ಅಕ್ರಮ ಸಾರಾಯಿ ಘಟಕಕ್ಕೆ ಅಬಕಾರಿ ಪೊಲೀಸರ ದಾಳಿ, ಮನೆಯಲ್ಲೇ ಸ್ಪಿರಿಟ್ ತಯಾರಿಸುತ್ತಿದ್ದವರು ವಶ

| Updated By: ಆಯೇಷಾ ಬಾನು

Updated on: Dec 13, 2023 | 1:48 PM

ಕೇರಳ ರಾಜ್ಯಕ್ಕೆ ಸಾಗಾಟ ಮಾಡಲು ಕೇರಳಗಡಿ ಭಾಗ ಕಿನ್ಯಾ ಗ್ರಾಮದ ಸಾಂತ್ಯ ಬಳಿ ಸ್ಪಿರಿಟ್ ದಂಧೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಅಬಕಾರಿ ನಿರೀಕ್ಷಕರ ನೇತೃತ್ವದಲ್ಲಿ 25ಕ್ಕೂ ಅಧಿಕ ಅಧಿಕಾರಿಗಳು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಅಕ್ರಮ ಸಾರಾಯಿ ಘಟಕಕ್ಕೆ ಅಬಕಾರಿ ಪೊಲೀಸರ ದಾಳಿ, ಮನೆಯಲ್ಲೇ ಸ್ಪಿರಿಟ್ ತಯಾರಿಸುತ್ತಿದ್ದವರು ವಶ
ಅಕ್ರಮ ಸಾರಾಯಿ ಘಟಕ
Follow us on

ಮಂಗಳೂರು, ಡಿ.13: ತಲಪಾಡಿ ಸಾಂತ್ಯ ಬಳಿ ಅಬಕಾರಿ ಪೊಲೀಸರು ದಾಳಿ ನಡೆಸಿ ಅಂತಾರಾಜ್ಯ ಸ್ಪಿರಿಟ್ (Spirit) ಮಾರಾಟ ದಂಧೆ ಬಯಲು ಮಾಡಿದ್ದಾರೆ. ಕೇರಳಗಡಿ ಭಾಗ ಕಿನ್ಯಾ ಗ್ರಾಮದ ಸಾಂತ್ಯ ಎಂಬಲ್ಲಿನ ಮನೆಯಲ್ಲಿ ನಡೆಯುತ್ತಿದ್ದ ಸ್ಪಿರಿಟ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು 2240 ಲೀ ಮದ್ಯ ಸಾರ, 222 ಲೀ ನಕಲಿ ಬ್ರಾಂಡಿ ಸಹಿತ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ಮೂವರನ್ನು ವಶಕ್ಕೆ ಪಡೆದಿದ್ದು ಓರ್ವ ಆರೋಪಿ ನಿತ್ಯಾನಂದ ಭಂಡಾರಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಕೇರಳ ರಾಜ್ಯಕ್ಕೆ ಸಾಗಾಟ ಮಾಡಲು ಕೇರಳಗಡಿ ಭಾಗ ಕಿನ್ಯಾ ಗ್ರಾಮದ ಸಾಂತ್ಯ ಬಳಿ ಸ್ಪಿರಿಟ್ ದಂಧೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಅಬಕಾರಿ ನಿರೀಕ್ಷಕರ ನೇತೃತ್ವದಲ್ಲಿ 25ಕ್ಕೂ ಅಧಿಕ ಅಧಿಕಾರಿಗಳು ಗಡಿಭಾಗ ತಲಪಾಡಿಯಲ್ಲಿ ಅಕ್ರಮವಾಗಿ ಸ್ಪಿರಿಟ್‌ ಮತ್ತು ನಕಲಿ ಮದ್ಯ ದಾಸ್ತಾನಿನ‌ ಮೇಲೆ ದಾಳಿ ಮಾಡಿ ಮೂವರನ್ನು ವಶಕ್ಕೆ ಪಡೆಯಲಾಗಿದ್ದು ಓರ್ವ ಆರೋಪಿ ಪರಾರಿಯಾಗಿದ್ದಾನೆ. ತಲಪಾಡಿ ನಿವಾಸಿ ಸತೀಶ್, ಕುಂಜತ್ತೂರು ನಿವಾಸಿಗಳಾದ ನೌಷಾದ್, ಅನ್ಸೀಫ್ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಗಿಫ್ಟ್ ಸೆಂಟರ್​ ಮೂಲಕ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಐವರ ಬಂಧನ

 ಗಾಂಜಾ ಸಾಗಾಟ ಮಾಡುತ್ತಿದ್ದವರು ಅರೆಸ್ಟ್

ಶಿವಮೊಗ್ಗ: ಅನುಪಿನಕಟ್ಟೆ ಸಮೀಪದ ಬೈಪಾಸ್ ರಸ್ತೆಯಲ್ಲಿ ಗಾಂಜಾ ಸಾಗಿಸುತ್ತಿದ್ದ ರಂಜಿತ್, ಕಾರ್ತಿಕ್, ಚೇತನ್, ಅನಿಲ್​ನನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರಿಂದ 1.3 ಲಕ್ಷ ಮೌಲ್ಯದ ಒಣ ಗಾಂಜಾ, ಕೃತ್ಯಕ್ಕೆ ಬಳಸಿದ 2 ಬೈಕ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ಎನ್​ಡಿಪಿಎಸ್​ ಕಾಯ್ದೆಯಡಿ ಕೇಸ್​ ದಾಖಲಾಗಿದೆ.

ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಐವರ ಬಂಧನ

ನಗರದಲ್ಲಿ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಐವರನ್ನು ಕೊತ್ತನೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮುಜಮಿಲ್, ಅಬ್ದುಲ್ ಅಜೀಜ್, ಮಹಮ್ಮದ್ ಅಫ್ಜಲ್, ಅಬ್ದುಲ್ ಸಮೀರ್, ಮುತಾಸಿದ್ದಿಕ್ ಬಂಧಿತ ಆರೋಪಿಗಳು. ಬಂಧಿತರಿಂದ 26 ಲಕ್ಷ ಮೌಲ್ಯದ ಇ-ಸಿಗರೇಟ್ ಉತ್ಪನ್ನ, ವಿದೇಶಿ ಸಿಗರೇಟ್ ಜಪ್ತಿ ಮಾಡಲಾಗಿದೆ. ಆರೋಪಿಗಳು ಅಕ್ರಮವಾಗಿ ಇ-ಸಿಗರೇಟ್ ದಾಸ್ತಾನು ಮಾಡಿ ಮಾರಾಟ ಮಾಡ್ತಿದ್ದರು.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

 

Published On - 10:21 am, Wed, 13 December 23