ಮಂಗಳೂರು, ಡಿಸೆಂಬರ್ 28: ಕಂದಕಕ್ಕೆ ಆಲ್ಟೋ ಕಾರು ಉರುಳಿ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ (Dakshin Kannada) ಜಿಲ್ಲೆ ಪುತ್ತೂರು (Puttur) ತಾಲೂಕಿನ ಪರ್ಲಡ್ಕದಲ್ಲಿ ನಡೆದಿದೆ. ಅಣ್ಣು ನಾಯ್ಕ್, ಚಿದಾನಂದ, ರಮೇಶ್ ನಾಯ್ಕ್ ಮೃತ ದುರ್ದೈವಿಗಳು. ಮೃತರು ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳು ಎಂದು ತಿಳಿದುಬಂದಿದೆ.
ಕಾರು ಸುಳ್ಯದಿಂದ ಪುತ್ತೂರಿನ ಪುಣಚಕ್ಕೆ ಆಗಮಿಸುತ್ತಿತ್ತು. ನಸುಕಿನ ಜಾವ 4:15ರ ಸುಮಾರಿಗೆ ಚಾಲಕ ನಿದ್ದೆ ಮಂಪರಿನಲ್ಲಿದ್ದಾಗ ಕಾರು ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಟಿಟಿ ವಾಹನದ ಟೈಯರ್ ಬ್ಲಾಸ್ಟ್ ಆಗಿ ಸರಣಿ ಅಪಘಾತ, ಮೂವರು ಸ್ಥಳದಲ್ಲೇ ಸಾವು
ಡಿವೈಡರ್ಗೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿಯಾಗಿ, ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಂಚೆಪಾಳ್ಯ ಬಳಿ ನಡೆದಿದೆ. ಖಾಸಗಿ ಬಸ್ ಚಾಲಕ ಮೊಹಮ್ಮದ್ ಇಬ್ರಾಹಿಂ (42) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ನಾಲ್ವರು ಪ್ರಯಾಣಿಕರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಲೀಪರ್ ಕೋಚ್ ಬಸ್ ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿತ್ತು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕುಣಿಗಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಿ.ಎನ್.ಜಿ ಗ್ಯಾಸ್ ಸಿಲೆಂಡರ್ಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ಗೆ ಗ್ರಾನೈಟ್ ದಿಮ್ಮೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಹುನೇಗಲ್ ಗ್ರಾಮದ ಬಳಿ ಘಟನೆ ನಡೆದಿದೆ. ಸಿ.ಎನ್.ಜಿ ಗ್ಯಾಸ್ ಸಿಲೆಂಡರ್ಗಳು ಸ್ಫೋಟಿಸಿ ಎರಡು ಲಾರಿಗಳು ಬೆಂಕಿಗೆ ಆವುತಿಯಾಗಿವೆ. ಭಾರಿ ಅನಾಹುತ ತಪ್ಪಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:14 am, Sat, 28 December 24