ವಿದೇಶದಲ್ಲಿ ಆಸ್ತಿ ಮಾಡಿದ್ದ ಮಂಗಳೂರು ಉದ್ಯಮಿಯ ಕೋಟ್ಯಂತರ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘಿಸಿ ವಿದೇಶದಲ್ಲಿ ಕೋಟಿ ಮೌಲ್ಯದ ಆಸ್ತಿ ಹೊಂದಿರುವ ಹಿನ್ನೆಲೆ ಇಡಿ ಆಸ್ತಿ ಜಪ್ತಿ ಮಾಡಿದೆ. ಭಾರತೀಯ ಲೆಕ್ಕಾಚಾರದ ಪ್ರಕಾರ 17.34 ಕೋಟಿ ರೂ. ಮೌಲ್ಯದ ಆಸ್ತಿ ವಿದೇಶದಲ್ಲಿ ಪತ್ತೆಯಾಗಿದೆ.

ವಿದೇಶದಲ್ಲಿ ಆಸ್ತಿ ಮಾಡಿದ್ದ ಮಂಗಳೂರು ಉದ್ಯಮಿಯ ಕೋಟ್ಯಂತರ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ
ಮುಕ್ಕ ಗ್ರೂಪ್ ಆಫ್ ಕಂಪನೀಸ್​​ನ ಮೊಹಮ್ಮದ್ ಹ್ಯಾರಿಸ್
Follow us
TV9 Web
| Updated By: ಆಯೇಷಾ ಬಾನು

Updated on:Jan 14, 2023 | 10:54 AM

ಮಂಗಳೂರು: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮಾ) ಉಲ್ಲಂಘನೆ ಹಿನ್ನೆಲೆ ಉದ್ಯಮಿಯ ಕೋಟ್ಯಂತರ ಮೌಲ್ಯದ ಆಸ್ತಿಯನ್ನು ಇಡಿ ಜಪ್ತಿ ಮಾಡಿದೆ. ಮುಕ್ಕ ಗ್ರೂಪ್ ಆಫ್ ಕಂಪನೀಸ್​​ನ ಮೊಹಮ್ಮದ್ ಹ್ಯಾರಿಸ್ ಅವರ ಹೆಸರಿನಲ್ಲಿದ್ದ 17.34 ಕೋಟಿಯ ಸ್ಥಿರಾಸ್ತಿ ಜಪ್ತಿ ಮಾಡಲಾಗಿದೆ.

ಆದಾಯ ತೆರಿಗೆ ಇಲಾಖೆಯ ಮಾಹಿತಿಯ ಆಧಾರದಲ್ಲಿ ಇಡಿ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಿದ್ದರು. ತನಿಖೆ ಸಂದರ್ಭದಲ್ಲಿ ಹ್ಯಾರಿಸ್ ಯುಎಇಯಲ್ಲಿ ಫ್ಲ್ಯಾಟ್​​ ಹೊಂದಿರುವುದು, ವಿದೇಶಿ ಬ್ಯಾಂಕ್ ಖಾತೆ, ವ್ಯಾಪಾರ ಘಟಕದಲ್ಲಿ ಹೂಡಿಕೆ ಮಾಡಿದ್ದು ಪತ್ತೆಯಾಗಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘಿಸಿ ವಿದೇಶದಲ್ಲಿ ಕೋಟಿ ಮೌಲ್ಯದ ಆಸ್ತಿ ಹೊಂದಿರುವ ಹಿನ್ನೆಲೆ ಇಡಿ ಆಸ್ತಿ ಜಪ್ತಿ ಮಾಡಿದೆ. ಭಾರತೀಯ ಲೆಕ್ಕಾಚಾರದ ಪ್ರಕಾರ 17.34 ಕೋಟಿ ರೂ. ಮೌಲ್ಯದ ಆಸ್ತಿ ವಿದೇಶದಲ್ಲಿ ಪತ್ತೆಯಾಗಿದೆ. ಇದು ಫೆಮಾ ಕಾಯ್ದೆಯ ಸೆಕ್ಷನ್ 4ರ ಅನ್ವಯ ಕಾನೂನು ಉಲ್ಲಂಘನೆಯಾಗಿದೆ. ಕಾಯ್ದೆ ಪ್ರಕಾರ ವಿದೇಶದಲ್ಲಿ ಮಾಡಿದ ಆಸ್ತಿಯನ್ನು ಭಾರತದಲ್ಲಿ ವಶಪಡಿಸಿಕೊಳ್ಳಲು ಇಡಿ ತಂಡಕ್ಕೆ ಅಧಿಕಾರವಿದೆ.

ಮಂಗಳೂರಿನ 2 ಫ್ಲ್ಯಾಟ್, ಒಂದು ಕೈಗಾರಿಕಾ ನಿವೇಶನ ಜಪ್ತಿ ಮಾಡಲಾಗಿದೆ. ‘ಫೆಮಾ’ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಮಾಧ್ಯಮ ಪ್ರಕಟಣೆ ಬಿಡುಗಡೆಯಾಗಿದೆ.

ಇದನ್ನೂ ಓದಿ: ಶಿವಮೊಗ್ಗ: ಚಿನ್ನಾಭರಣ ರಿಪೇರಿಗೆ ಬಂದಿದ್ದ ವ್ಯಕ್ತಿಯ ಬ್ಯಾಗ್​ ಕದ್ದೊಯ್ದ ಖದೀಮರು

ಮಂಗಳೂರು ಡಾಕ್ಟರುಗಳ ನಶಾ ಲೋಕ: ಊರು ಬಿಡುತ್ತಿರುವ ಆರೋಪಿ ವೈದ್ಯರು-ವಿದ್ಯಾರ್ಥಿಗಳು, ಬೆನ್ನುಹತ್ತಿದ CCB, ಅನೇಕರು ಅರೆಸ್ಟ್!

ಮಂಗಳೂರು: ಮಂಗಳೂರಿನಲ್ಲಿ ಡ್ರಗ್ಸ್ ದಂದೆ(Drugs) ಅಪರೇಷನ್ ಮುಂದುವರೆದಿದೆ. ಸಿಸಿಬಿ ಪೊಲೀಸರು(CCB Police) ಡ್ರಗ್ಸ್ ಜಾಲ ಪತ್ತೆಗೆ ಬಲೆ ಬೀಸಿದ್ದು ಇಂದು ಭರ್ಜರಿ ಭೇಟೆಯಾಡಿ ಅನೇಕರನ್ನು ಬಂಧಿಸಿದ್ದಾರೆ. ಉಡುಪಿಯ ಪ್ರತಿಷ್ಠಿತ ಕಾಲೇಜಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಅಲ್ಲದೆ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಸರ್ಜನ್ ಹಾಗೂ ಓರ್ವ ವೈದ್ಯಕೀಯ ವಿದ್ಯಾರ್ಥಿಯನ್ನು ಅರೆಸ್ಟ್ ಮಾಡಲಾಗಿದೆ.

ಡ್ರಗ್ಸ್ ಪೂರೈಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ಮೂಲದ ಸುಕೇತ್ ಕಾವಾ(33), ಉಡುಪಿಯ ಸುನೀಲ್(32), ತಮಿಳುನಾಡಿನ ಅರವಿಂದ(24) ಬಂಧಿತ ಆರೋಪಿಗಳು. ಪೊಲೀಸರು ಆರೋಪಿಗಳಿಂದ ಗಾಂಜಾದಿಂದ ತಯಾರಿಸಿದ ಭಾರಿ ಪ್ರಮಾಣದ ಚರಸ್ ಜಪ್ತಿ ಮಾಡಿದ್ದಾರೆ. ಆರೋಪಿಗಳು ಉತ್ತರ ಪ್ರದೇಶದಿಂದ ರೈಲಿನಲ್ಲಿ ಗಾಂಜಾ ತಂದು ಮಂಗಳೂರಿನ ಉದ್ಯಮಿಗಳು, ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:54 am, Sat, 14 January 23

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್