ಸುರತ್ಕಲ್ನಲ್ಲಿ ಫಾಜಿಲ್ ಕೊಲೆಗೈದಿದ್ದ ಐವರು ಆರೋಪಿಗಳು ಅರೆಸ್ಟ್!
ಐವರು ಆರೋಪಿಗಳು ಬಂಧನಕ್ಕೊಳಗಾಗಿದ್ದು, ಪ್ರಮುಖ ಆರೋಪಿಗಾಗಿ ಹುಡುಕಾಟ ಮುಂದುವರೆದಿದೆ.
ಮಂಗಳೂರು: ಸುರತ್ಕಲ್ನಲ್ಲಿ (Surathkal) ಜುಲೈ 28ರ ರಾತ್ರಿ ಯುವಕ ಫಾಜಿಲ್ನ ಕೊಲೆಗೈದಿದ್ದ (Murder) ಆರೋಪಿಗಳನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಐವರು ಆರೋಪಿಗಳು ಬಂಧನಕ್ಕೊಳಗಾಗಿದ್ದು, ಪ್ರಮುಖ ಆರೋಪಿಗಾಗಿ ಹುಡುಕಾಟ ಮುಂದುವರೆದಿದೆ. ಇನ್ನು ಕೊಲೆಗೆ ಆರೋಪಿಗಳನ್ನ ಕರೆತಂದಿದ್ದ ಕಾರು ಚಾಲಕನನ್ನೂ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಇನ್ನು ಕಾರು ಚಾಲಕನನ್ನು ವಶಕ್ಕೆ ಪಡೆದ ಕಹಾನಿಯೇ ರೋಚಕವಾಗಿದೆ. ಪೊಲೀಸರು ಮೊದಲು ಸ್ಪಾಟ್ಗೆ ಬಂದಿದ್ದ ಕಾರನ್ನು ಗುರುತಿಸಿದ್ದಾರೆ. ಈ ವೇಳೆ ಹ್ಯುಂಡೈ ಇಯಾನ್ ಕಾರು ಅನ್ನೋದು ಗೊತ್ತಾಗಿತ್ತು. ನಂತರ ಮಂಗಳೂರಲ್ಲಿದ್ದ ಎಲ್ಲಾ ಇಯಾನ್ ಕಾರುಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅದರಲ್ಲಿ ಬಿಳಿ ಬಣ್ಣದ ಕಾರುಗಳ ಮಾಹಿತಿ ಕಲೆ ಹಾಕಲು ಪೊಲೀಸರು ಮುಂದಾಗಿದ್ದರು. ಈ ವೇಳೆ ಇಯಾನ್ ಕಾರು ಮಾಲೀಕರನ್ನು ಕರೆಸಿ ವಿಚಾರಣೆ ನಡೆಸಿದ್ದರು.
ಇದನ್ನೂ ಓದಿ: DNA Test: ಅತ್ಯಾಚಾರ ಪ್ರಕರಣದಲ್ಲಿ ಡಿಎನ್ಎ ಪರೀಕ್ಷೆ ನಿರ್ಣಾಯಕ ಸಾಕ್ಷ್ಯವಲ್ಲ: ಬಾಂಬೆ ಹೈಕೋರ್ಟ್
Published On - 9:29 am, Sun, 31 July 22