AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್​ಐಆರ್ ದಾಖಲು, ಏನಿದು ಪ್ರಕರಣ?

ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಬಿಜೆಪಿ ಶಾಸಕ ಹರೀಶ್ ಪೂಂಜ ಅವರು ವಾಗ್ವಾದ ನಡೆಸಿದ್ದು, ಈ ಘಟನೆಯ ವೀಡಿಯೋ ವೈರಲ್ ಆಗಿತ್ತು.ಇದೀಗ ಹರೀಶ್ ಪೂಂಜ ವಿರುದ್ಧ ಧರ್ಮಸ್ಥಳ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಹಾಗಾದ್ರೆ, ಏನಿದು ಪ್ರಕರಣ?

ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್​ಐಆರ್ ದಾಖಲು, ಏನಿದು ಪ್ರಕರಣ?
ಹರೀಶ್ ಪೂಂಜ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ರಮೇಶ್ ಬಿ. ಜವಳಗೇರಾ|

Updated on: Oct 18, 2023 | 10:47 AM

Share

ದಕ್ಷಿಣ ಕನ್ನಡ, (ಅಕ್ಟೋಬರ್ 18): ಚಾರ್ಮಾಡಿ ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ-ತೆರವು ಜಟಾಪಟಿ ವಿಚಾರವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜ (Harish Poonja) ವಿರುದ್ಧ ಎಫ್ಐಆರ್ ದಾಖಲಾಗಿದೆ. ಸರ್ಕಾರಿ ಅಧಿಕಾರಿಗಳಿಗೆ ಕರ್ತವ್ಯಕ್ತೆ ಅಡ್ಡಿಪಡಿಸಿ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪದ ಮೇಲೆಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ(dharmasthala police station)  ಪ್ರಕರಣ ದಾಖಲಾಗಿದೆ.

ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಕೆ.ಕೆ.ಜಯಪ್ರಕಾಶ್ ನೀಡಿದ ದೂರು ಆಧರಿಸಿ ಹರೀಶ್ ಪೂಂಜ ವಿರುದ್ಧ ಐಪಿಸಿ 1860(U/S-143, 353, 504, 149) ಅಡಿಯಲ್ಲಿ ಧರ್ಮಸ್ಥಳ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಬೆಳ್ತಂಗಡಿಯ ಕಳೆಂಜ ಗ್ರಾಮದ ವ್ಯಕ್ತಿಯೋರ್ವರು ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮ ಮನೆ ನಿರ್ಮಾಣ ಮಾಡಲಾಗುತ್ತಿತ್ತು. ಈ ವಿಚಾರವಾಗಿ ಅರಣ್ಯ ಇಲಾಖೆಯು ಮನೆ ತೆರವುಗೊಳಿಸಲು ಮುಂದಾಗಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ  ದೌಡಾಯಿಸಿದ್ದು ಮನೆ ಕಟ್ಟಿದವರ ಪರ ಬ್ಯಾಟಿಂಗ್ ಮಾಡಿದ್ದರು.

ಇದನ್ನೂ ಓದಿ: ಮಂಗಳೂರು: ಅರಣ್ಯಾಧಿಕಾರಿಗಳ ವಿರುದ್ಧ ನಾಲಿಗೆ ಹರಿಬಿಟ್ಟ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಅಲ್ಲದೇ ಮನೆ ತೆರವು ಮಾಡಲು ಬಂದಿದ್ದ ಅರಣ್ಯಾಧಿಕಾರಿಗಳಿಗೆ ತರಾಟಗೆ ತೆಗೆದುಕೊಂಡಿದ್ದರು. ಅಲ್ಲದೇ ಮನೆಯ ತೆರವಿಗೆ ಮುಂದಾಗಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಶಾಸಕ ಹರೀಶ್ ಪೂಂಜ ನಡುವಿನ ವಾಗ್ವಾದ ನಡೆದಿದ್ದು, ಈ ವೇಳೆ ಅರಣ್ಯಾಧಿಕಾರಿ ವಿರುದ್ಧ ಏಕವಚನದಲ್ಲಿ ಮತ್ತು ಅವಾಚ್ಯವಾಗಿ ಬೈದಿದ್ದರು. ಈ ಘಟನೆಯ ವೀಡಿಯೋ ವೈರಲ್ ಆಗಿತ್ತು.

ಪ್ರಕರಣದ ಹಿನ್ನೆಲೆ?

ಅರಣ್ಯ ಭೂಮಿಯ ಅತಿಕ್ರಮಣಕ್ಕೆ ಸಂಬಂಧಿಸಿದಂತೆ ವಿವಾದಕ್ಕೆ ಕಾರಣವಾಗಿದ್ದ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಸರ್ವೆ ನಂಬರ್ 309 ರ ನಿಡ್ಲೆ ವಿಸ್ತೃತ ಬ್ಲಾಕ್ 2ರಲ್ಲಿ ಅಮ್ಮಿನಡ್ಕ -ಕೆದ್ದ ನಿವಾಸಿ ಲೋಲಾಕ್ಷ ಯಾನೆ ಅನಂತು ಅವರು ಅರಣ್ಯ ಇಲಾಖೆಯ ಜಾಗವನ್ನು ಒತ್ತುವರಿ ಮಾಡಿ ನೂತನ ಮನೆ ನಿರ್ಮಾಣಕ್ಕೆ ಮುಂದಾಗಿರುವ ಬಗ್ಗೆ ಮಂಗಳೂರು ಅರಣ್ಯ ಇಲಾಖೆಗೆ ದೂರು ಬಂದಿತ್ತು. ಈ ಹಿನ್ನೆಲೆ ಅ.6 ರಂದು ಅರಣ್ಯ ಇಲಾಖೆ ಸಿಬ್ಬಂದಿ ನೂತನ ಮನೆಯ ಫೌಂಡೇಶನ್ ತೆರವುಗೊಳಿಸಿದ್ದರು. ಘಟನೆ ವಿಚಾರ ತಿಳಿದು ಶಾಸಕ ಹರೀಶ್ ಪೂಂಜ ಅಕ್ಟೋಬರ್ 7 ರಂದು ಸ್ಥಳಕ್ಕೆ ಭೇಟಿ ನೀಡಿ ಅರಣ್ಯಧಿಕಾರಿಗಳಿಗೆ ಬೈದಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಸರ್ಕಾರಿ ಅಧಿಕಾರಿಗಳಿಗೆ ಕರ್ತವ್ಯಕ್ತೆ ಅಡ್ಡಿಪಡಿಸಿ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪದ ಮೇಲೆಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ