ಐದು ದಿನಗಳ ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ ಸಂಪನ್ನ, ಇಲ್ಲಿದೆ ನೀವು ಕಣ್ತುಂಬಿಕೊಳ್ಳಬೇಕಾದ ಕಲರ್ ಫುಲ್ ಫೋಟೋಗಳು

Edited By: ಆಯೇಷಾ ಬಾನು

Updated on: Dec 04, 2021 | 4:51 PM

ಈ ಭಾರಿಯ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ ಸಂಪನ್ನಗೊಂಡಿದೆ. 5 ದಿನಗಳ ಕಾಲ ನಡೆದ ಈ ಲಕ್ಷದೀಪೋತ್ಸವದ ಫೋಟೊಗ್ರಫಿ ಝಲಕ್ ಇಲ್ಲಿದೆ.

1 / 8
ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನವನ್ನು ಸಚಿವ ಡಾ.ಸುಧಾಕರ್, ರಾಜ್ಯಪಾಲರಾದ ಥಾವರ್ ಚಾಂದ್ ಗೆಹ್ಲೋಟ್ ಉದ್ಘಾಟಿಸಿದ್ರು. ಈ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಈ ಬಾರಿ ಹಿರಿಯ ಸಾಹಿತಿ ಮಲ್ಲೇಪುರಂ ಜಿ. ವೆಂಕಟೇಶ್ ವಹಿಸಿದ್ರು. ಉಪನ್ಯಾಸಕರಾಗಿ ಡಾ.ಗಜಾನನ ಶರ್ಮ, ಡಾ.ಪಿ.ಚಂದ್ರಿಕಾ, ಡಾ.ಕೆ.ಪಿ.ಪುತ್ತೂರಾಯ ಪ್ರವಚನ ನೀಡಿದ್ರು.

ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನವನ್ನು ಸಚಿವ ಡಾ.ಸುಧಾಕರ್, ರಾಜ್ಯಪಾಲರಾದ ಥಾವರ್ ಚಾಂದ್ ಗೆಹ್ಲೋಟ್ ಉದ್ಘಾಟಿಸಿದ್ರು. ಈ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಈ ಬಾರಿ ಹಿರಿಯ ಸಾಹಿತಿ ಮಲ್ಲೇಪುರಂ ಜಿ. ವೆಂಕಟೇಶ್ ವಹಿಸಿದ್ರು. ಉಪನ್ಯಾಸಕರಾಗಿ ಡಾ.ಗಜಾನನ ಶರ್ಮ, ಡಾ.ಪಿ.ಚಂದ್ರಿಕಾ, ಡಾ.ಕೆ.ಪಿ.ಪುತ್ತೂರಾಯ ಪ್ರವಚನ ನೀಡಿದ್ರು.

2 / 8

ಧರ್ಮಸ್ಥಳ ಕ್ಷೇತ್ರ

3 / 8

ಹೂ ಹಣ್ಣುಗಳಿಂದ ಸಿಂಗರಿಸಿದ ಬೆಳ್ಳಿ ರಥ ದೇವಸ್ಥಾನದ ಮುಂಭಾಗದಿಂದ ಹೊರಟು, ನೆರದಿದ್ದ ಲಕ್ಷ, ಲಕ್ಷ ಭಕ್ತರ ನಡುವೆ, ರಥಬೀದಿಯಾಗಿ ಗೌರಿಮಾರುಕಟ್ಟೆಗೆ ಸಾಗಿತು. ಉತ್ಸವದುದ್ದಕ್ಕೂ ನಾದ ಸ್ವರಗಳು, ವಾಲಗ, ಡೊಳ್ಳು ಕುಣಿತ, ಶಂಖದಾಸರು ಮತ್ತು ಕಹಳೆ, ವೀರಗಾಸೆಯರು, ಬ್ಯಾಂಡ ಸೆಟ್ಟುಗಳು ಸಾಥ್ ನೀಡಿದವು.

4 / 8

ಕಳೆದ ಐದು ದಿನಗಳಿಂದ ನಡೆದ ಲಕ್ಷ ದೀಪೋತ್ಸವದ ಸಂಭ್ರಮ ಇಂದು ರಥೋತ್ಸವದೊಂದಿಗೆ ಸಂಪನ್ನಗೊಂಡಿದೆ. ಒಟ್ಟು 5 ದಿನಗಳ ಕಾಲ ನಡೆಯೋ ಈ ದೀಪೋತ್ಸವ ಸಂಭ್ರಮಕ್ಕೆ ಕೊನೆಯ ದಿನವಾದ ಇಂದು ಲಕ್ಷಾಂತರ ಭಕ್ತರು ಸಾಕ್ಷಿಯಾದ್ರು.

5 / 8

ಲಕ್ಷ ದೀಪೋತ್ಸವಕ್ಕೆ ನಾಡಿನ ಲಕ್ಷಾಂತರ ಭಕ್ತರು ಪಾದೆಯಾತ್ರೆಯ ಮೂಲಕ ಬಂದು ಸೇವೆ ಮಾಡಿದ್ರು. ಅಲ್ಲದೆ ರೈತರು ತಾವು ಬೆಳೆದ ತರಕಾರಿ, ಹಣ್ಣುಹಂಪಲು, ಧಾನ್ಯಗಳನ್ನು ಕಾಣಿಕೆಯಾಗಿ ತಂದು ಒಪ್ಪಿಸಿದ್ರು. ಬೆಂಗಳೂರಿನ ವ್ಯಾಪಾರಿಗಳು ವಿವಿಧ ಹೂಗಳಿಂದ ಕ್ಷೇತ್ರವನ್ನು ಅಲಂಕರಿಸು ಮೂಲಕ ಸೇವೆ ಸಲ್ಲಿಸಿದ್ರು.

6 / 8

ಲಕ್ಷ ದೀಪೋತ್ಸವ ಕಣ್ತುಂಬಿಕೊಳ್ಳಲು ದೂರದ ಊರಿಗಳಿಂದ ಆಗಮಿಸಿರುವ ಸಾವಿರಾರು ಭಕ್ತರು

7 / 8

5 ದಿನಗಳಿಂದ ಅಮೃತವರ್ಷಿಣಿ ಸಭಾಂಗಣದಲ್ಲಿ ಪ್ರತಿನಿತ್ಯ ದೇಸಿಯ ಸಾಂಸ್ಕೃತಿಕ ರಸದೌತಣವೇ ಏರ್ಪಟ್ಟಿದ್ದು ಇಂದು ಸಂಜೆ ಕೂಡ ಅದು ಮುಂದುವರೆಯಲಿದೆ. ನವದುರ್ಗೆಯರ ನೃತ್ಯ ರೂಪಕ, ಭರತನಾಟ್ಯ ಸೇರಿದಂತೆ ವಿವಿಧ ಬಗೆಯ ನಾಟ್ಯ ಪ್ರದರ್ಶನ ಮತ್ತು ನಾಟಕವನ್ನು ಪ್ರದರ್ಶನ ಮಾಡಲಾಗುತ್ತೆ.

8 / 8

ಈ ಬಾರಿ 2500 ಜನರ ಕಲಾವಿದರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ.

Published On - 4:37 pm, Sat, 4 December 21

Loading...
Unable to load recommendations.
Follow Us