ಮೀನುಗಾರರಿಗೆ ಇನ್ಮುಂದೆ ಸಮುದ್ರದಲ್ಲೇ ಸಿಗಲಿದೆ ಸಿಹಿ ನೀರು; ಆಸ್ಟ್ರೇಲಿಯಾದ ತಂತ್ರಜ್ಞಾನ ಭಾರತದಲ್ಲಿ ಮೊದಲ ಬಾರಿಗೆ ಬಳಕೆ

ಆಸ್ಟ್ರೇಲಿಯಾದ ಈ ತಂತ್ರಜ್ಞಾನವನ್ನು ಭಾರತದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಜಾರಿಗೊಳಿಸಲಾಗಿದೆ. ಈ ರೀತಿ ಬೋಟ್‌ನಲ್ಲಿಯೇ ಉಪ್ಪು ನೀರನ್ನು ಸಿಹಿ ನೀರಾಗಿ ಫಿಲ್ಟರ್ ಮಾಡುವ ತಂತ್ರಜ್ಞಾನದ ಪ್ರಾತ್ಯಕ್ಷಿತೆಯನ್ನು ಮೀನುಗಾರಿಕ ಸಚಿವರಾದ ಎಸ್.ಅಂಗಾರ ಸಮ್ಮುಖದಲ್ಲೇ ನಡೆಸಲಾಯಿತು.

ಮೀನುಗಾರರಿಗೆ ಇನ್ಮುಂದೆ ಸಮುದ್ರದಲ್ಲೇ ಸಿಗಲಿದೆ ಸಿಹಿ ನೀರು; ಆಸ್ಟ್ರೇಲಿಯಾದ ತಂತ್ರಜ್ಞಾನ ಭಾರತದಲ್ಲಿ ಮೊದಲ ಬಾರಿಗೆ ಬಳಕೆ
ಆಸ್ಟ್ರೇಲಿಯಾದ ತಂತ್ರಜ್ಞಾನ ಭಾರತದಲ್ಲಿ ಮೊದಲ ಬಾರಿಗೆ ಬಳಕೆ
Follow us
TV9 Web
| Updated By: preethi shettigar

Updated on: Sep 03, 2021 | 5:13 PM

ದಕ್ಷಿಣ ಕನ್ನಡ: ಆಳಸಮುದ್ರ ಮೀನುಗಾರಿಕೆ ಒಂದು ವಾರಕ್ಕಿಂತ ಹೆಚ್ಚು ದಿನ ಸಮುದ್ರದ ಮಧ್ಯದಲ್ಲಿದ್ದುಕೊಂಡೇ ನಡೆಸುವ ಮೀನುಗಾರಿಕೆ. ಈ ರೀತಿಯ ಮೀನುಗಾರಿಕೆಗೆ ಹೋಗುವಾಗ ಕುಡಿಯುವುದಕ್ಕೆ ನಿತ್ಯದ ಬಳಕೆಗೆ ಸಿಹಿನೀರನ್ನು ಬೋಟ್‌ನಲ್ಲಿ ಸಂಗ್ರಹಿಸಿ ಕೊಂಡೊಯ್ಯಲಾಗುತ್ತದೆ. ಆದರೆ ಇನ್ನು ಮುಂದೆ, ಈ ರೀತಿ ನೀರು ಕೊಂಡೊಯ್ಯುವ ಅವಶ್ಯಕತೆ ಇಲ್ಲ. ಕಾರಣ ಸಮುದ್ರದ ಉಪ್ಪು ನೀರನ್ನು ಬೋಟ್‌ನಲ್ಲಿಯೇ ಫಿಲ್ಟರ್ ಮಾಡಿ ಸಿಹಿನೀರಾಗಿ ಪಡೆಯುವ ತಂತ್ರಜ್ಞಾನ ಪ್ರಾರಂಭಿಸಲಾಗಿದೆ. ಭಾರತದಲ್ಲಿಯೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಈ ಪ್ರಯೋಗ ನಡೆಸಲಾಗಿದೆ.

ಸಮುದ್ರದ ಮಧ್ಯೆ ಸಿಹಿನೀರು! ಆಳಸಮುದ್ರ ಮೀನುಗಾರಿಕೆಗೆ ತೆರಳುವ ಮೀನುಗಾರರು 10ಕ್ಕೂ ಹೆಚ್ಚು ದಿನಗಳ ಕಾಲ ಸಮುದ್ರದಲ್ಲೇ ಇರುತ್ತಾರೆ. ಈ ಸಂದರ್ಭ ಸಮುದ್ರದ ನೀರು ಕುಡಿಯಲು ಯೋಗ್ಯವಲ್ಲದ ಕಾರಣ ಒಂದು ವಾರದ ಬಳಕೆಗೆ ಬೇಕಾದ ಸಿಹಿ ನೀರನ್ನು ಹೋಗುವಾಗಲೇ ಬೋಟ್‌ನಲ್ಲಿ ಸಂಗ್ರಹಿಸಿ ಕೊಂಡೊಯ್ಯುತ್ತಾರೆ. ಆದರೆ ಇನ್ಮುಂದೆ ಈ ರೀತಿ ಕೊಂಡೊಯ್ಯುವ ಬದಲು ಸಮುದ್ರದ ಉಪ್ಪು ನೀರನ್ನೇ ಸಿಹಿ ನೀರಾಗಿ ಪರಿವರ್ತಿಸಿ ಬಳಕೆ ಮಾಡಬಹುದು.

ಆಸ್ಟ್ರೇಲಿಯಾದ ಈ ತಂತ್ರಜ್ಞಾನವನ್ನು ಭಾರತದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಜಾರಿಗೊಳಿಸಲಾಗಿದೆ. ಈ ರೀತಿ ಬೋಟ್‌ನಲ್ಲಿಯೇ ಉಪ್ಪು ನೀರನ್ನು ಸಿಹಿ ನೀರಾಗಿ ಫಿಲ್ಟರ್ ಮಾಡುವ ತಂತ್ರಜ್ಞಾನದ ಪ್ರಾತ್ಯಕ್ಷಿತೆಯನ್ನು ಮೀನುಗಾರಿಕ ಸಚಿವರಾದ ಎಸ್.ಅಂಗಾರ ಸಮ್ಮುಖದಲ್ಲೇ ನಡೆಸಲಾಯಿತು.

ಈ ತಂತ್ರಜ್ಞಾನ ಅಮೇರಿಕಾ, ಯುರೂಪ್‌ನಲ್ಲಿ ಈಗಾಗಲೇ ಬಳಕೆಯಲ್ಲಿದೆ. ಆಸ್ಟ್ರೇಲಿಯಾ ಮೂಲದ ರೆಯಾನ್ಸ್ ಎಂಬ ಕಂಪೆನಿ ಈ ಕಿಟ್‌ನ್ನು ತಯಾರಿಸುತ್ತಿದೆ. ಇಲ್ಲಿ ಬೋಟ್ ಸಂಚರಿಸುವಾಗಲೇ ಉಪ್ಪು ನೀರನ್ನು ಪೈಪ್ ಮೂಲಕ ಸಂಗ್ರಹಿಸಲಾಗುತ್ತದೆ. ಪೈಪ್‌ನಿಂದ ಬಂದ ಉಪ್ಪು ನೀರು ಶುದ್ಧೀಕರಿಸುವ ಯಂತ್ರದ ಒಳಗೆ ಪಂಪ್ ಆಗಿ ಬಳಿಕ ಫಿಲ್ಟರ್ ಆಗಿ ಸಿಹಿ ನೀರು ಇನ್ನೊಂದು ಪೈಪ್ ಮೂಲಕ ಹೊರ ಬರುತ್ತದೆ.

ಈ ರೀತಿ ಗಂಟೆಗೆ 168 ಲೀಟರ್ ನೀರು ಫಿಲ್ಟರ್ ಆಗಲಿದ್ದು, ದಿನವೊಂದಕ್ಕೆ 2000 ಲೀಟರ್ ನೀರು ಫಿಲ್ಟರ್ ಆಗುತ್ತದೆ. ಇದರಿಂದ ಸದ್ಯ ನೀರು ಸಂಗ್ರಹಿಸಿಡಲು ಬೋಟ್‌ನಲ್ಲಿ ಸ್ಥಳವಕಾಶ ಸಮಸ್ಯೆ ಜೊತೆ ಅಧಿಕ ಭಾರದ ಹೊರೆ ತಪ್ಪಿದಂತಾಗುತ್ತದೆ. ಮೀನುಗಾರರಿಗೆ ನಿತ್ಯ ಬಳಕೆಗೆ ಇದೇ ನೀರನ್ನು ಬಳಸಬಹುದಾಗಿದ್ದು, ಸಿಹಿ ನೀರು ಮುಗಿಯುತ್ತದೆ ಎಂಬ ಆತಂಕವು ಇರುವುದಿಲ್ಲ ಎಂದು ಕಂಪೆನಿ ಕನ್ಸಲ್‌ಟೆಂಟ್ ರಾಮಚಂದ್ರ ಬೈಕಂಪಾಡಿ ತಿಳಿಸಿದ್ದಾರೆ.

ಈ ಯಂತ್ರಕ್ಕೆ 4.60 ಲಕ್ಷ ರೂಪಾಯಿ ವೆಚ್ಚವಾಗಲಿದ್ದು, ಕೇಂದ್ರ ಸರ್ಕಾರ ಐವತ್ತು ಶೇಕಡ ಸಬ್ಸಿಡಿ ನೀಡುವ ನಿರ್ಧಾರ ಮಾಡಿದೆ. ಇದೀಗ ರಾಜ್ಯ ಸರ್ಕಾರವೂ ಬೋಟ್ ಮಾಲೀಕರಿಗೆ ಈ ಯಂತ್ರ ಅಳವಡಿಕೆಗೆ ವಿಶೇಷ ಅನುದಾನ ನೀಡುವ ಚಿಂತನೆ ನಡೆಸಿದೆ. ಒಟ್ಟಿನಲ್ಲಿ ಇನ್ಮುಂದೆ ಮೀನುಗಾರರಿಗೆ ಸಿಹಿ ನೀರು ಸಮುದ್ರದಲ್ಲೇ ಲಭ್ಯವಾಗಲಿದ್ದು, ಸಿಹಿ ನೀರಿನ ಆಭಾವ ತಪ್ಪಲಿದೆ.

ವರದಿ: ಪೃಥ್ವಿರಾಜ್ ಬೊಮ್ಮನಕೆರೆ

ಇದನ್ನೂ ಓದಿ: ಸಮುದ್ರದ ನಡುವಲ್ಲಿ ಎದುರಾಯ್ತು ದೈತ್ಯ ಹಾವು; ಬೋಟ್​ನತ್ತ ಹಾವು ನುಗ್ಗಿ ಬಂದ ವಿಡಿಯೋ ವೈರಲ್​

ಅದೃಷ್ಟ ಅಂದ್ರೆ ಇದಪ್ಪಾ! ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಕೋಟ್ಯಾಧೀಶನಾದ ಮಹಾರಾಷ್ಟ್ರದ ಮೀನುಗಾರ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ