ಮಂಗಳೂರು: ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ಧ ಮತ್ತೆ ಗಡಿಪಾರು ಅಸ್ತ್ರ

ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ಧ ಮತ್ತೆ ಗಡೀಪಾರು ಅಸ್ತ್ರ ಪ್ರಯೋಗ ಮಾಡಲು ಪೊಲೀಸರು ಮುಂದಾಗಿದ್ದಾರೆ. ಕೋಮು ಗಲಭೆ, ದನಸಾಗಾಟ ಹಲ್ಲೆ, ನೈತಿಕ ಪೊಲೀಸ್ ಗಿರಿ ಸೇರಿ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಸಂಬಂಧ ನಿಮ್ಮನ್ನು ಯಾಕೆ ಗಡೀಪಾರು ಮಾಡಬಾರದು ಎಂದು ಕೇಳಿ ಕಾರ್ಯಕರ್ತರಿಗೆ ನೋಟಿಸ್ ನೀಡಲಾಗಿದೆ.

ಮಂಗಳೂರು: ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ಧ ಮತ್ತೆ ಗಡಿಪಾರು ಅಸ್ತ್ರ
ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ಧ ಮತ್ತೆ ಗಡಿಪಾರು ಅಸ್ತ್ರ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: Rakesh Nayak Manchi

Updated on: Nov 16, 2023 | 12:09 PM

ಮಂಗಳೂರು, ನ.16: ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ಧ ಮತ್ತೆ ಗಡೀಪಾರು ಅಸ್ತ್ರ ಪ್ರಯೋಗ ಮಾಡಲು ಪೊಲೀಸರು ಮುಂದಾಗಿದ್ದಾರೆ. ಕೋಮು ಗಲಭೆ, ದನಸಾಗಾಟ ಹಲ್ಲೆ, ನೈತಿಕ ಪೊಲೀಸ್ ಗಿರಿ ಸೇರಿ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಸಂಬಂಧ ನಿಮ್ಮನ್ನು ಯಾಕೆ ಗಡೀಪಾರು ಮಾಡಬಾರದು ಎಂದು ಕೇಳಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಐವರು ಭಜರಂಗದಳ (Bajrang Dal) ಕಾರ್ಯಕರ್ತರಿಗೆ ನೋಟಿಸ್ ನೀಡಲಾಗಿದೆ.

ನೈತಿಕ ಪೊಲೀಸ್ ಗಿರಿಯಲ್ಲಿ ಭಾಗಿಯಾಗಿದ್ದ ಭಜರಂಗದಳ ಕಾರ್ಯಕರ್ತರಾದ ಲತೇಶ್ ಗುಂಡ್ಯ, ಪ್ರಜ್ವಲ್, ನಿಶಾಂತ್, ಪ್ರದೀಪ್ ಮತ್ತು ದಿನೇಶ್ ಅವರಿಗೆ ನೋಟಿ ಜಾರಿ ಮಾಡಿದ ಪೊಲೀಸರು, ನಿಮ್ಮನ್ನು ಯಾಕೆ ಗಡೀಪಾರು ಮಾಡಬಾರದು ಎಂದು ಕಾರಣ ಕೇಳಿ ನವೆಂಬರ್ 22 ರಂದು ಪುತ್ತೂರು ಸಹಾಯಕ ಆಯುಕ್ತರೆದುರು ಹಾಜರಾಗಲು ಸೂಚನೆ ನೀಡಿದ್ದಾರೆ.

ಭಜರಂಗದಳದಲ್ಲಿ ದಿನೇಶ್, ಪ್ರಜ್ವಲ್ ಅವರು ಪುತ್ತೂರು ತಾಲೂಕು ಜವಾಬ್ದಾರಿ ಹೊಂದಿದ್ದು, ಲತೇಶ್ ಗುಂಡ್ಯ ಭಜರಂಗದಳ ಪುತ್ತೂರು ಜಿಲ್ಲಾ ಸಹ ಸಂಯೋಜಕ್ ಆಗಿದ್ದಾರೆ. ಉಳಿದ ಇಬ್ಬರು ಕಾರ್ಯಕರ್ತರಾದ ನಿಶಾಂತ್ ಮತ್ತು ಪ್ರದೀಪ್ ವಿರುದ್ಧವೂ ಗಡೀಪಾರು ಅಸ್ತ್ರ ಪ್ರಯೋಗಿಸಲಾಗಿದೆ.

ಇದನ್ನೂ ಓದಿ: ಮಂಗಳೂರು: ದಪ್ಪ ಇದ್ದೀನಿ, ಚನ್ನಾಗಿ ಕಾಣುತ್ತಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿನಿ

ಈ ಐವರಲ್ಲಿ ಲತೇಶ್ ಹೊರತುಪಡಿಸಿ ಉಳಿದ ನಾಲ್ವರ ವಿರುದ್ಧ ಒಂದೊಂದೇ ಪ್ರಕರಣಗಳಿವೆ. ಕೋಮು ಗಲಭೆ, ದನಸಾಗಾಟ ಹಲ್ಲೆ, ನೈತಿಕ ಪೊಲೀಸ್ ಗಿರಿ ಸೇರಿ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಸಂಬಂಧ ಪುತ್ತೂರು ನಗರ ಠಾಣೆ ಹಾಗೂ ಸುಳ್ಯ ಠಾಣೆಯಿಂದ ಗಡೀಪಾರಿಗೆ ಮನವಿ ಮಾಡಲಾಗಿದೆ.

ಲತೇಶ್​ಗೆ ಬಳ್ಳಾರಿ ಜಿಲ್ಲೆಗೆ, ಪ್ರಜ್ವಲ್​ಗೆ ಬಾಗಲಕೋಟೆ ಜಿಲ್ಲೆಗೆ ಗಡೀಪಾರು ಮಾಡಲು ಮನವಿ ಮಾಡಲಾಗಿದೆ. ಕರ್ನಾಟಕ ಪೊಲೀಸ್ ಅಧಿನಿಯಮ 1953ರ ಕಲಂ 55ರ ಅಡಿ ಗಡೀಪಾರು ನೋಟೀಸ್ ಜಾರಿ ಮಾಡಲಾಗಿದೆ. ವಿಚಾರಣೆಗೆ ಹಾಜರಾದ ಬಳಿಕ ಅಧಿಕೃತವಾಗಿ ಒಂದು ವರ್ಷಗಳ ಕಾಲ ಗಡೀಪಾರು ಮಾಡಿ ಆದೇಶ ಹೊರಡಿಸುವ ಸಾಧ್ಯತೆ ಇದೆ.

ಕಳೆದ ಜುಲೈನಲ್ಲಿ ಮಂಗಳೂರಿನ ಮೂವರು ಭಜರಂಗದಳ ಕಾರ್ಯಕರ್ತರ ಮೇಲೆ ಗಡೀಪಾರು ಅಸ್ತ್ರ ಪ್ರಯೋಗಿಸಲಾಗಿತ್ತು. ಆದರೆ ಸಂಘಟನೆಯು ನ್ಯಾಯಾಲಯದ ಮೆಟ್ಟಿಲೇರಿ ತಡೆ ತಂದಿತ್ತು. ಈ ಬಾರಿ ಐವರ ವಿರುದ್ಧ ಗಡಿಪಾರು ಅಸ್ತ್ರ ಪ್ರಯೋಗಿಸಲಾಗಿದ್ದು, ಸ್ಥಳೀಯ ಠಾಣೆಗಳ ಇನ್ಸ್‌ಪೆಕ್ಟರ್​ಗಳಿಂದ ಗಡೀಪಾರಿಗೆ ವರದಿ ಸಿದ್ಧಪಡಿಸಲಾಗುತ್ತಿದ್ದು, ಅಧಿಕೃತವಾಗಿ ಕಾನೂನು ಪ್ರಕಾರ ಗಡೀಪಾರು ಅಸ್ತ್ರ ಪ್ರಯೋಗಿಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​