ಪ್ರಚೋದನಕಾರಿ ಭಾಷಣ ಆರೋಪ: RSS ಪ್ರಮುಖ ಕಲ್ಲಡ್ಕ ಪ್ರಭಾಕರ್​ ಭಟ್​ಗೆ ಕೋರ್ಟ್​ ರಿಲೀಫ್​

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಉಪ್ಪಳಿಗೆಯಲ್ಲಿ ಅ.20ರಂದು ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಆರೋಪ ಸಂಬಂಧ ಆರ್​ಎಸ್ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ FIR ದಾಖಲಾಗಿತ್ತು. ಈ ಬಗ್ಗೆ ಪುತ್ತೂರಿನ 6ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ಬಲವಂತದ ಕ್ರಮ ಬೇಡ ಎಂದಿದೆ.

ಪ್ರಚೋದನಕಾರಿ ಭಾಷಣ ಆರೋಪ: RSS ಪ್ರಮುಖ ಕಲ್ಲಡ್ಕ ಪ್ರಭಾಕರ್​ ಭಟ್​ಗೆ ಕೋರ್ಟ್​ ರಿಲೀಫ್​
ಕಲ್ಲಡ್ಕ ಪ್ರಭಾಕರ್ ಭಟ್
Edited By:

Updated on: Oct 27, 2025 | 7:42 PM

ಮಂಗಳೂರು, ಅಕ್ಟೋಬರ್​ 27: ಪ್ರಚೋದನಕಾರಿ ಭಾಷಣ ಆರೋಪದಡಿ ಆರ್​ಎಸ್ಎಸ್ (RSS) ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ FIR ವಿಚಾರವಾಗಿ ಬಲವಂತದ ಕ್ರಮಕೈಗೊಳ್ಳದಂತೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ 6ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶಿಸಿದೆ. ಮುಂದಿನ ವಿಚಾರಣೆವರೆಗೆ ಬಂಧನ ಸೇರಿದಂತೆ ಬಲವಂತದ ಕ್ರಮ ಬೇಡ ಎಂದು ನ್ಯಾಯಾಲಯ ತಿಳಿಸಿದ್ದು, ವಿಚಾರಣೆಯನ್ನು ಅ.29ಕ್ಕೆ ಕೋರ್ಟ್​ ಮುಂದೂಡಿದೆ.

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಉಪ್ಪಳಿಗೆಯಲ್ಲಿ ಅ.20ರಂದು ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರಭಾಕರ್​ ಭಟ್​ ಭಾಷಣ ಮಾಡಿದ್ದರು. ಅವರು ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ತರುವ ರೀತಿ ಮಾತನಾಡಿದ್ದಾರೆ ಎಂದು ಆರೋಪಿಸಿ ಈಶ್ವರಿ ಪದ್ಮುಂಜ ಎಂಬುವರು ನೀಡಿದ್ದ ದೂರಿನ ಅನ್ವಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಬಿಎನ್ಎಸ್ 79, 196, 299, 302, 3(5) ಅಡಿ ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಅ. 30ರಂದು ವಿಚಾರಣೆಗೆ ಹಾಜರಾಗುವಂತೆ ಕಲ್ಲಡ್ಕ ಪ್ರಭಾಕರ ಭಟ್​ ಅವರಿಗೆ ನೋಟಿಸ್​ ನೀಡಲಾಗಿತ್ತು. ಇದನ್ನ ಪ್ರಶ್ನಿಸಿ ಪ್ರಭಾಕರ್​ ಭಟ್​ ಕೋರ್ಟ್​ ಮೊರೆ ಹೋಗಿದ್ದರು.

ಇದನ್ನೂ ಓದಿ: ಕೋಮು ದ್ವೇಷದ ಭಾಷಣ, RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್​ಐಆರ್​​ ದಾಖಲು

ಪ್ರಭಾಕರ್ ಭಟ್​ ಹೇಳಿದ್ದು ಏನಾಗಿತ್ತು?

ಆಚೆ ಮನೆಯಲ್ಲಿ ಒಬ್ಬಳು ಬ್ಯಾರ್ದಿ ಇದ್ದಳು. ಅವಳು 6ನೇಯದ್ದು ಆಗಿ 7ನೇ ಮಗುವಿನ ಗರ್ಭಿಣಿಯಾಗಿದ್ದಳು. ಅವಳಿಗೆ ಯಾರಾದ್ರು ಕೇಳಿದ್ರಾ? ನೀನು ನಾಯಿ ಮರಿ ಹಾಕಿದ ಹಾಗೆ ಹಾಕ್ತಾ ಇದ್ದೀಯಾ ಎಂದು?. ಎರಡನೇಯದಾಗಿ ಅವರುನಮ್ಮ ಮಕ್ಕಳು ಅಲ್ಲಾಹುವಿಗೋಸ್ಕರ ಎಂದು ಹೇಳ್ತಾರೆ. ನೀವೇನಾದರೂ ಮಹಾಲಿಂಗೇಶ್ವರನಿಗಾಗಿ ಮಕ್ಕಳನ್ನು ಮಾಡಿಕೊಳ್ತೀರಾ? ಎಂದು ಕಲ್ಲಡ್ಕ ಪ್ರಭಾಕರ ಭಟ್ ಪ್ರಶ್ನಿಸಿದ್ದರು. ಅಲ್ಲದೆ, ಮಂಗಳೂರು ವಿಧಾನಸಭಾ ಕ್ಷೇತ್ರ ಉಳ್ಳಾಲದಲ್ಲಿ ಹಿಂದೂಗಳು ಗೆಲ್ಲಲು ಸಾಧ್ಯವೇ ಇಲ್ಲ. ಅಲ್ಲಿ ಖಾದರೇ ಗೆಲ್ಲೋದು. ಯಾಕೆಂದರೆ ಒಂದು ಲಕ್ಷದ ಹತ್ತು ಸಾವಿರ ವೋಟ್​ ಬ್ಯಾರಿಗಳದ್ದೇ ಇದೆ. ಹಿಂದೂಗಳು 90 ಸಾವಿರ ಮಾತ್ರ ಇರೋದು. ನಮ್ಮನ್ನು ಸರ್ವನಾಶ ಮಾಡ್ತಾರೆ. ಹಾಗಾಗಿ ನಮ್ಮ ಮನೆಯಲ್ಲಿ 3 ಕ್ಕಿಂತ ಕಡಿಮೆ ಮಕ್ಕಳು ಇರಬಾರದು ಎಂದು ಹೇಳಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us