AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರ ಹೇಳಿಕೆ: ದೂರಿನ ವಿಚಾರಣೆ ಕೈಗೆತ್ತಿಕೊಂಡ ಮಂಗಳೂರು ಕೋರ್ಟ್

ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗೆ ಅನ್ಯಾಯ ಆಗುತ್ತಿದ್ದರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಹೇಳಿಕೆ ನೀಡಿದ್ದರು. ಸದ್ಯ ಈ ವಿಚಾರವಾಗಿ ಡಿಕೆ ಸುರೇಶ್ ವಿರುದ್ದದ ದೂರಿನ‌‌ ವಿಚಾರಣೆಯನ್ನು ಮಂಗಳೂರು ಕೋರ್ಟ್ ಕೈಗೆತ್ತಿಕೊಂಡಿದೆ. ಆದರೆ ದೂರು ಅರ್ಜಿ ಸ್ವೀಕರಿಸಿದ ಮಂಗಳೂರಿನ 2ನೇ JMFC ನ್ಯಾಯಾಲಯ ಫೆ.12ಕ್ಕೆ ವಿಚಾರಣೆ ಮುಂದೂಡಿದೆ. 

ಸಂಸದ ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರ ಹೇಳಿಕೆ: ದೂರಿನ ವಿಚಾರಣೆ ಕೈಗೆತ್ತಿಕೊಂಡ ಮಂಗಳೂರು ಕೋರ್ಟ್
ಸಂಸದ ಡಿಕೆ ಸುರೇಶ್
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Feb 07, 2024 | 8:54 PM

Share

ಮಂಗಳೂರು, ಫೆಬ್ರವರಿ 7: ಕೇಂದ್ರದ ಮಧ್ಯಂತರ ಬಜೆಟ್​ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಹೇಳುವ ಬರದಲ್ಲಿ ದಕ್ಷಿಣ ಭಾರತ ಪ್ರತ್ಯೇಕ ದೇಶದ ಬಗ್ಗೆ ಸಂಸದ ಡಿ.ಕೆ.ಸುರೇಶ್ (DK Suresh)  ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಸದ್ಯ ಈ ವಿಚಾರವಾಗಿ ಡಿಕೆ ಸುರೇಶ್ ವಿರುದ್ದದ ದೂರಿನ‌‌ ವಿಚಾರಣೆಯನ್ನು ಮಂಗಳೂರು ಕೋರ್ಟ್ ಕೈಗೆತ್ತಿಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಎಫ್ಐಆರ್ ದಾಖಲಿಸಲು ನಿರ್ದೇಶನ ನೀಡುವಂತೆ ದೂರುದಾರ ವಿಕಾಸ್ ಪುತ್ತೂರು ಪರ ವಕೀಲ ಮೋಹನ್ ರಾಜ್ ಕೆ.ಆರ್ ವಾದ ಮಂಡಿಸಿದ್ದಾರೆ. ಎಫ್ಐಆರ್ ದಾಖಲಿಸಿ ಡಿಕೆ ಸುರೇಶ್ ವಿರುದ್ದ ತನಿಖೆ‌ ನಡೆಸಲು ನಿರ್ದೇಶಿಸಲು ಮನವಿ ಮಾಡಿದ್ದು, ಆದರೆ ದೂರು ಅರ್ಜಿ ಸ್ವೀಕರಿಸಿದ ಮಂಗಳೂರಿನ 2ನೇ JMFC ನ್ಯಾಯಾಲಯ ಫೆ.12ಕ್ಕೆ ವಿಚಾರಣೆ ಮುಂದೂಡಿದೆ.

ಸಂಸದರಾಗಿರುವ ಕಾರಣ ಪ್ರಸ್ತುತ ನ್ಯಾಯಾಲಯದ ವ್ಯಾಪ್ತಿ ಬಗ್ಗೆ ಮುಂದಿನ ದಿನಾಂಕ ವಿಚಾರಣೆ ಸಾಧ್ಯತೆ ಇದೆ. ಡಿಕೆ.ಸುರೇಶ್ ವಿರುದ್ದ ಪ್ರಕರಣ ದಾಖಲಿಸುವಂತೆ ಬಿಜೆಪಿ ಮುಖಂಡ ವಿಕಾಸ್.ಪಿ ದೂರು ಅರ್ಜಿ ಸಲ್ಲಿಸಿದ್ದರು.

ಇದನ್ನು ಓದಿ: ಪ್ರತ್ಯೇಕ ರಾಷ್ಟ್ರ: ಡಿಕೆ ಸುರೇಶ್​ ಹೇಳಿಕೆ ಪ್ರಸ್ತಾಪಿಸಿ ಹಿಗ್ಗಾಮುಗ್ಗಾ ಜಾಡಿಸಿದ ಮೋದಿ!

ಸೆಕ್ಷನ್ 124 ಎ ಅಡಿ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿತ್ತು. ಜೊತೆಗೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ, ಮಂಗಳೂರು ಉತ್ತರ ಪೊಲೀಸ್ ಠಾಣೆಗೂ ದೂರು ನೀಡಿದ್ದರು. ಎಫ್​ಐಆರ್ ದಾಖಲಿಸಿ ತನಿಖೆ ನಡೆಸಲು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಠಾಣಾಧಿಕಾರಿಯವರಿಗೆ ಆದೇಶಿಸುವಂತೆ ಮನವಿ ಮಾಡಿದ್ದರು.

ದೇಶ ಒಡೆಯುವ ಬಗ್ಗೆ ಮಾತನಾಡಿಲ್ಲ ಎಂದ ಡಿಕೆ ಸುರೇಶ್​

ಪ್ರಧಾನಿ ಮೋದಿ ಟೀಕೆ ಬೆನ್ನಲ್ಲೇ ಪ್ರತಿಕ್ರಿಯಿಸಿದ್ದ ಸಂಸದ ಡಿ.ಕೆ.ಸುರೇಶ್, ನಾನು ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಪ್ರಸ್ತಾಪಿಸಿದ್ದೆ. ಕೇವಲ ಕರ್ನಾಟಕ ಮಾತ್ರವಲ್ಲ, ದಕ್ಷಿಣ ಭಾರತವನ್ನು ಉಲ್ಲೇಖ ಮಾಡಿದ್ದೆ. ಯಾವತ್ತೂ ದೇಶ ಒಡೆಯುವ ಬಗ್ಗೆ ಮಾತನಾಡಿಲ್ಲ. ನನ್ನ ಹೇಳಿಕೆಯನ್ನು ಬಿಜೆಪಿ ತಿರುಚುವ ಪ್ರಯತ್ನ ಮಾಡುತ್ತಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ದೇಶವನ್ನು ಒಡೆಯುತ್ತಿರುವುದು ಬಿಜೆಪಿ: ಬಿ.ಕೆ.ಹರಿಪ್ರಸಾದ್ 

ಈ ದೇಶವನ್ನು ಒಡೆಯುತ್ತಿರುವುದು ಬಿಜೆಪಿ. ಬಿಜೆಪಿಯವರು ತ್ರಿವರ್ಣ ಧ್ವಜ, ಸಂವಿಧಾನ, ಜಾತ್ಯತೀತ ತತ್ವದ ವಿರೋಧಿಗಳು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ವಾಕ್‌ಪ್ರಹಾರ ನಡೆಸಿದ್ದರು. ಡಿಕೆ ಸುರೇಶ್ ಹೇಳಿಕೆಯನ್ನು ತಿರುಚಲಾಗಿದೆ ಎಂದಿರುವ ಶಾಸಕ ಬಾಲಕೃಷ್ಣ, ಅನ್ಯಾಯ ಸರಿಪಡಿಸದಿದ್ದರೆ ಈ ರೀತಿ ಧ್ವನಿ ಏಳುತ್ತೆ ಎಂಬ ಅಭಿಪ್ರಾಯದಲ್ಲಿ ಅವರು ಹೇಳಿದ್ದಾರೆಂದು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ಪ್ರತ್ಯೇಕ ರಾಷ್ಟ್ರ’ ಹೇಳಿಕೆ ವಿರುದ್ಧ ಬಿಜೆಪಿ ಹೋರಾಟ: ಯುಟರ್ನ್ ಹೊಡೆದ್ರಾ ಡಿಕೆ ಸುರೇಶ್?

ಡಿ.ಕೆ.ಸುರೇಶ್ ಪ್ರತ್ಯೇಕ ರಾಷ್ಟ್ರದ ಹೇಳಿಕೆ ಸಂಸತ್‌ನಲ್ಲೂ ಸದ್ದು ಮಾಡಿತ್ತು. ಆದರೆ ಕಾಂಗ್ರೆಸ್ ನಾಯಕರು ಮಾತ್ರ ಹೇಳಿಕೆ ತಿರುಚಲಾಗಿದೆ ಎಂದು ಡ್ಯಾಮೇಜ್ ಕಂಟ್ರೋಲ್‌ಗೆ ಯತ್ನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.