ಫಾಜಿಲ್ ಕೊಲೆ ಆರೋಪಿಗಳನ್ನು ಶೀಘ್ರ ಬಂಧಿಸುತ್ತೇವೆ; ಎಡಿಜಿಪಿ ಅಲೋಕ್ ಕುಮಾರ್
ಹತ್ಯೆ ವಿಚಾರವಾಗಿ ಸಿಎಂ ಬೊಮ್ಮಾಯಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದಾರೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕ ಕಟ್ಟುನಿಟ್ಟಿನ ಕ್ರಮ ಜರುಗಿಸುವ ಸಂಬಂಧ ಚರ್ಚೆ ಮಾಡಲಿದ್ದಾರೆ.

ಮಂಗಳೂರು: ಫಾಜಿಲ್ ಕೊಲೆ (Fazil murder) ಆರೋಪಿಗಳನ್ನ ಶೀಘ್ರವೇ ಬಂಧಿಸುತ್ತೇವೆ ಎಂದು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ ನೀಡಿದರು. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳ ಸುಳಿವು ಸಿಕ್ಕಿದೆ. ಇಂದು ಸಂಜೆಯಿಂದ ವಿಶೇಷ ಕಾರ್ಯಾಚರಣೆ ಮಾಡುತ್ತೇವೆ. ಯಾರು ಕೂಡ ವದಂತಿಗಳಿಗೆ ಕಿವಿ ಕೊಡಬಾರದು. ಫಾಜಿಲ್ ಮನೆಯವರು ಹತ್ಯೆಯ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಿದರು. ವಿವಿಧ ಆಯಾಮಗಳಿಂದ ಪ್ರಕರಣದ ತನಿಖೆ ಮಾಡುತ್ತಿದ್ದೇವೆ. ಸಿಸಿಟಿವಿ ದೃಶ್ಯ ಆಧರಿಸಿ ಕಾರು ಪತ್ತೆ ಹಚ್ಚಿ ತನಿಖೆ ಮಾಡ್ತಿದ್ದೇವೆ. ಯಾವುದೇ ಕಾರಣಕ್ಕೂ ಕಾನೂನು ಕೈಗೆತ್ತಿಕೊಳ್ಳಬಾರದು. ಈಗಿರುವ ಪೊಲೀಸ್ ಬಂದೋಬಸ್ತ್ ಮುಂದುವರಿಸುತ್ತೇವೆ. ಗಡಿಭಾಗದಲ್ಲಿ ವಾಹನಗಳನ್ನ ಚೆಕ್ ಮಾಡಲಾಗುತ್ತದೆ. ಸಾರ್ವಜನಿಕರು ಪೊಲೀಸರಿಗೆ ಸಹಕಾರ ನೀಡಬೇಕು ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.
ಇದನ್ನೂ ಓದಿ: Suratkal Murder: ಫಾಜಿಲ್ ಅಂತ್ಯಸಂಸ್ಕಾರಕ್ಕೆ ಕುಟುಂಬ ಸದಸ್ಯರ ಸಿದ್ಧತೆ, 12 ಮಂದಿ ಪೊಲೀಸರ ವಶಕ್ಕೆ
ನಿಷೇಧಾಜ್ಞೆ ಉಲ್ಲಂಘಿಸಿದ 14 ಜನ ವಶಕ್ಕೆ
ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿಕೆ ನೀಡಿದ್ದು, ಫಾಜಿಲ್ ಹತ್ಯೆಯ ನಂತರ ಅನುಮಾನಾಸ್ಪದವಾಗಿ ಕಂಡುಬಂದ 12 ಜನರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ. ನಿಷೇಧಾಜ್ಞೆ ಉಲ್ಲಂಘಿಸಿದ 14 ಜನರನ್ನು ವಶಕ್ಕೆ ಪಡೆದಿದ್ದೇವೆ. ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಸಿಸಿಟಿವಿ ದೃಶ್ಯಗಳನ್ನಾಧರಿಸಿ ಕೆಲವರನ್ನ ವಶಕ್ಕೆ ಪಡೆದಿದ್ದೇವೆ. ಎಲ್ಲವೂ ಶಾಂತಿಯುತವಾಗಿ ನಡೆಯುತ್ತಿದೆ. ಸುರತ್ಕಲ್ನ ಗಣೇಶಪುರದಲ್ಲಿ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ; Suratkal Murder: ಫಾಜಿಲ್ ಹತ್ಯೆ ಕೇವಲ ಕೊಲೆಯಲ್ಲ, ಪೂರ್ವನಿಯೋಜಿತ ಕೃತ್ಯವೆಂದ ಸಿಎಂ ಬಸವರಾಜ ಬೊಮ್ಮಾಯಿ
ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದ ಸಿಎಂ
ಹತ್ಯೆ ವಿಚಾರವಾಗಿ ಸಿಎಂ ಬೊಮ್ಮಾಯಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದಾರೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕ ಕಟ್ಟುನಿಟ್ಟಿನ ಕ್ರಮ ಜರುಗಿಸುವ ಸಂಬಂಧ ಚರ್ಚೆ ಮಾಡಲಿದ್ದಾರೆ. ಕೇರಳ ಭಾಗದ 55 ರಸ್ತೆಗಳಲ್ಲಿ ನಾಕಾ ಬಂದಿ ಹಾಕಿ ಖಡಕ್ ತಪಾಸಣೆ ಮಾಡಲಾಗುವುದು.
Published On - 12:28 pm, Fri, 29 July 22




