ಮಂಗಳೂರು: ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ: ವಕೀಲ ರಾಜೇಶ್ ಭಟ್ ಸೇರಿ ನಾಲ್ವರ ವಿರುದ್ಧ ಎಫ್ಐಆರ್; ತನಿಖೆಗೆ 3 ತಂಡ ರಚನೆ
ಮಂಗಳೂರಿನಲ್ಲಿ ಇಂಟರ್ನ್ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಪಟ್ಟಂತೆ ವಕೀಲ ರಾಜೇಶ್ ಭಟ್ ಸೇರಿದಂತೆ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಮಂಗಳೂರು: ವಕೀಲ ರಾಜೇಶ್ ಭಟ್ ಇಂಟರ್ನ್ ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪಕ್ಕೆ ಸಂಬಂಧಪಟ್ಟಂತೆ, ರಾಜೇಶ್ ಸೇರಿದಂತೆ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಪ್ರಕರಣದಲ್ಲಿ ರಾಜೇಶ್ ಭಟ್ ಸೇರಿ ಪವಿತ್ರ ಆಚಾರ್ಯ, ಶಿವಾನಂದ ಮತ್ತು ಧ್ರುವ ಪ್ರಮುಖ ಆರೋಪಿಗಳಾಗಿದ್ದಾರೆ. ರಾಜೇಶ್ ಭಟ್ ಮೇಲೆ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊರಿಸಲಾಗಿದ್ದು, ಉಳಿದ ಮೂವರು ಆರೋಪಿಗಳ ಮೇಲೆ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಆರೋಪವಿದೆ.
ಸದ್ಯ ನಾಲ್ವರು ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತನಿಖೆಗಾಗಿ ಎಸಿಪಿ ರಂಜಿತ್ ಬಂಡಾರು ನೇತೃತ್ವದಲ್ಲಿ ಮೂರು ತಂಡ ರಚಿಸಿದ್ದಾರೆ. ಪ್ರಸ್ತುತ ಒಂದು ತಂಡ ಹೊನ್ನಾವರ, ಇನ್ನೆರೆಡು ತಂಡದಿಂದ ಮಂಗಳೂರಿನಲ್ಲೇ ಆರೋಪಿಗಾಗಿ ಹುಡುಕಾಟ ನಡೆಸಿದೆ.
ವಕೀಲ ರಾಜೇಶ್ ಭಟ್ ಕಛೇರಿಗೆ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ: ಮಂಗಳೂರು: ಖ್ಯಾತ ವಕೀಲ ರಾಜೇಶ್ ಭಟ್ ವಿರುದ್ಧ FIR ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಆಯುಕ್ತ ಶಶಿಕುಮಾರ್ ರಾಜೇಶ್ ಅವರ ಕರಂಗಲ್ಪಾಡಿಯಲ್ಲಿರುವ ಕಛೇರಿಗೆ ಭೇಟಿ ನೀಡಿದ್ದಾರೆ. ಆದರೆ ವಕೀಲರ ಕಛೇರಿಗೆ ಬೀಗ ಹಾಕಿದ್ದರಿಂದ ಶಶಿಕುಮಾರ್ ವಾಪಸ್ ತೆರಳಿದ್ದಾರೆ.
ಇದನ್ನೂ ಓದಿ:
ಮಂಗಳೂರು: ‘ದೌರ್ಜನ್ಯದ ಆರೋಪ ನನ್ನ ವಿರುದ್ಧ ನಡೆದ ದೊಡ್ಡ ಷಡ್ಯಂತ್ರ’; ವಕೀಲ ರಾಜೇಶ್ ಭಟ್ ಹೇಳಿಕೆ
ಲೈಂಗಿಕ ದೌರ್ಜನ್ಯದ ಆರೋಪ; ಮಂಗಳೂರಿನ ಖ್ಯಾತ ವಕೀಲ ರಾಜೇಶ್ ಭಟ್ ವಿರುದ್ಧ ಎಫ್ಐಆರ್ ದಾಖಲು