AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಹೊಸ ವರ್ಷದ ಪಾರ್ಟಿ ವೇಳೆ ಇಬ್ಬರ ನಡುವೆ ಜಗಳ; ಯುವಕನ ಮೂಗು ಕಚ್ಚಿ ತೆಗೆದ ವ್ಯಕ್ತಿ

ಪ್ರತಿ ವರ್ಷ ಹೊಸ ವರ್ಷಾಚರಣೆ ವೇಳೆ ಕುಡಿದ ಮತ್ತಿನಲ್ಲಿ ಒಂದಲ್ಲಾ ಒಂದು ರೀತಿಯಲ್ಲಿ ಕಿತ್ತಾಟಗಳು, ಜಗಳಗಳು ನಡೆಯುತ್ತವೆ. ಈ ಬಾರಿ ಸ್ನೇಹಿತರೇ ಗೆಳೆಯನನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದರೆ, ಮಂಗಳೂರಿನಲ್ಲಿ ನಡೆದ ಕ್ಷುಲ್ಲಕ ಕಾರಣಕ್ಕೆ ಇಬ್ಬರ ಜಗಳ ನಡೆದು ಯುವಕನೊಬ್ಬನ ಮೂಗನ್ನೇ ಕಚ್ಚಿ ಕಿತ್ತು ಹಾಕಿದ ಘಟನೆ ನಡೆದಿದೆ.

ಮಂಗಳೂರು: ಹೊಸ ವರ್ಷದ ಪಾರ್ಟಿ ವೇಳೆ ಇಬ್ಬರ ನಡುವೆ ಜಗಳ; ಯುವಕನ ಮೂಗು ಕಚ್ಚಿ ತೆಗೆದ ವ್ಯಕ್ತಿ
ಮಂಗಳೂರಿನಲ್ಲಿ ಹೊಸ ವರ್ಷದ ಪಾರ್ಟಿ ವೇಳೆ ಇಬ್ಬರ ನಡುವೆ ಜಗಳ; ಯುವಕನ ಮೂಗು ಕಚ್ಚಿ ತೆಗೆದ ವ್ಯಕ್ತಿ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: Rakesh Nayak Manchi|

Updated on: Jan 01, 2024 | 7:02 PM

Share

ಮಂಗಳೂರು, ಜ.1: ಪ್ರತಿ ವರ್ಷ ಹೊಸ ವರ್ಷಾಚರಣೆ (New Year Celebration) ವೇಳೆ ಕುಡಿದ ಮತ್ತಿನಲ್ಲಿ ಒಂದಲ್ಲಾ ಒಂದು ರೀತಿಯಲ್ಲಿ ಅಹಿತಕರ ಘಟನೆಗಳು ನಡೆಯುತ್ತವೆ. ಬೆಂಗಳೂರಿನಲ್ಲಂತೂ ಹಲ್ಲೆ, ಜಗಳ ಸಾಮಾನ್ಯವಾಗಿದೆ. ನಿನ್ನೆ ಸ್ನೇಹಿತರೇ ಗೆಳೆಯನನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದರೆ, ಮಂಗಳೂರಿನಲ್ಲಿ (Mangaluru) ಕ್ಷುಲ್ಲಕ ಕಾರಣಕ್ಕೆ ಇಬ್ಬರ ಜಗಳ ನಡೆದು ಯುವಕನೊಬ್ಬನ ಮೂಗನ್ನೇ ಕಚ್ಚಿ ಕಿತ್ತು ಹಾಕಿದ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದಲ್ಲಿ ಹೊಸ ವರ್ಷಾಚರಣೆಯ ಪ್ರಯುಕ್ತ ಪಾರ್ಟಿ ನಡೆಸಲಾಗುತ್ತಿತ್ತು. ಈ ವೇಳೆ ಕುಡಿದ ಮತ್ತಿನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೂಲದ ರಾಕೇಶ್ ಮತ್ತು ಉಲ್ಪೆ ಗ್ರಾಮದ ನಿವಾಸಿ ದೀಕ್ಷಿತ್ (28) ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ.

ಇದನ್ನೂ ಓದಿ: ಬೆಂಗಳೂರು: ಹೊಸವರ್ಷಾಚರಣೆ ನಡುವೆ ಕೆಲವೆಡೆ ಅವಾಂತರ, ಅಸಭ್ಯ ವರ್ತನೆ ತೋರಿದ ಯುವಕನ ಕೆನ್ನೆಗೆ ಬಾರಿಸಿದ ಪೊಲೀಸ್

ಇಬ್ಬರ ನಡುವೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿದಾಗ ರಾಕೇಶ್ ದೀಕ್ಷಿತ್​ನ ಮೂಗನ್ನು ಕಚ್ಚಿ ಅರ್ಧ ಭಾಗವನ್ನೇ ಕಿತ್ತು ಹಾಕಿದ್ದಾನೆ. ಗಾಯಾಳು ದೀಕ್ಷಿತ್​ನನ್ನು ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ