ಯಕ್ಷಗಾನ ಕಲಾವಿದರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಬೆದರಿಕೆ: ಮಹೇಶ್​​ ಶೆಟ್ಟಿ ತಿಮರೋಡಿ ವಿರುದ್ಧ FIR

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಯಕ್ಷಗಾನ ಕಲಾವಿದರಿಗೆ ಬೆದರಿಕೆ ಹಾಕಿದ ಆರೋಪದಡಿ FIR ದಾಖಲಾಗಿದೆ. 'ಬುರುಡೆ ಗ್ಯಾಂಗ್' ಹೆಸರಿನ ಯಕ್ಷಗಾನ ಪ್ರಸಂಗ ತಮ್ಮ ಹೋರಾಟವನ್ನು ಹಾಸ್ಯ ಮಾಡುತ್ತಿದೆ ಎಂದು ತಿಮರೋಡಿ ಕಲಾವಿದರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದಾರೆ. ಪುತ್ತೂರು ಮಹಿಳಾ ಮತ್ತು ಗ್ರಾಮಾಂತರ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಯಕ್ಷಗಾನ ಕಲಾವಿದರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಬೆದರಿಕೆ: ಮಹೇಶ್​​ ಶೆಟ್ಟಿ ತಿಮರೋಡಿ ವಿರುದ್ಧ FIR
ಮಹೇಶ್​​ ಶೆಟ್ಟಿ ತಿಮರೋಡಿ
Edited By:

Updated on: Apr 16, 2026 | 1:12 PM

ಮಂಗಳೂರು, ಏಪ್ರಿಲ್​​ 16: ಧರ್ಮಸ್ಥಳದಲ್ಲಿ ನೂರಾರು ಅಪರಿಚಿತ ಹೆಣ ಹೂಳಲಾಗಿದೆ ಎಂಬ ಆರೋಪ ಪ್ರಕರಣದ ಪ್ರಮುಖ ರೂವಾರಿಗಳಲ್ಲೊಬ್ಬರಾಗಿದ್ದ ಮಹೇಶ್​​ ಶೆಟ್ಟಿ ತಿಮರೋಡಿ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ‘ಬುರುಡೆ ಗ್ಯಾಂಗ್’ ಹೆಸರಿನ ಯಕ್ಷಗಾನ ಪ್ರಸಂಗ ಸಂಬಂಧ ಯಕ್ಷಗಾನ ಕಲಾವಿದರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಬೆದರಿಕೆ ಹಾಕಿರುವ ಆರೋಪ ತಿಮರೋಡಿ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಪುತ್ತೂರು ಮಹಿಳಾ ಠಾಣೆ ಮತ್ತು ಗ್ರಾಮಾಂತ್ರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ದೇಶಾದ್ಯಂತ ಭಾರಿ ಸದ್ದು ಮಾಡಿದ್ದ ಧರ್ಮಸ್ಥಳ ಪ್ರಕರಣವನ್ನೇ ಹೋಲುವು ಕಥೆ ಹೊಂದಿರುವ ‘ಬುರುಡೆ ಗ್ಯಾಂಗ್’ ಹೆಸರಿನ ಯಕ್ಷಗಾನ ಪ್ರಸಂಗ ನಿರ್ಮಾಣ ಮಾಡಲಾಗಿತ್ತು.ಇದರಿಂದ ರೊಚ್ಚಿಗೆದ್ದ ಮಹೇಶ್​​ ಶೆಟ್ಟಿ ತಿಮರೋಡಿ ಏಪ್ರಿಲ್​​ 11ರಂದು ಯಕ್ಷಗಾನ ಹಾಸ್ಯ ಕಲಾವಿಧ ಪ್ರಜ್ವಲ್ ಗುರುನಾಯನಕೆರೆಗೆ ಕರೆ ಮಾಡಿದ್ದರು. ಈ ವೇಳೆ ಕಲಾವಿದ ದಿನೇಶ್ ಶೆಟ್ಟಿಗಾರ್ ಮತ್ತು ಚಿತ್ರನಟ ಮಂದಾರ ಸುಂದರ ರೈ ಅವರ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿದ್ದಲ್ಲದೆ, ಅವರ ತಾಯಂದಿರ ಚಾರಿತ್ರ್ಯದ ಬಗ್ಗೆಯೂ ತೀರಾ ಕೆಟ್ಟದಾಗಿ ಮಾತನಾಡಿದ್ದರು. ಆ ಆಡಿಯೋವನ್ನು ದಿನೇಶ್ ಶೆಟ್ಟಿ ಮತ್ತು ಸುಂದರ ರೈಗೆ ಪ್ರಜ್ವಲ್ ಕಳುಹಿಸಿದ್ದು, ಅದನ್ನು ಕೇಳಿ ಕಲಾವಿದರು ತೀವ್ರ ನೊಂದಿದ್ದಾರೆ. ಈ ಹಿನ್ನೆಲೆ ಸುಂದರ ರೈ ನೀಡಿದ ದೂರಿನಡಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ತಿಮರೋಡಿ ವಿರುದ್ಧ FIR ದಾಖಲಾಗಿದ್ದರೆ, ದಿನೇಶ್ ಶೆಟ್ಟಿಗಾರ್ ತಾಯಿ ಲೀಲಾವತಿ ಶೆಟ್ಟಿಗಾರ್ ದೂರಿನಡಿ ಮಹಿಳಾ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಧರ್ಮಸ್ಥಳ ಕೇಸ್​ ಚಾರ್ಜ್​ಶೀಟ್ ಸಲ್ಲಿಕೆ, ಕೋರ್ಟ್​ಗೆ ಎಸ್ಐಟಿ ಮಹತ್ವದ ಮನವಿ

ಆಡಿಯೋದಲ್ಲಿ ಏನಿದೆ?

ತೀರಾ ಅಂದರೆ ಅತಿ ಕೆಟ್ಟದಾದ ಪದಗಳನ್ನು ಯಕ್ಷಗಾನ ಕಲಾವಿದರ ಬಗ್ಗೆ ಮಹೇಶ್​​ ಶೆಟ್ಟಿ ತಿಮರೋಡಿ ಬಳಸಿರೋದು ಆಡಿಯೋದಲ್ಲಿವೆ. ಒಂದು ಮಗುವಿಗೆ ಅನ್ಯಾಯ ಆಗಿರುವ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ. ಇವರು ಅದನ್ನು ಹಾಸ್ಯ ಮಾಡುತ್ತಾರೆ. ಆ ಬಗ್ಗೆ ಕಥೆ ಬರೆಯುತ್ತಾರೆ. ಯಕ್ಷಗಾನ ಮಾಡಲಿ, ಹೊಟ್ಟೆಪಾಡಿಗೆ ಅದನ್ನು ಮಾಡುವುದು. ಆದರೆ ಈ ಕತೆ ಯಾಕೆ? ಅವರ ಕುಟುಂಬಸ್ಥರ ಕತೆಯನ್ನು ಮಾಡಬಹುದಿತ್ತು ಅಲ್ವಾ?. ಈ ರೀತಿಯದ್ದನ್ನು ಮಾಡುವ ಮೊದಲು ಜಾಗೃತೆ ಇರಬೇಕಿತ್ತು. ಯಕ್ಷಗಾನಕ್ಕೆ ಒಂದು ಮರ್ಯಾದೆ ಇದೆ ಅಲ್ಲವಾ? ಎಂದು ಮಹೆಶ್​​ ಶೆಟ್ಟಿ ತಿಮರೋಡಿ ಪ್ರಶ್ನಿಸಿರೋದನ್ನು ಆಡಿಯೋದಲ್ಲಿ ಕೇಳಬಹುದಾಗಿದೆ. ಜೊತೆಗೆ ಈ ವಿಷಯವನ್ನು ಅವರಿಗೆ ಮುಟ್ಟಿಸು ಎಂದೂ ತಿಮರೋಡಿ ಹೇಳಿರುವ ಮಾತುಗಳನ್ನು ಗಮನಿಸಬಹುದಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us