ಎಫ್​ಐಆರ್​​ ಆಯ್ತು, ಹರೀಶ್ ಪೂಂಜಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾದ ಕಾಂಗ್ರೆಸ್​

|

Updated on: May 25, 2023 | 6:42 PM

ಸಿಎಂ ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮಾನನಷ್ಟ  ಮೊಕದ್ದಮೆ ದಾಖಲಿಸಲು ಕಾಂಗ್ರೆಸ್​​ ನಿರ್ಧರಿಸಿದೆ.

ಎಫ್​ಐಆರ್​​ ಆಯ್ತು, ಹರೀಶ್ ಪೂಂಜಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾದ ಕಾಂಗ್ರೆಸ್​
ಬಿಜೆಪಿ ಶಾಸಕ ಹರೀಶ್ ಪೂಂಜಾ
Follow us on

ಮಂಗಳೂರು: ಸಿಎಂ ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ಮಾನನಷ್ಟ  ಮೊಕದ್ದಮೆ ದಾಖಲಿಸಲು ಕಾಂಗ್ರೆಸ್​​ ನಿರ್ಧರಿಸಿದೆ. ಇದೇ ತಿಂಗಳ 22ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಹರೀಶ್ ಪೂಂಜಾ, 24 ಹಿಂದೂ ಕಾರ್ಯಕರ್ತರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆಂದು ತುಳುವಿನಲ್ಲಿ‌ ಹೇಳಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಕೂಡ ವೈರಲ್​ ಆಗಿತ್ತು.

ಮಹಿಳಾ ಕಾಂಗ್ರೆಸ್​ ಕಾರ್ಯಕರ್ತೆ ನಮಿತಾ ಪೂಜಾರಿ ನೀಡಿದ ದೂರಿನ ಆಧಾರದ ಮೇಲೆ ಬುಧವಾರ ಬೆಳ್ತಂಗಡಿ ಪೊಲೀಸ್​​ ಠಾಣೆಯಲ್ಲಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್​ಐಆರ್​ ಕೂಡ ದಾಖಲಾಗಿತ್ತು.

ಹರೀಶ್ ಪೂಂಜಾ ಚುನಾವಣೆ ಗೆಲ್ಲಲು ಹಣ ಹಂಚಿದ್ದಾರೆ: ಹರೀಶ್ ಕುಮಾರ್​

ಈ ಕುರಿತಾಗಿ ನಗರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಹರೀಶ್ ಕುಮಾರ್​ ಪ್ರತಿಕ್ರಿಯೆ ನೀಡಿದ್ದು, ಹರೀಶ್ ಪೂಂಜಾ ಚುನಾವಣೆ ಗೆಲ್ಲಲು 40% ಕಮಿಷನ್ ಹಣ ಹಂಚಿದ್ದಾರೆ. ಬೆಳ್ತಂಗಡಿ ಕ್ಷೇತ್ರದಲ್ಲಿ ಗೆಲ್ಲಲು ಹರೀಶ್ ಪೂಂಜಾ ಹಣದ ಹೊಳೆ ಹರಿಸಿದ್ದಾರೆ. ಸುಮಾರು 30ರಿಂದ 40 ಕೋಟಿ ಹಣ ಖರ್ಚು ಮಾಡಿ ಚುನಾವಣೆ ಗೆದ್ದಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಬೆಳ್ತಂಗಡಿ ಪೊಲೀಸರನ್ನು ಪೂಂಜಾ ಬುಕ್ ಮಾಡಿದ್ದರು. ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಈಗ ನಮ್ಮ ಸರ್ಕಾರ ಇರುವುದರಿಂದ ಪೂಂಜಾ ವಿರುದ್ಧ ತನಿಖೆ ನಡೆಸುತ್ತೇವೆ ಎಂದು ಕಿಡಿಕಾರಿದ್ದಾರೆ.

ಬಹಿರಂಗ ಕ್ಷಮೆಗೆ ಒತ್ತಾಯ

ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನು ಕೊಂದಿದ್ದಾರೆ ಹೇಳಿದ್ದಾರೆ. ರಾಜ್ಯದಲ್ಲಿ ಸುಮಾರು 4 ವರ್ಷಗಳ ಕಾಲ ಬಿಜೆಪಿಯೇ ಆಡಳಿತದಲ್ಲಿತ್ತು. ಬಿಜೆಪಿ ಆಡಳಿತದಲ್ಲಿ ಯಾಕೆ 24 ಕೊಲೆ ಕೇಸ್​ಗಳ ಬಗ್ಗೆ ತನಿಖೆ ನಡೆಸಲಿಲ್ಲ. ಕೇವಲ ಕಮಿಷನ್​ ಹಣ ಎಣಿಸುವುದರಲ್ಲಿ ಬ್ಯುಸಿ ಆಗಿದ್ದರಾ ಎಂದು ಪ್ರಶ್ನೆ ಮಾಡಿದರು.

ಇದನ್ನೂ ಓದಿ: Mangaluru News: ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರಿನಿಂದ ಹಲ್ಲೆ

ಸಿದ್ದರಾಮಯ್ಯ ವಿರುದ್ಧ ಹೇಳಿಕೆಗೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಶಾಸಕ ಹರೀಶ್ ಪೂಂಜಾ ವಿರುದ್ಧ
ಮಾನನಷ್ಟ ಮೊಕದ್ದಮೆ ಹೂಡಲು ನಾವು ತಯಾರಿ ಮಾಡಿಕೊಳ್ಳುತ್ತಿದ್ದೇವೆ ಎಂದು ಹರೀಶ್ ಕುಮಾರ್ ಹೇಳಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:42 pm, Thu, 25 May 23