Updated on:Dec 04, 2021 | 4:51 PM
ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನವನ್ನು ಸಚಿವ ಡಾ.ಸುಧಾಕರ್, ರಾಜ್ಯಪಾಲರಾದ ಥಾವರ್ ಚಾಂದ್ ಗೆಹ್ಲೋಟ್ ಉದ್ಘಾಟಿಸಿದ್ರು. ಈ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಈ ಬಾರಿ ಹಿರಿಯ ಸಾಹಿತಿ ಮಲ್ಲೇಪುರಂ ಜಿ. ವೆಂಕಟೇಶ್ ವಹಿಸಿದ್ರು. ಉಪನ್ಯಾಸಕರಾಗಿ ಡಾ.ಗಜಾನನ ಶರ್ಮ, ಡಾ.ಪಿ.ಚಂದ್ರಿಕಾ, ಡಾ.ಕೆ.ಪಿ.ಪುತ್ತೂರಾಯ ಪ್ರವಚನ ನೀಡಿದ್ರು.
Dharmasthala Temple to be closed amid Coronavirus Covid19 Night Curfew Weekend Curfew
ಹೂ ಹಣ್ಣುಗಳಿಂದ ಸಿಂಗರಿಸಿದ ಬೆಳ್ಳಿ ರಥ ದೇವಸ್ಥಾನದ ಮುಂಭಾಗದಿಂದ ಹೊರಟು, ನೆರದಿದ್ದ ಲಕ್ಷ, ಲಕ್ಷ ಭಕ್ತರ ನಡುವೆ, ರಥಬೀದಿಯಾಗಿ ಗೌರಿಮಾರುಕಟ್ಟೆಗೆ ಸಾಗಿತು. ಉತ್ಸವದುದ್ದಕ್ಕೂ ನಾದ ಸ್ವರಗಳು, ವಾಲಗ, ಡೊಳ್ಳು ಕುಣಿತ, ಶಂಖದಾಸರು ಮತ್ತು ಕಹಳೆ, ವೀರಗಾಸೆಯರು, ಬ್ಯಾಂಡ ಸೆಟ್ಟುಗಳು ಸಾಥ್ ನೀಡಿದವು.
ಕಳೆದ ಐದು ದಿನಗಳಿಂದ ನಡೆದ ಲಕ್ಷ ದೀಪೋತ್ಸವದ ಸಂಭ್ರಮ ಇಂದು ರಥೋತ್ಸವದೊಂದಿಗೆ ಸಂಪನ್ನಗೊಂಡಿದೆ. ಒಟ್ಟು 5 ದಿನಗಳ ಕಾಲ ನಡೆಯೋ ಈ ದೀಪೋತ್ಸವ ಸಂಭ್ರಮಕ್ಕೆ ಕೊನೆಯ ದಿನವಾದ ಇಂದು ಲಕ್ಷಾಂತರ ಭಕ್ತರು ಸಾಕ್ಷಿಯಾದ್ರು.
ಲಕ್ಷ ದೀಪೋತ್ಸವಕ್ಕೆ ನಾಡಿನ ಲಕ್ಷಾಂತರ ಭಕ್ತರು ಪಾದೆಯಾತ್ರೆಯ ಮೂಲಕ ಬಂದು ಸೇವೆ ಮಾಡಿದ್ರು. ಅಲ್ಲದೆ ರೈತರು ತಾವು ಬೆಳೆದ ತರಕಾರಿ, ಹಣ್ಣುಹಂಪಲು, ಧಾನ್ಯಗಳನ್ನು ಕಾಣಿಕೆಯಾಗಿ ತಂದು ಒಪ್ಪಿಸಿದ್ರು. ಬೆಂಗಳೂರಿನ ವ್ಯಾಪಾರಿಗಳು ವಿವಿಧ ಹೂಗಳಿಂದ ಕ್ಷೇತ್ರವನ್ನು ಅಲಂಕರಿಸು ಮೂಲಕ ಸೇವೆ ಸಲ್ಲಿಸಿದ್ರು.
ಲಕ್ಷ ದೀಪೋತ್ಸವ ಕಣ್ತುಂಬಿಕೊಳ್ಳಲು ದೂರದ ಊರಿಗಳಿಂದ ಆಗಮಿಸಿರುವ ಸಾವಿರಾರು ಭಕ್ತರು
5 ದಿನಗಳಿಂದ ಅಮೃತವರ್ಷಿಣಿ ಸಭಾಂಗಣದಲ್ಲಿ ಪ್ರತಿನಿತ್ಯ ದೇಸಿಯ ಸಾಂಸ್ಕೃತಿಕ ರಸದೌತಣವೇ ಏರ್ಪಟ್ಟಿದ್ದು ಇಂದು ಸಂಜೆ ಕೂಡ ಅದು ಮುಂದುವರೆಯಲಿದೆ. ನವದುರ್ಗೆಯರ ನೃತ್ಯ ರೂಪಕ, ಭರತನಾಟ್ಯ ಸೇರಿದಂತೆ ವಿವಿಧ ಬಗೆಯ ನಾಟ್ಯ ಪ್ರದರ್ಶನ ಮತ್ತು ನಾಟಕವನ್ನು ಪ್ರದರ್ಶನ ಮಾಡಲಾಗುತ್ತೆ.
ಈ ಬಾರಿ 2500 ಜನರ ಕಲಾವಿದರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ.
Published On - 4:37 pm, Sat, 4 December 21