ಚಿಕನ್ ಫೆರಿ ಫೆರಿಯಲ್ಲಿ ಕೆಟ್ಟ ವಾಸನೆ: ದಾಳಿ ವೇಳೆ ಮಂಗಳೂರಿನ KFCಯಲ್ಲಿ ಹಳೇ ಮಾಂಸ ಪತ್ತೆ!

ಮಂಗಳೂರಿನ ಸಿಟಿ ಸೆಂಟರ್ ಮಾಲ್‌ನಲ್ಲಿರುವ KFC (ಕೆಎಫ್‌ಸಿ) ಔಟ್‌ಲೆಟ್ ಮೇಲೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಅವಧಿ ಮೀರಿದ ಹಳೇ ಮಾಂಸ ಹಾಗೂ ದುರ್ಬಳಕೆಯಾಗುತ್ತಿದ್ದ ಕಪ್ಪು ಎಣ್ಣೆಯನ್ನು ವಶಪಡಿಸಿಕೊಂಡು ಮಳಿಗೆಯನ್ನು ಬಂದ್ ಮಾಡಿಸಿದ್ದಾರೆ. ಫುಡ್​​ನಿಂದ ವಿಪರೀತ ದುರ್ವಾಸನೆ ಬರುತ್ತಿದ್ದ ಕಾರಣ ಗ್ರಾಹಕರೊಬ್ಬರು ಈ ಸಂಬಂಧ ಆಹಾರ ಇಲಾಖೆಗೆ ದೂರು ನೀಡಿದ್ದರು ಎನ್ನಲಾಗಿದೆ.

ಚಿಕನ್ ಫೆರಿ ಫೆರಿಯಲ್ಲಿ ಕೆಟ್ಟ ವಾಸನೆ: ದಾಳಿ ವೇಳೆ ಮಂಗಳೂರಿನ KFCಯಲ್ಲಿ ಹಳೇ ಮಾಂಸ ಪತ್ತೆ!
ಮಂಗಳೂರಿನ KFC ಔಟ್​​ಲೆಟ್​​ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ
Image Credit source: Tv9 Kannada
Edited By:

Updated on: Aug 16, 2026 | 8:46 AM

ಮುಖ್ಯಾಂಶಗಳು

  • ಮಂಗಳೂರಿನ KFC ಔಟ್​​ಲೆಟ್​​ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ
  • ಪರಿಶೀಲನೆ ವೇಳೆ ಹಳೇ ಮಾಂಸ, ಕಪ್ಪಾದ ಎಣ್ಣೆ ಪತ್ತೆ; ಅಧಿಕಾರಿಗಳಿಗೆ ಶಾಕ್​​
  • ಆಹಾರ ಗುಣಮಟ್ಟದ ಸಂಬಂಧ ದೂರು ನೀಡಿದ್ದ ಗ್ರಾಹಕರು

ಮಂಗಳೂರು, ಆಗಸ್ಟ್​​ 16: ಬೆಂಗಳೂರಿನಲ್ಲಿ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್​​ಗಳ ಮೇಲೆ ದಾಳಿ ನಡೆಸಿ ಬಿಸಿ ಮುಟ್ಟಿಸುತ್ತಿರುವ ನಡುವೆ ಆರೋಗ್ಯ ಸಚಿವ ಯು.ಟಿ. ಖಾದರ್​​ ಅವರ ತವರು ಜಿಲ್ಲೆ ಮಂಗಳೂರಲ್ಲಿಯೂ (Mangaluru) ಇದೇ ಮಾದರಿಯ ತಪಾಸಣೆ ನಡೆದಿದೆ. ಮಂಗಳೂರಿನ ಸಿಟಿ ಸೆಂಟರ್ ಮಾಲ್​​ನಲ್ಲಿರುವ ಕೆಎಫ್​​ಸಿ ಔಟ್​​ಲೆಟ್​​ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಸ್ಟೋರೇಜ್​​ನಲ್ಲಿ ಹಳೇ ಮಾಂಸ, ಅವಧಿ ಮೀರಿದ ಎಣ್ಣೆ ಪತ್ತೆಯಾಗಿದೆ. ಗ್ರಾಹಕರೊಬ್ಬರು ಇಲ್ಲಿಂದ ಚಿಕನ್ ಫೆರಿ ಫೆರಿ ತರಿಸಿದ್ದರು. ಬಂದ ಫುಡ್​​ನಿಂದ ವಿಪರೀತ ದುರ್ವಾಸನೆ ಬರುತ್ತಿದ್ದ ಕಾರಣ ಅವರು ಆರೋಗ್ಯ ಇಲಾಖೆಗೆ ಈ ಬಗ್ಗೆ ದೂರು ನೀಡಿದ್ದರು ಎನ್ನಲಾಗಿದೆ.

ಪರಿಶೀಲನೆ ವೇಳೆ ಅಧಿಕಾರಿಗಳಿಗೆ ಶಾಕ್​​

ಕೆಎಫ್​​ಸಿ ಔಟ್​​ಲೆಟ್​​ನಲ್ಲಿ ಪರಿಶೀಲನೆ ವೇಳೆ ಸುಮಾರು 4-8 ತಿಂಗಳ ಮಾಂಸವನ್ನು ದಾಸ್ತಾನಿಟ್ಟಿರೋದು ಬೆಳಕಿಗೆ ಬಂದಿದೆ. ಅಧಿಕಾರಿಗಳು ಸ್ಟೋರೆಜ್ ರೂಂ ಪ್ರವೇಶಿಸುತ್ತಿದ್ದಾಗಲೇ ಗಬ್ಬು ವಾಸನೆ ಬಂದಿದ್ದು, ಔಟ್‌ಲೆಟ್‌ಗೆ ಬೆಂಗಳೂರಿನಿಂದ ಕೋಳಿ ಮಾಂಸ ರವಾನೆಯಾಗುತ್ತಿದೆ ಎಂಬುದು ಗೊತ್ತಾಗಿದೆ. ಸ್ಟೊರೇಜ್‌ನಲ್ಲಿ ಚಿಲ್ಲ್ ಚಿಕನ್, ಪ್ರೊಝನ್ ಚಿಕನ್ ಸೇರಿದಂತೆ 3 ಮಾದರಿಯ ಚಿಕನ್‌ಗಳನ್ನು ದಾಸ್ತಾನು ಮಾಡಲಾಗಿದ್ದು, 3 ದಿನಗಳಿಂದ ಒಂದೇ ಎಣ್ಣೆಯನ್ನು ಬಳಕೆ ಮಾಡುತ್ತಿರುವ ಮಾಹಿತಿ ಸಿಕ್ಕಿದೆ. ಎಣ್ಣೆ ಕಪ್ಪು ಬಣ್ಣಕ್ಕೆ ತಿರುಗಿದ್ದ ಕಾರಣ ಅಧಿಕಾರಿಗಳು ಸಿಬ್ಬಂದಿಯನ್ನು ತರಾಟೆಗೆ ಪಡೆದಿದ್ದಾರೆ.

ಇದನ್ನೂ ಓದಿ:  ಆಹಾರ ಸುರಕ್ಷತಾ ತಪಾಸಣೆ: ಹೋಂ ಬೇಕರ್ಸ್‌, ಟಿಫಿನ್ ಸೇವೆಗಳು, ಕ್ಲೌಡ್ ಕಿಚನ್‌ಗಳ ಮೇಲೂ ಕಣ್ಣಿಟ್ಟ FDA

ಔಟ್​​ಲೆಟ್​​ ಕ್ಲೋಸ್​​

ತಪಾಸಣೆ ವೇಳೆ ಕಳಪೆ ಗುಣಮಟ್ಟದ ಆಹಾರಗಳು ಪತ್ತೆಯಾಗಿರುವ ಹಿನ್ನೆಲ ಸದ್ಯ ಮಳಿಗೆಯನ್ನು ಅಧಿಕಾರಿಗಳು ಬಂದ್​​ ಮಾಡಿಸಿದ್ದಾರೆ. ಕೋಳಿ ಮಾಂಸ ಮತ್ತು ಎಣ್ಣೆಯ ಮಾದರಿಯನ್ನು ಔಟ್​​ಲೆಟ್​​ನಿಂದ ಸಂಗ್ರಹಿಸಲಾಗಿದ್ದು, ಈ ಸ್ಯಾಂಪಲ್​​ಗಳನ್ನು ಮೈಸೂರಿನ ಲ್ಯಾಬ್​​ಗೆ ರವಾನಿಸಲಾಗಿದೆ. ಅಲ್ಲಿಂದ ಅಂತಿಮ ವರದಿ ಬಂದ ಬಳಿಕ ಇನ್ನಷ್ಟು ಅಸಲಿಯತ್ತು ಬಯಲಾಗಬೇಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us