ಮಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR

ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ತೆಕ್ಕಾರು ಗ್ರಾಮದ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಳಶೋತ್ಸವ ಆಹ್ವಾನ ಪತ್ರಿಕೆ ವಿತರಣೆಗೆ ಸಂಬಂಧಿಸಿದಂತೆ ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಹೊರಿಸಲಾಗಿದೆ. ದೂರುದಾರ ಇಬ್ರಾಹಿಂ ಎಸ್.ಬಿ. ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಬಿಎನ್ಎಸ್ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR
ಶಾಸಕ ಹರೀಶ್​ ಪುಂಜಾ
Updated By: ವಿವೇಕ ಬಿರಾದಾರ

Updated on: May 04, 2025 | 6:21 PM

ಮಂಗಳೂರು, ಮೇ 04: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Punja) ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ಶನಿವಾರ (ಮೇ.04) ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬ್ರಹ್ಮಕಳಶೋತ್ಸವ ನಡೆಯಿತು.

“ದೇವಾಲಯದ ಬ್ರಹ್ಮಕಳಶೋತ್ಸವ ಕಾರ್ಯಕ್ರಮದ ಆಹ್ವಾನಪತ್ರಿಕೆಗಳನ್ನು ಮಸೀದಿಗೆ ಹೋಗಿ ಕೊಟ್ಟ ಕಾರಣ ಮುಸ್ಲಿಮರು ಟ್ಯೂಬ್ ಒಡೆದಿದ್ದಾರೆ. ಅವರಿಗೆ ಆಹ್ವಾನಪತ್ರೆಕೆ ಕೊಡಬಾರದಿತ್ತು. ಅವರನ್ನು ಕಾಯರ್ಯಕ್ರಮಕ್ಕೆ ಕರೆಯಬಾರದಿತ್ತು. ನಾವು ಹಿಂದುಗಳು ಹಿಂದೂಗಳೇ ಅವರನ್ನು ಸೇರಿಸಬಾರದು” ಎಂದು ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಕಾರಿ, ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಮುಂದುವರಿದ ಪ್ರತೀಕಾರದ ಎಚ್ಚರಿಗಳು: ಕೊಚ್ಚಿ ಕೊಲ್ಲುವ ಸಂದೇಶಗಳು

ಇದನ್ನೂ ಓದಿ
ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಮಂಗಳೂರಿನ 3 ಕಡೆ ಚಾಕು ಇರಿತ: 7 ಜನರ ಬಂಧನ
ಸುಹಾಸ್ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿರುವ ಇಬ್ಬರು ಹಿಂದೂಗಳು ಯಾರು?
ಸುಹಾಸ್ ಹತ್ಯೆ: ಫಿನೀಶ್, ರಿವೇಂಜ್ ಪೋಸ್ಟ್​​ಗಳ ವಿರುದ್ಧ 12 ಪ್ರಕರಣ ದಾಖಲು
ಸುಹಾಸ್ ಶೆಟ್ಟಿ ಕೊಲೆ ಕೇಸ್‌: 8 ಜನ ಶಂಕಿತರು ವಶಕ್ಕೆ, ಪೊಲೀಸರಿಂದ ವಿಚಾರಣೆ

ಈ ಹಿನ್ನೆಲೆಯಲ್ಲಿ ತಕ್ಕಾರು ಗ್ರಾಮದ ನಿವಾಸಿ ಇಬ್ರಾಹಿಂ ಎಸ್‌.ಬಿ ಎಂಬುವರು ದೂರು ನೀಡಿದ್ದಾರೆ. ದೂರು ಆಧಾರದ ಮೇಲೆ ಬಿಎನ್ಎಸ್ಎಸ್ ಕಾಯ್ದೆ 196, 352(2) ಅಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ