ಮೃತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಜೆಡಿಎಸ್ ನಾಯಕ ಎಚ್​ಡಿ ಕುಮಾರಸ್ವಾಮಿ ಸಾಂತ್ವನ

ಕುಟುಂಬ ಸದಸ್ಯರನ್ನು ಸಂತೈಸುವ ವೇಳೆ, ‘ಆರೋಪಿಗಳು ಜೈಲಿನಲ್ಲಿ ಆರಾಮವಾಗಿದ್ದಾರೆ’ ಎಂದುಬಿಟ್ಟರು. ಈ ಹೇಳಿಕೆಯು ಪ್ರವೀಣ್ ಕುಟುಂಬ ಸದಸ್ಯರನ್ನು ಕೆರಳಿಸಿತು.

ಮೃತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಜೆಡಿಎಸ್ ನಾಯಕ ಎಚ್​ಡಿ ಕುಮಾರಸ್ವಾಮಿ ಸಾಂತ್ವನ
ಹೆಚ್ ಡಿ ಕುಮಾರಸ್ವಾಮಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 01, 2022 | 1:10 PM

ಮಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ (HD Kumaraswamy) ಸೋಮವಾರ ಸುಳ್ಯ ತಾಲ್ಲೂಕು ಬೆಳ್ಳಾರೆಯಲ್ಲಿರುವ ಮೃತ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ‘ಕರ್ನಾಟಕದ ಜನರು ಈ ಬಾರಿ ನನಗೆ ಅವಕಾಶ ಕೊಟ್ಟರೆ ಯಾವುದೇ ಸಮಾಜದವರ ಸಾವುನೋವು ಆಗದ ರೀತಿಯಲ್ಲಿ ಮಾಡುತ್ತೇನೆ. ಹಲವು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಹುಡುಕುತ್ತೇನೆ. ದಕ್ಷಿಣ ಕನ್ನಡದಲ್ಲಿ ತಪ್ಪು ಆಗದ ರೀತಿಯಲ್ಲಿ ಮಾಡುತ್ತೇನೆ. ಈ ಭಾಗದಲ್ಲಿ ಶಾಂತಿ ನೆಲೆಸಲು ಕೆಲಸ ಮಾಡುತ್ತೇನೆ’ ಎಂದು ಪ್ರವೀಣ್ ಪತ್ನಿ ನೂತನ ಅವರಿಗೆ ಭರವಸೆ ನೀಡಿದರು

ಪ್ರವೀಣ್​ ನೆಟ್ಟಾರು ಕುಟುಂಬ ಸದಸ್ಯರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರವೀಣ್​ ಹಂತಕರಿಗೆ ಶಿಕ್ಷೆ ವಿಧಿಸಬೇಕು ಎಂಬುದು ಕುಟುಂಬ ಸದಸ್ಯರ ಆಗ್ರಹವಾಗಿದೆ. ಈ ಅಂಶವನ್ನು ಸರ್ಕಾರದ ಗಮನಕ್ಕೆ ತರುತ್ತೇನೆ. ಕಾಟಾಚಾರಕ್ಕೆ ತನಿಖೆ ಮಾಡುವುದು ಬೇಡ. ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಮೃತ ಪ್ರವೀಣ್ ಕುಟುಂಬಕ್ಕೆ ನಮ್ಮ ಪಕ್ಷದಿಂದ ₹ 5 ಲಕ್ಷ ಪರಿಹಾರ ನೀಡಿದ್ದೇವೆ. ಏನೇ ಸಮಸ್ಯೆ ಬಂದರೂ ನನ್ನ ಗಮನಕ್ಕೆ ತರಲು ಹೇಳಿದ್ದೇನೆ. ಸರ್ಕಾರ ಕಾಟಾಚಾರಕ್ಕೆ ಎನ್​ಐಎ ತನಿಖೆಗೆ ವಹಿಸಿದೆ. ಇವರು ತಮ್ಮ ಜವಾಬ್ದಾರಿ ಕಳೆದುಕೊಳ್ಳಲು ರಾಷ್ಟ್ರೀಯ ತನಿಖಾ ದಳಕ್ಕೆ ತನಿಖೆಯ ಜವಾಬ್ದಾರಿ ವಹಿಸಿದ್ದಾರೆ ಎಂದರು.

ಮಸೂದ್ ನಿವಾಸಕ್ಕೆ ಭೇಟಿ

ಸುಳ್ಯ ತಾಲ್ಲೂಕು ಕಳಂಜೆಯಲ್ಲಿರುವ ಮಸೂದ್ ನಿವಾಸಕ್ಕೂ ಎಚ್​ಡಿಕೆ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿಗಳ ಬೇಜವಾಬ್ದಾರಿತನ ಇಲ್ಲಿ ಕಾಣುತ್ತಿದೆ. ಪ್ರವೀಣ್ ‌ಮನೆಗೆ ಬಂದಿದ್ದವರು ಮಸೂದ್ ಮನೆಗೆ ಬರಲಿಲ್ಲ. ಮಸೂದ್ ಹತ್ಯೆ ಹಿನ್ನೆಲೆಯಲ್ಲೂ ವಿಚಿತ್ರ ಸನ್ನಿವೇಶ ಇದೆ. ಮಸೂದ್ ಸಾವಿಗೆ ಕಾರಣವನ್ನು ಗಮನಕ್ಕೆ ತಂದಿದ್ದಾರೆ. ಮಸೂದ್​ಗೆ ಯಾವುದೇ ಸಂಘಟನೆ, ಪಕ್ಷಗಳ ಸಂಪರ್ಕವಿರಲಿಲ್ಲ. ಹಿಂದೂ ಸಮಾಜದವರೇ ಆತನ ಹತ್ಯೆಗೆ ಸ್ಕೆಚ್ ಹಾಕಿದ್ದರು. ಇದನ್ನು ಪೊಲೀಸರ ಗಮನಕ್ಕೆ ತಂದು, ತನಿಖೆಗೆ ಒತ್ತಾಯಿಸುತ್ತೇನೆ ಎಂದರು.

ಇದು ಶಿಕ್ಷಣಕಾಶಿಯೇ ಆಗಿ ಉಳಿಯಲಿ

ದಕ್ಷಿಣ ಕನ್ನಡವನ್ನು ಕರ್ನಾಟಕದ ಶಿಕ್ಷಣ ಕಾಶಿ ಎನ್ನುತ್ತಾರೆ. ಇದು ಹೀಗೆಯೇ ಉಳಿಯಬೇಕು. ಹಿಂಸೆಯ ನೆರಳು ಬದಿಗೆ ಸರಿಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಆಶಯ ವ್ಯಕ್ತಪಡಿಸಿದರು. ಇಲ್ಲಿನ ವಾತಾವರಣ ಕದಡಲು ಎರಡು ರಾಷ್ಟ್ರೀಯ ಪಕ್ಷಗಳ ನಡವಳಿಕೆಯೇ ಮುಖ್ಯ ಕಾರಣ. ದೇಶದ ವಿವಿಧ ಮೂಲೆಯಿಂದ ಇಲ್ಲಿ ದೇವರ ದರ್ಶನ ಪಡೆಯಲು ಆಗಮಿಸುತ್ತಾರೆ. ಆದರೆ ಇಲ್ಲಿ ಸರಣಿ ಹತ್ಯೆಗಳು ನೆಡೆಯುತ್ತಿದ್ದು ನಾವು ತಲೆತಗ್ಗಿಸುವಂತೆ ಆಗಿದೆ ಎಂದು ವಿಷಾದಿಸಿದರು.

ಎರಡು ರಾಷ್ಟ್ರೀಯ ಪಕ್ಷಗಳು ಅವರ ಸ್ವಾರ್ಥದ ರಾಜಕಾರಣಕ್ಕೆ ಜಿಲ್ಲೆಯ ಶಾಂತಿಯನ್ನು ಬಲಿ ಕೊಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಷ್ಟೆಲ್ಲಾ ಪ್ರಕರಣ ನಡೆದಿವೆ. ಬಿಜೆಪಿ ಅಥವಾ ಕಾಂಗ್ರೆಸ್​ನ ಮಂತ್ರಿಗಳ ಮಕ್ಕಳು ಅಥವಾ ಶಾಸಕರ ಮಕ್ಕಳು ಬಲಿಯಾಗಿದ್ದಾರಾ? ಪ್ರಮುಖ ನಾಯಕರ ಮಕ್ಕಳು ಬಲಿಯಾಗಿದ್ದಾರಾ ಎಂದು ಪ್ರಶ್ನಿಸಿದರು.

ಸತ್ತಿರುವವರೆಲ್ಲರೂ ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಬಡ ಕುಟುಂಬದ ಮಕ್ಕಳೇ ಆಗಿದ್ದಾರೆ. ಕಳೆದ 15 ವರ್ಷಗಳಿಂದ ರಾಜಕೀಯ ಮುಖಂಡರು ತಮ್ಮ ಶಕ್ತಿಯನ್ನ ಬೆಳೆಸಿಕೊಳ್ಳಲು ಇಂಥ ವಾತಾವರಣ ಸೃಷ್ಟಿ ಮಾಡಿದ್ದಾರೆ. ಇದು ಇಲ್ಲಿಗೆ ಕೊನೆಯಾಗಬೇಕು ಎಂದು ಎಲ್ಲರಿಗೂ ಮನವಿ ಮಾಡುತ್ತೇನೆ. ಮುಖ್ಯಮಂತ್ರಿಗಳು ಇಷ್ಟು ಸಣ್ಣತನದಲ್ಲಿ ವರ್ತನೆ ಮಾಡಬಾರದಿತ್ತು. ಆರುವರೆ ಕೋಟಿ ಜನರ ರಕ್ಷಣೆ ಮಾಡುವ ಹೊಣೆ ರಾಜ್ಯ ಸರ್ಕಾರದ ಮೇಲಿದೆ. ಒಂದು ಕುಟುಂಬಕ್ಕೆ ಸಾಂತ್ವನ ಹೇಳಿ ಇನ್ನೊಂದು ಕುಟುಂಬಕ್ಕೆ ಸಾಂತ್ವನ ಹೇಳದೆ ಹೋಗೋದು ಯಾವ ಸಂದೇಶ ಕೊಡುತ್ತದೆ ಎಂದು ಪ್ರಶ್ನಿಸಿದರು.

ಬಿಜೆಪಿಗೆ ಕರ್ನಾಟಕದಲ್ಲಿ ಶಾಂತಿ ನೆಲೆಸುವ ಅವಶ್ಯಕತೆ ಇಲ್ಲ. ಇದೇ ರೀತಿಯ ವಾತಾವರಣ ಮುಂದುವರಿದರೆ ಸರ್ಕಾರಕ್ಕೂ, ಪಕ್ಷಕ್ಕೂ ಅನುಕೂಲ ಎಂದು ಮುಖ್ಯಮಂತ್ರಿ ಯೋಚಿಸುತ್ತಿರುವಂತಿದೆ ಎಂದರು.

Published On - 12:16 pm, Mon, 1 August 22

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ