AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಪುತ್ತೂರು ರೈಲು ಮಾರ್ಗ ವಿದ್ಯುದೀಕರಣ ಪೂರ್ಣ; ಪ್ರಾಯೋಗಿಕ ಸಂಚಾರ ಯಶಸ್ವಿ

ಶೀಘ್ರದಲ್ಲೇ ಈ ಮಾರ್ಗದಲ್ಲಿ ಎಲೆಕ್ಟ್ರಿಕ್ ರೈಲು ಸಂಚಾರಕ್ಕೆ ಟ್ರ್ಯಾಕ್‌ನ ಫಿಟ್‌ನೆಸ್ ಪ್ರಮಾಣಪತ್ರವನ್ನು ನೀಡಲಾಗುತ್ತದೆ. ಪುತ್ತೂರು - ಸುಬ್ರಹ್ಮಣ್ಯ ರಸ್ತೆಯ ಕಾಮಗಾರಿ ಅಕ್ಟೋಬರ್​​​ಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

ಮಂಗಳೂರು ಪುತ್ತೂರು ರೈಲು ಮಾರ್ಗ ವಿದ್ಯುದೀಕರಣ ಪೂರ್ಣ; ಪ್ರಾಯೋಗಿಕ ಸಂಚಾರ ಯಶಸ್ವಿ
ಸಾಂದರ್ಭಿಕ ಚಿತ್ರ
Ganapathi Sharma
|

Updated on:Jul 31, 2023 | 4:57 PM

Share

ಮಂಗಳೂರು: ಮಂಗಳೂರಿನ ಪಡೀಲ್ ರೈಲು ನಿಲ್ದಾಣದಿಂದ (Padil Railway Station) ಕಬಕ ಪುತ್ತೂರು (Kabaka Puttur) ರೈಲ್ವೆ ನಿಲ್ದಾಣದ ವರೆಗಿನ ರೈಲು ಮಾರ್ಗದ ವಿದ್ಯುದೀಕರಣ (Electrification) ಕಾಮಗಾರಿ ಪೂರ್ಣಗೊಂಡಿದ್ದು, ಎಲೆಕ್ಟ್ರಿಕಲ್ ರೈಲ್ ಇಂಜಿನ್​​ನ ಯಶಸ್ವಿ ಪ್ರಾಯೋಗಿಕ ಸಂಚಾರ ನಡೆಸಲಾಯಿತು. ಕಬಕ ಪುತ್ತೂರು – ಸುಬ್ರಹ್ಮಣ್ಯ ರಸ್ತೆಯ (48 ಕಿಮೀ) ವಿದ್ಯುದ್ದೀಕರಣದ ಕಾಮಗಾರಿಯೂ ಭರದಿಂದ ಸಾಗುತ್ತಿದೆ ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ. ಬೆಂಗಳೂರು ಮತ್ತು ಮಂಗಳೂರು ನಡುವಣ ಸಂಪರ್ಕದ ಪ್ರಮುಖ ರೈಲು ಮಾರ್ಗ ಇದಾಗಿದೆ.

ಎಲೆಕ್ಟ್ರಿಕಲ್ ರೈಲ್ ಇಂಜಿನ್ ಶುಕ್ರವಾರ ಪ್ರಾಯೋಗಿಕ ಸಂಚಾರ ನಡೆಸಿದೆ. ಪಡೀಲ್​​​ನಿಂದ ಮಧ್ಯಾಹ್ನ 2.30ಕ್ಕೆ ಹೊರಟ ಎಲೆಕ್ಟ್ರಿಕಲ್ ರೈಲ್ ಇಂಜಿನ್ ಸಂಜೆ 4 ಗಂಟೆಗೆ ಕಬಕ ಪುತ್ತೂರು ತಲುಪಿತ್ತು. ನೈಋತ್ಯ ರೈಲ್ವೆಯ ಮುಖ್ಯ ಎಂಜಿನಿಯರ್ ಜೈಪಾಲ್ ಸಿಂಗ್ ಪ್ರಾಯೋಗಿಕ ಸಮಚಾರಕ್ಕೆ ಚಾಲನೆ ನೀಡಿದ್ದರು.

ಶೀಘ್ರದಲ್ಲೇ ಈ ಮಾರ್ಗದಲ್ಲಿ ಎಲೆಕ್ಟ್ರಿಕ್ ರೈಲು ಸಂಚಾರಕ್ಕೆ ಟ್ರ್ಯಾಕ್‌ನ ಫಿಟ್‌ನೆಸ್ ಪ್ರಮಾಣಪತ್ರವನ್ನು ನೀಡಲಾಗುತ್ತದೆ. ಪುತ್ತೂರು – ಸುಬ್ರಹ್ಮಣ್ಯ ರಸ್ತೆಯ ಕಾಮಗಾರಿ ಅಕ್ಟೋಬರ್​​​ಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಹಾಸನ ಮತ್ತು ಸುಬ್ರಹ್ಮಣ್ಯ ರಸ್ತೆ ವಿದ್ಯುದ್ದೀಕರಣಕ್ಕೆ ಇನ್ನೂ ಸ್ವಲ್ಪ ಸಮಯ ಹಿಡಿಯಲಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮಂಗಳೂರು ರೈಲುಗಳಿಗೆ ಕರಾವಳಿಯ ಜನಪ್ರಿಯ ವ್ಯಕ್ತಿಗಳ, ಸ್ಥಳಗಳ ಹೆಸರು ಮರುನಾಮಕರಣ?

ಮಂಗಳೂರು ಹಾಗೂ ಪುತ್ತೂರು ನಡುವಣ ಮಾರ್ಗದಲ್ಲಿ ವಿದ್ಯುದೀಕರಣ ಕಾಮಗಾರಿ 2022ರ ಸೆಪ್ಟೆಂಬರ್​​ನಲ್ಲಿ ಪ್ರಾರಂಭವಾಗಿತ್ತು. ಹಾಸನ ಮತ್ತು ಸುಬ್ರಹ್ಮಣ್ಯ ಮಾರ್ಗದ ವಿದ್ಯುದೀಕರಣಕ್ಕೆ ಇನ್ನೂ ಸ್ವಲ್ಪ ಸಮಯ ಹಿಡಿಯಲಿದೆ ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ.

2021 ರ ಜುಲೈನಲ್ಲಿ, ಮೈಸೂರು – ಹಾಸನ – ಮಂಗಳೂರು (300 ಕಿಮೀ) ರೈಲು ಮಾರ್ಗದ ವಿದ್ಯುದೀಕರಣದ ಒಪ್ಪಂದಕ್ಕೆ ಅನುಮೋದನೆ ನೀಡಲಾಗಿತ್ತು. ಇದರಲ್ಲಿ 47 ಕಿಮೀ ದೂರದ ಅರಸೀಕೆರೆ – ಹಾಸನ ಮಾರ್ಗ ಕೂಡ ಸೇರಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:55 pm, Mon, 31 July 23

Daily Devotional: ದಕ್ಷಿಣಾಯನದ ಮಹತ್ವ ಹಾಗೂ ಇದರ ಫಲ ತಿಳಿಯಿರಿ
Daily Devotional: ದಕ್ಷಿಣಾಯನದ ಮಹತ್ವ ಹಾಗೂ ಇದರ ಫಲ ತಿಳಿಯಿರಿ
ಸರ್ಕಾರಿ ಉದ್ಯೋಗಿಗಳಿಗೆ ಮೇಲಧಿಕಾರಿಗಳೊಂದಿಗೆ ಭಿನ್ನಾಭಿಪ್ರಾಯ ಉಂಟಾಗಬಹುದು
ಸರ್ಕಾರಿ ಉದ್ಯೋಗಿಗಳಿಗೆ ಮೇಲಧಿಕಾರಿಗಳೊಂದಿಗೆ ಭಿನ್ನಾಭಿಪ್ರಾಯ ಉಂಟಾಗಬಹುದು
ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು