ಕರಾವಳಿಯಲ್ಲಿ ಮಳೆ ಕಡಿಮೆಯಾದರು ನಿಲ್ಲದ ಕಡಲ ಅಬ್ಬರ, ಮಂಗಳೂರು ಬೀಚ್​ಗಳಿಗೆ ಪ್ರವಾಸಿಗರಿಗೆ ನಿರ್ಬಂಧ

ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆ ತಗ್ಗಿದರೂ ಕಡಲಬ್ಬರ ಜೋರಾಗಿದೆ. ಸಮುದ್ರ ಪ್ರಕ್ಷುಬ್ಧ ಹಿನ್ನೆಲೆ ಜಿಲ್ಲೆಯ ಎಲ್ಲಾ ಬೀಚ್​ಗಳಿಗೆ ಪ್ರವಾಸಿಗರಿಗೆ ನಿಷೇಧಿಸಲಾಗಿದೆ.

ಕರಾವಳಿಯಲ್ಲಿ ಮಳೆ ಕಡಿಮೆಯಾದರು ನಿಲ್ಲದ ಕಡಲ ಅಬ್ಬರ, ಮಂಗಳೂರು ಬೀಚ್​ಗಳಿಗೆ ಪ್ರವಾಸಿಗರಿಗೆ ನಿರ್ಬಂಧ
ಬೀಚ್
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ರಮೇಶ್ ಬಿ. ಜವಳಗೇರಾ

Updated on: Jul 30, 2023 | 11:13 AM

ಮಂಗಳೂರು, (ಜುಲೈ 30): ಕರ್ನಾಟಕದ (Karnataka) ಕರಾವಳಿ ಭಾಗದಲ್ಲಿ ಕಳೆದ ಎರಡು ವಾರಗಳಿಂದ ಸುರಿಯುತ್ತಿದ್ದ ಮಳೆ(Rain) ಕೊಂಚ ಕಡಿಮೆಯಾಗಿದೆ. ಆದ್ರೆ, ಮಳೆ ತಗ್ಗಿದರೂ ಕಡಲ ಅಬ್ಬರ ಜೋರಾಗಿದೆ. ಮಂಗಳೂರಿನಲ್ಲಿ(Mangaluru)  ಸಮುದ್ರ ಪ್ರಕ್ಷುಬ್ಧ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಬೀಚ್​ಗಳಿಗೆ ನಿರ್ಬಂಧಿಸಲಾಗಿದೆ. ಮಂಗಳೂರಿನ ಎಂಟು ಬೀಚ್ ಗಳಿಗೆ (beaches) ನಿರ್ಬಂಧ ವಿಧಿಸಿ ಸುತ್ತೋಲೆ ಹೊರಡಿಸಲಾಗಿದೆ. ನಿರ್ಬಂಧ ಇದ್ದರೂ ಸಹ ಪ್ರವಾಸಿಗರು ಮಂಗಳೂರಿನ ಪಣಂಬೂರು ಬೀಚ್ ಸಮುದ್ರ ತೀರಕ್ಕೆ ಆಗಮಿಸುತ್ತಿದ್ದಾರೆ. ಎಚ್ಚರಿಕೆಯ ಸೂಚನೆ ನಡುವೆಯೂ ಪ್ರವಾಸಿಗರು ಕಡಲಿಗೆ ಇಳಿಯುತ್ತಿದ್ದು, ಭದ್ರತಾ ಸಿಬ್ಬಂದಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಇದನ್ನೂ ಓದಿ: Kodachadri: ಪ್ರವಾಸಿಗರ ಭೂ ಸ್ವರ್ಗ ಕೊಡಚಾದ್ರಿ ಗಿರಿಗೆ ಇಂದಿನಿಂದ ಪ್ರವೇಶ ನಿಷೇಧ

ಯಾರೂ ಬೀಚ್​ಗೆ ಬರಬಾರದು ಎಂದು ಅಡ್ಡಲಾಗಿ ಹಗ್ಗ ಕಟ್ಟಿದ್ದರೂ ಸಹ ಪ್ರವಾಸಿಗರು ಅದನ್ನು ದಾಟಿ ಬೀಚಿಗೆ ಆಗಮಿಸುತ್ತಿದ್ದಾರೆ. ಇದರಿಂದ ಪೊಲೀಸರು, ಸಮುದ್ರ ತೀರದಿಂದ ಪ್ರವಾಸಿಗರನ್ನು ಚದುರಿಸುತ್ತಿದ್ದಾರೆ. ಅಲ್ಲದೇ ಲೈಫ್ ಗಾರ್ಡ್ ಸಿಬ್ಬಂದಿ ಸಹ ಸೈರನ್ ಹಾಕಿ ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡುತ್ತಿದ್ದಾರೆ. ಅಪಾಯಕಾರಿ ಸ್ಥಳಗಳಲ್ಲಿ ರೀಲ್ಸ್, ಸೆಲ್ಫಿ ತೆಗೆಯದಂತೆಯೂ ನಿರ್ಬಂಧಿಸಲಾಗಿದೆ. ಈಗಾಗಲೇ ಎಂಟು ಬೀಚ್ ಗಳಲ್ಲಿ 24 ಜನ ಹೋಂ ಗಾರ್ಡ್ಸ್ ನೇಮಕ ಮಾಡಲಾಗಿದೆ.

ಮಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್