ನೂ ಓದಿ:ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಮೇಲೆ 40 ಪ್ರಕರಣ; ಪ್ರಿಯಾಂಕ್ ಖರ್ಗೆ ಸುಳ್ಳು ಪ್ರಕರಣ ದಾಖಲು ಆರೋಪ

ಇನ್ನು ರಾತ್ರಿ ಎರಡು ಗಂಟೆಯವರೆಗೆ ಖರ್ಗೆಯವರ ಮನೆ ಬಳಿ ಇದ್ದೆ. ಪೂಜಾರಿ, ವೀರಪ್ಪ ಮೊಯಿಲಿ ಇದ್ದಾಗ ಸರಿ ಇತ್ತು. ಖಾದರ್​ಗೆ ನಾನು ಕೋರಿಕೊಂಡೆ, ಸರ್ವೇ ಪ್ರಕಾರ ಟಿಕೆಟ್ ಕೊಡಿ ಅಂತ. ಆದರೆ ಅವರು ನನ್ನ ಪರವಾಗಿ ನಿಲ್ಲಲೇ ಇಲ್ಲ. ಹೀಗಾಗಿ ನಾನು ಕಾಂಗ್ರೆಸ್​ಗೆ ರಾಜೀನಾಮೆ ಸಲ್ಲಿಸುತ್ತಿದ್ದು, ಕಾರ್ಯಕರ್ತರ ಒತ್ತಾಯದ ಹಿನ್ನೆಲೆ ಜೆಡಿಎಸ್ ಸೇರುತ್ತಿದ್ದೇನೆ. ಮಾನ್ಯ ಕುಮಾರಣ್ಣ ಮತ್ತು ದೇವೇಗೌಡರ ಆಶೀರ್ವಾದ ನನಗೆ ಇದ್ದು, ಇಂದು ಮಂಗಳೂರು ಉತ್ತರದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದೆನೆ. ಜೆಡಿಎಸ್​ನಿಂದ ನಿಂತು ಮಂಗಳೂರು ಉತ್ತರದಲ್ಲಿ ಗೆಲ್ಲುತ್ತೇನೆ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:52 am, Thu, 20 April 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ