ಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಆಜಾನ್‌ ಬಗ್ಗೆ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

|

Updated on: Mar 13, 2023 | 9:45 AM

ಮಂಗಳೂರಿನಲ್ಲಿ ಕೆ.ಎಸ್.ಈಶ್ವರಪ್ಪ ಆಜಾನ್‌ ಬಗ್ಗೆ ವಿವಾದಾತ್ಮಕ ಹೇಳಿಕೆ‌ ನೀಡಿದ್ದಾರೆ. ಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಎಂದಿದ್ದಾರೆ.

ಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಆಜಾನ್‌ ಬಗ್ಗೆ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ
ಕೆಎಸ್ ಈಶ್ವರಪ್ಪ
Follow us on

ಮಂಗಳೂರು: ಕೆ.ಎಸ್.ಈಶ್ವರಪ್ಪ(KS Eshwarappa) ಮಸೀದಿಗಳಲ್ಲಿ ಕೂಗುವ ಆಜಾನ್‌(Azaan) ಬಗ್ಗೆ ವಿವಾದಾತ್ಮಕ ಹೇಳಿಕೆ‌ ನೀಡಿದ್ದಾರೆ. ಮಂಗಳೂರಿನ ಕಾವೂರಿನ ಶಾಂತಿನಗರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಷಣ ಮಾಡ್ತಿದ್ದ ಕೆ.ಎಸ್.ಈಶ್ವರಪ್ಪ, ನಾನು ಎಲ್ಲಿ ಹೋದ್ರು ಇದೊಂದು ತಲೆನೋವು. ಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಎಂದು ಆಜಾನ್‌ ಬಗ್ಗೆ ವಿವಾದಾತ್ಮಕ ಹೇಳಿಕೆ‌ ನೀಡಿದ್ದಾರೆ.

ಮಂಗಳೂರಿನ ಕಾವೂರಿನ ಶಾಂತಿನಗರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಕೆ.ಎಸ್.ಈಶ್ವರಪ್ಪ ಭಾಷಣ ಮಾಡುತ್ತಿದ್ದರು. ಈ ವೇಳೆ ಸ್ಥಳೀಯ ಮಸೀದಿಯಿಂದ ಆಜಾನ್‌ ಕೇಳಿ ಬಂದಿದೆ. ಇದರಿಂದ ಸಿಡಿಮಿಡಿಗೊಂಡ ಈಶ್ವರಪ್ಪ ಆಜಾನ್ ಬಗ್ಗೆ ವಿವಾದಾತ್ಮಕ ಹೇಳಿಕೆ‌ ನೀಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ಗೆ ಬರ್ತಿಯೋ ಸಿಡಿ ಬಿಡ್ಲೋ ಎಂದು ಮಂತ್ರಿಗೆ ಡಿಕೆ ಶಿವಕುಮಾರ್ ಹೆದರಿಸುತ್ತಿದ್ದಾರೆ, ರಮೇಶ್​ ಜಾರಕಿಹೊಳಿ ಗಂಭೀರ ಆರೋಪ

ಈಶ್ವರಪ್ಪ ಹೇಳಿದ್ದೇನು?

ನಾನು ಎಲ್ಲಿ ಹೋದ್ರು ಇದೊಂದು ತಲೆನೋವು. ಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಮೈಕ್ ಹಿಡ್ಕೊಂಡು ಮಾತ್ರ ಹೇಳಿದರೆ ಅವನಿಗೆ ಕಿವುಡಾ ಅನ್ನುತ್ತೇವೆ. ಸುಪ್ರೀಂಕೋರ್ಟ್ ಆದೇಶವಿದ್ದು ಇಂದಲ್ಲ, ನಾಳೆ ಈ ಸಮಸ್ಯೆ ಇತ್ಯರ್ಥವಾಗಲಿದೆ. ಇದರಲ್ಲಿ ಯಾವುದೇ ಅನುಮಾನಬೇಡ. ಎಲ್ಲಾ ಧರ್ಮಗಳಿಗೆ ಗೌರವ ಕೊಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳುತ್ತಾರೆ. ಮೈಕ್‌ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳುವುದಾ? ನಮ್ಮ ದೇವಸ್ಥಾನಗಳಲ್ಲೂ ಪೂಜೆ ಮಾಡುತ್ತೇವೆ‌. ಶ್ಲೋಕ, ಭಜನೆಗಳನ್ನು ಹೇಳಲಾಗುತ್ತದೆ. ಅವರಿಗಿಂತ ಹೆಚ್ಚು ಭಕ್ತಿ ನಮ್ಮಲ್ಲೂ ಇದೆ. ಪ್ರಪಂಚದಲ್ಲಿ ಧರ್ಮವನ್ನು ಉಳಿಸುವಂಥಹ ದೇಶ ಭಾರತ ಮಾತ್ರ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:03 am, Mon, 13 March 23