ಕರ್ನಾಟಕ-ಕೇರಳ ಗಡಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಯತ್ನ: ರೈಲು ಹಳಿಯ ಮೇಲೆ ಕಲ್ಲು, ಕಾಂಕ್ರೀಟ್

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Aug 26, 2022 | 10:43 AM

ಮಂಗಳೂರು ಗಡಿ ಭಾಗದಲ್ಲಿ ವಿಧ್ವಂಸಕ ಕೃತ್ಯಕ್ಕೆ ಯತ್ನ ನಡೆಯುತ್ತಿರುವುದು ಜನರಲ್ಲಿ ಆತಂಕ ಉಂಟು ಮಾಡಿದೆ.

ಕರ್ನಾಟಕ-ಕೇರಳ ಗಡಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಯತ್ನ: ರೈಲು ಹಳಿಯ ಮೇಲೆ ಕಲ್ಲು, ಕಾಂಕ್ರೀಟ್
ಕಾಸರಗೋಡಿನಲ್ಲಿ ರೈಲ್ವೆ ಹಳಿಯನ್ನು ಪೊಲೀಸರು ಪರಿಶೀಲಿಸಿದರು.
Follow us on

ಮಂಗಳೂರು: ಕರ್ನಾಟಕದೊಂದಿಗೆ ಗಡಿ ಹಂಚಿಕೊಂಡಿರುವ ಕೇರಳದ ಕಾಸರಗೋಡು ತಾಲ್ಲೂಕಿನ (Kasaragod) ಹಲವೆಡೆ ವಿಧ್ವಂಸಕ ಕೃತ್ಯಕ್ಕೆ ಯತ್ನ ನಡೆದಿರುವ ಆಘಾತಕಾರಿ ಸಂಗತಿ ಬಹಿರಂಗಗೊಂಡಿದೆ. ಕಾಸರಗೋಡಿನ ಹಲವೆಡೆ ರೈಲು ಹಳಿ ತಪ್ಪಿಸುವ ಉದ್ದೇಶದಿಂದ ಕಲ್ಲು, ಕಾಂಕ್ರಿಟ್‌ ತುಂಡುಗಳನ್ನು ಕಿಡಿಗೇಡಿಗಳು ಇರಿಸಿದ್ದರು. ಆಗಸ್ಟ್ 21ರ ಭಾನುವಾರ ಕೋಟಿಕುಳಂ-ಬೇಕಲ ನಡುವೆ ಘಟನೆ ನಡೆದಿದೆ. ತೃಕ್ಕನ್ನಾಡು ದೇಗುಲದ ಹಿಂದೆ ರೈಲ್ವೆ ಹಳಿಗಳ ಮೇಲೆ ಕಬ್ಬಿಣದ ಸರಳುಗಳು ಪತ್ತೆಯಾಗಿವೆ. ರೈಲ್ವೆ ಗಾರ್ಡ್‌ ಸಮಯಪ್ರಜ್ಞೆಯಿಂದ ದುರಂತ ತಪ್ಪಿದೆ. ಕುಂಬಳೆ ನಿಲ್ದಾಣದ ಬಳಿ ಹಳಿಗಳ ಮೇಲೂ ಕಲ್ಲುಗಳು ಪತ್ತೆಯಾಗಿವೆ. 35 ಕೆಜಿ ತೂಗುವ ಕಾಂಕ್ರೀಟ್‌ ತುಂಡೊಂದು ಪತ್ತೆಯಾಗಿದೆ. ಈ ಬೆಳವಣಿಗೆಗಳ ಬಗ್ಗೆ ರೈಲ್ವೆ ಪೊಲೀಸರು (Railway Police) ಮತ್ತು ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕಳೆದ ಶನಿವಾರ ಚಿತ್ತಾರಿ ಎಂಬಲ್ಲಿ ರೈಲು ಕೊಯಬತ್ತೂರು-ಮಂಗಳೂರು ರೈಲಿನ ಮೇಲೆ ಕಲ್ಲೆಸೆತ ನಡೆದಿದೆ. ಕಳೆದ ಕೆಲ ದಿನಗಳಲ್ಲಿ ಕೇರಳ ರಾಜ್ಯದ ಕಾಸರಗೋಡಿನ ಹಲವೆಡೆ ರೈಲುಗಳನ್ನು ಗುರಿಯಾಗಿಸಿ ವಿಧ್ವಂಸಕ ಕೃತ್ಯ ಎಸಗಿರುವುದು ಪತ್ತೆಯಾಗಿದೆ. ತೃಕ್ಕನ್ನಾಡು, ಕುಂಬಳೆ, ಹೊಸದುರ್ಗ, ತಳಂಗರೆದಲ್ಲಿ ರೈಲು ಹಳಿ ತಪ್ಪಿಸಲು ದುಷ್ಕರ್ಮಿಗಳು ಪ್ರಯತ್ನಿಸಿದ್ದಾರೆ.

ಅಗಸ್ಟ್​ 21ರ ಭಾನುವಾರ ಕೋಟಿಕುಳಂ-ಬೇಕಲ ಮಧ್ಯೆ ತೃಕ್ಕನ್ನಾಡು ದೇಗುಲದ ಹಿಂದುಗಡೆ ರೈಲು ಹಳಿಯಲ್ಲಿ ಕಬ್ಬಿಣದ ಸರಳುಗಳು ಪತ್ತೆಯಾಗಿದ್ದವು. ರೈಲ್ವೇ ಭದ್ರತಾ ಪಡೆ (Railway Protection Force – RFP) ರೈಲ್ವೆ ಪೊಲೀಸರು ಮತ್ತು ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಂಗಳೂರು-ಚೆನ್ನೈ ಸೂಪರ್‌ಫಾಸ್ಟ್‌ ರೈಲು ಸಂಚರಿಸುವ ಮಾರ್ಗದಲ್ಲಿ ಕಲ್ಲುಗಳು ಪತ್ತೆಯಾಗಿವೆ. ಕಳೆದ ಶನಿವಾರ ಚಿತ್ತಾರಿ ಎಂಬಲ್ಲಿ ಕೊಯಮತ್ತೂರು-ಮಂಗಳೂರು ರೈಲಿನ ಮೇಲೆ ಕಲ್ಲು ತೂರಾಟ ನಡೆದಿತ್ತು. ಸ್ಥಳಕ್ಕೆ ಉತ್ತರ ವಲಯ ರೈಲ್ವೆ ಪೊಲೀಸ್ ಡಿವೈಎಸ್​ಪಿ ಕೆ.ಎನ್.ರಾಧಾಕೃಷ್ಣನ್ ನೇತೃತ್ವದಲ್ಲಿ ‌ತನಿಖೆ ನಡೆಸಲಾಗುತ್ತಿದೆ.

ಮಂಗಳೂರು ಗಡಿ ಭಾಗದಲ್ಲಿ ವಿಧ್ವಂಸಕ ಕೃತ್ಯಕ್ಕೆ ಯತ್ನ ನಡೆಯುತ್ತಿರುವುದು ಜನರಲ್ಲಿ ಆತಂಕ ಉಂಟು ಮಾಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧೆಡೆ ಕೋಮುದಳ್ಳುರಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಇದಕ್ಕೆ ಕೇರಳದಿಂದ ಬಂದವರು ಕಾರಣ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಹೀಗಾಗಿ ಕೇರಳದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದಿರುವ ಈ ವಿದ್ಯಮಾನವು ಎಲ್ಲರ ಗಮನ ಸೆಳೆದಿದೆ.

Published On - 10:43 am, Fri, 26 August 22