AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರ ಪರ್ವತದಲ್ಲಿ ಚಾರಣಕ್ಕೆ ನಿರ್ಬಂಧ ಹೇರಿದ್ದೇಕೆ ಎಂಬ ಕಾರಣ ಕೊಟ್ಟ ಅರಣ್ಯ ಸಚಿವ ಈಶ್ವರ್ ಖಂಡ್ರೆ

Kumara Parvath Trekking: ದಕ್ಷಿಣ ಕನ್ನಡ ಜಿಲ್ಲೆಯ ಕುಮಾರ ಪರ್ವತ ಹಾಗೂ ರಾಜ್ಯದ ಇತರ ಚಾರಣ ಸ್ಥಳಗಳ ಮೇಲೆ ಅರಣ್ಯ ಇಲಾಖೆ ನಿರ್ಬಂಧಗಳನ್ನು ಹೇರಿದೆ. ಇದೀಗ ಆ ನಿರ್ಬಂಧ ಹೇರಿರುವ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದು, ಕಾರಣ ನೀಡಿದ್ದಾರೆ.

ಕುಮಾರ ಪರ್ವತದಲ್ಲಿ ಚಾರಣಕ್ಕೆ ನಿರ್ಬಂಧ ಹೇರಿದ್ದೇಕೆ ಎಂಬ ಕಾರಣ ಕೊಟ್ಟ ಅರಣ್ಯ ಸಚಿವ ಈಶ್ವರ್ ಖಂಡ್ರೆ
ಈಶ್ವರ್ ಖಂಡ್ರೆ
ಅಶೋಕ್​ ಪೂಜಾರಿ, ಮಂಗಳೂರು
| Updated By: Ganapathi Sharma|

Updated on:Feb 06, 2024 | 2:09 PM

Share

ಮಂಗಳೂರು, ಫೆಬ್ರವರಿ 6: ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಡಗು ಜಿಲ್ಲೆಯ ಸೋಮವಾರಪೇಟೆಯಿಂದ ಚಾರಣ ಮಾಡಬಹುದಾದ ಪ್ರಸಿದ್ಧ ಸ್ಥಳ ಕುಮಾರ ಪರ್ವತ (Kumara Parvatha) ಚಾರಣಕ್ಕೆ (Trekking) ನಿರ್ಬಂಧ ಹೇರಿದ್ದೇಕೆ ಎಂಬ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwara Khandre) ಸ್ಪಷ್ಟನೆ ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕುಮಾರ ಪರ್ವತ ಚಾರಣಪಥದಲ್ಲಿ ಜನಜಂಗುಳಿಯಿಂದ ಪರಿಸರ ಹಾನಿ ಭೀತಿ ಎದುರಾಗಿದೆ. ಹೀಗಾಗಿ ಚಾರಣ ನಿಯಂತ್ರಣ ಸಂಬಂಧ ವರದಿ ಸಲ್ಲಿಸಲು ಸೂಚಿಸಿದ್ದೇನೆ. ಅದರ ಜೊತೆಗೆ ಚಾರಣಕ್ಕೆ ಆನ್ ಲೈನ್ ದಾಖಲಾತಿ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಏಕ ಬಳಕೆ ಪ್ಲಾಸ್ಟಿಕ್ ತ್ಯಾಜ್ಯದಿಂದ ಅಪಾರ ಹಾನಿಯಾಗುತ್ತಿದೆ. ಕರಾವಳಿ ಪ್ರದೇಶಗಳನ್ನು ಪ್ಲಾಸ್ಟಿಕ್ ಮುಕ್ತ ನಗರ ಮಾಡುವ ಗುರಿ ಇದೆ. ರಾಜ್ಯದ ಎಲ್ಲಾ ಚಾರಣ ಪಥಗಳನ್ನು ಆನ್ ಲೈನ್ ದಾಖಲಾತಿ ವ್ಯಾಪ್ತಿಗೆ ತರುತ್ತೇವೆ. ಏಕಾಏಕಿ ಸಾವಿರಾರು ಜನ ಹೋದರೆ ಇಕ್ಕಟ್ಟಾಗಿ ಸಮಸ್ಯೆ ಆಗುತ್ತದೆ. ಕುಮಾರ ಪರ್ವತದಲ್ಲಿ ಅಂದಾಜು 20 ಕಿ.ಮೀ ಚಾರಣ ಇರಬಹುದು. ಇಂಥ ಜಾಗದಲ್ಲಿ ಎಷ್ಟು ಜನ ಹೋಗಬಹುದು ಅಂತ ನೋಡಿ ಆನ್ ಲೈನ್ ಮೂಲಕ ನಿಗದಿ ಮಾಡುತ್ತೇವೆ. ಮಿತಿ ಹಾಕಿ‌ ಚಾರಣಿಗರಿಗೆ ನಾವು ಪಾಸ್​​ಗಳನ್ನು ಕೊಡುತ್ತೇವೆ. ಅದನ್ನು ಮೀರಿ ಯಾರಿಗೂ‌ ಬರಲು ಅವಕಾಶ‌ ಇಲ್ಲ. ಚಾರಣ ನಿಯಂತ್ರಣವನ್ನು ಮಾಡಲೇ ಬೇಕಿದೆ, ಅದರ ಅಗತ್ಯ ಇದೆ.

ಕರಾವಳಿ ನಿಯಂತ್ರಣ ವಲಯದಲ್ಲಿ ಹಲವೆಡೆ‌ ಕಟ್ಟಡಗಳ ನಿರ್ಮಾಣ ಆಗಿದೆ. ಈ ಬಗ್ಗೆ‌ ದೂರುಗಳು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ವರದಿ ಸಲ್ಲಿಸಲು ಸೂಚಿಸಿದ್ದೇನೆ. ಈ ಭಾಗದಲ್ಲಿ ಮೂರು ಎಕರೆಗಿಂತ ಕಡಿಮೆ ಬೇಸಾಯ ಮಾಡುವ ರೈತರಿದ್ದಾರೆ. ಅವರಿಗೆ‌ ತೊಂದರೆ ಆಗದ ರೀತಿಯಲ್ಲಿ ಅರಣ್ಯ ಒತ್ತುವರಿ ತೆರವಿಗೆ ಸೂಚಿಸಿದ್ದೇನೆ. ಜೊತೆಗೆ‌ ಅರಣ್ಯ ಮತ್ತು‌ ಕಂದಾಯ ಇಲಾಖೆಯ ಜಂಟಿ ಸರ್ವೇ ಆಗಬೇಕಿದೆ. ಅಂಥ ಕಡೆ ಸರ್ವೇ ನಡೆಸಿ ಅರಣ್ಯ ಇಲಾಖೆ ವಶಕ್ಕೆ ಪಡೆಯಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕುಮಾರ ಪರ್ವತದ ತಪ್ಪಲಿನಲ್ಲಿ ನಡೆಯುತ್ತೆ ಕುಕ್ಕೆ ಸುಬ್ರಹ್ಮಣ್ಯ ದೇವರ ಪಾದುಕೆ ಪೂಜೆ, ಇದರ ಹಿಂದಿದೆ ಪುರಾಣ ಕಥೆ

ಅಕ್ರಮ ರೆಸಾರ್ಟ್ ಗಳಿದ್ದರೆ ನಿರ್ದಾಕ್ಷಿಣ್ಯ ಕ್ರಮ

ಸಿಆರ್​​ಝಡ್ ವಲಯದ ಅಕ್ರಮದ ಬಗ್ಗೆ ಪರಿಶೀಲನೆ ಮಾಡಿದ್ದೇನೆ. ಅಲ್ಲಿನ ಅಕ್ರಮ ಚಟುವಟಿಕೆಗಳ ಬಗ್ಗೆ ವರದಿ ಕೇಳಿದ್ದೇನೆ. ಅಕ್ರಮ ರೆಸಾರ್ಟ್​​​ಗಳಿದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಅಕ್ರಮ ಹೋಮ್ ಸ್ಟೇಗಳಿದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಅರಣ್ಯ ಉಳಿಸಲು ಹೆಲಿಕಾಪ್ಟರ್ ಬೇಕಾದರೂ ಬಳಕೆ ಮಾಡುತ್ತೇವೆ. ಕಾಡ್ಗಿಚ್ಚು ನಿಯಂತ್ರಣಕ್ಕೆ ಖಾಸಗಿ ಹೆಲಿಕಾಪ್ಟರ್ ಅವಶ್ಯಕತೆ ಇದ್ದರೆ ಬಳಕೆ ಮಾಡುತ್ತೇವೆ. ಅರಣ್ಯ ಇಲಾಖೆಗೆ ಪ್ರತ್ಯೇಕ ಹೆಲಿಕಾಪ್ಟರ್ ಅವಶ್ಯಕತೆ ಇಲ್ಲ ಎಂದು ಅವರು ಹೇಳಿದರು. ಬೆಳ್ತಂಗಡಿ ಕಳೆಂಜ ಅರಣ್ಯ ಭೂಮಿ ವಿವಾದದಲ್ಲಿ ಸರ್ವೇ ಆಗ್ತಿದೆ. ಅದರ ಬಗ್ಗೆ ಆ ಮೇಲೆ ನಾನು ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:08 pm, Tue, 6 February 24

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ