AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆ ಓಡಿಸುವ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ಎಡವಟ್ಟು: ವ್ಯಕ್ತಿಗೆ ತಗುಲಿದ ಗುಂಡು, ಮತ್ತೋರ್ವ ಪಾರು

Mangaluru News: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ಕಾಡಾನೆ ಓಡಿಸುವ ಕಾರ್ಯಾಚರಣೆಯ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಹಾರಿಸಿದ ಗುಂಡು ಇಬ್ಬರಿಗೆ ತಗುಲಿದೆ. ಓರ್ವನಿಗೆ ಗಾಯವಾಗಿದ್ದು, ಮತ್ತೊಬ್ಬ ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯಿಂದ ಅರಣ್ಯ ಇಲಾಖೆ ಮತ್ತೆ ಎಡವಟ್ಟು ಮಾಡಿಕೊಂಡಿದೆ.

ಆನೆ ಓಡಿಸುವ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ಎಡವಟ್ಟು: ವ್ಯಕ್ತಿಗೆ ತಗುಲಿದ ಗುಂಡು, ಮತ್ತೋರ್ವ ಪಾರು
ಪ್ರಾತಿನಿಧಿಕ ಚಿತ್ರImage Credit source: Getty images
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Aug 21, 2026 | 3:11 PM

Share

ಮುಖ್ಯಾಂಶಗಳು

  • ಶಾಗ್ಯ ಎನ್​ಕೌಂಟರ್​ ಬೆನ್ನಲ್ಲೇ ಅರಣ್ಯ ಇಲಾಖೆ ಮತ್ತೆ ಎಡವಟ್ಟು
  • ಆನೆ ಓಡಿಸುವ ಕಾರ್ಯಾಚರಣೆಯಲ್ಲಿ ಗುಂಡು ಹಾರಿ ವ್ಯಕ್ತಿಗೆ ಗಾಯ
  • ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಬೆಂಗಮಲೆ ಬಳಿ ಘಟನೆ

ಮಂಗಳೂರು, ಆಗಸ್ಟ್​​ 21: ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಅರಣ್ಯ ಅಧಿಕಾರಿಗಳಿಂದ ಮೂವರ ಎನ್​​​ಕೌಂಟರ್​ ಪ್ರಕರಣ (Encounter case) ಸದ್ಯ ರಾಜ್ಯದಲ್ಲಿ ಸಾಕಷ್ಟು ಚರ್ಚೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಅತ್ತ ತನಿಖೆ ನಡೆಯುತ್ತಿದ್ದರೆ, ಇತ್ತ ಅರಣ್ಯ ಇಲಾಖೆಯಿಂದ ಮತ್ತೊಂದು ಆಘಾತಕಾರಿ ಎಡವಟ್ಟು ಬೆಳಕಿಗೆ ಬಂದಿದೆ. ಆನೆ ಓಡಿಸುವ ಕಾರ್ಯಾಚರಣೆ ವೇಳೆ ಹಾರಿಸಿದ ಗುಂಡು ಇಬ್ಬರಿಗೆ ತಗುಲಿ ಗಾಯಗೊಂಡಿರುವ ಘಟನೆ ನಡೆದಿದೆ.

ನಡೆದಿದ್ದೇನು?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಬೆಂಗಮಲೆ ಎಂಬಲ್ಲಿ ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿ ಹಾರಿಸಿದ ಗುಂಡು ತಗುಲಿ ಬೈಕ್ ಸವಾರನೊಬ್ಬ ಗಾಯಗೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮತ್ತೊಬ್ಬ ಸವಾರನ ಶರ್ಟ್ ಜೇಬಿನಲ್ಲಿದ್ದ ಮೊಬೈಲ್‌ಗೆ ಗುಂಡು ತಗುಲಿದ್ದು, ಆತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇದನ್ನೂ ಓದಿ: ಚಾಮರಾಜನಗರ ಫೈರಿಂಗ್​​ ಪ್ರಕರಣ: ಮೃತರು ಬೇಟೆಗಾರರು ಎಂಬುದಕ್ಕೆ ಅರಣ್ಯ ಇಲಾಖೆಯಿಂದ ಮತ್ತಷ್ಟು ಸಾಕ್ಷ್ಯ ರಿಲೀಸ್​​

ಸುಮಾರು ನಾಲ್ಕೈದು ದಿನಗಳ ಹಿಂದೆ ಐವರ್ನಾಡು ವ್ಯಾಪ್ತಿಯಲ್ಲಿ ಅರಣ್ಯ ಸಿಬ್ಬಂದಿ ಕಾಡಾನೆಗಳನ್ನು ಓಡಿಸಲು ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಸಿಬ್ಬಂದಿ ಹಾರಿಸಿದ ಗುಂಡು, ಅದೇ ಮಾರ್ಗವಾಗಿ ಬೈಕ್‌ನಲ್ಲಿ ತೆರಳುತ್ತಿದ್ದ ರಾಘವ ಪ್ರಭು ಎಂಬುವವರ ಕಾಲಿಗೆ ತಗುಲಿದೆ. ತಕ್ಷಣವೇ ಗಾಯಗೊಂಡ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅರಣ್ಯಾಧಿಕಾರಿಗಳೇ ಚಿಕಿತ್ಸಾ ವೆಚ್ಚವನ್ನು ಭರಿಸಿ ರಾಜಿ ಸಂಧಾನಕ್ಕೆ ಮುಂದಾಗಿದ್ದರಿಂದ ಅವರು ಯಾವುದೇ ಪೊಲೀಸ್ ದೂರು ದಾಖಲಿಸಿಲ್ಲ ಎನ್ನಲಾಗಿದೆ.

ಜೀವ ಉಳಿಸಿದ ಮೊಬೈಲ್!

ಇದೇ ಘಟನೆಯಲ್ಲಿ ಮತ್ತೊಬ್ಬ ಸವಾರ ಧನರಾಜ್ ಎಂಬುವವರು ಕೂದಲೆಳೆಯ ಅಂತರದಲ್ಲಿ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಗುಂಡಿನ ಚೂರು ನೇರವಾಗಿ ಧನರಾಜ್ ಅವರ ಎದೆಯ ಭಾಗಕ್ಕೆ ನುಗುತ್ತಿತ್ತು, ಆದರೆ ಶರ್ಟ್ ಜೇಬಿನಲ್ಲಿ ಇಟ್ಟುಕೊಂಡಿದ್ದ ಮೊಬೈಲ್‌ಗೆ ತಗುಲಿದೆ. ಇದರಿಂದ ಮೊಬೈಲ್​​ ಜಖಂಗೊಂಡಿದೆ. ಒಂದು ವೇಳೆ ಆ ಜಾಗದಲ್ಲಿ ಮೊಬೈಲ್ ಇಲ್ಲದಿದ್ದರೆ ಗುಂಡು ನೇರವಾಗಿ ಅವರ ಹೃದಯ ಭಾಗಕ್ಕೆ ತೂರಿ ಭಾರಿ ಅನಾಹುತವೇ ಸಂಭವಿಸುತ್ತಿತ್ತು. ಸದ್ಯ ಮೊಬೈಲ್‌ನಿಂದಾಗಿ ಜೀವ ಉಳಿದಿದ್ದು, ಅರಣ್ಯ ಇಲಾಖೆಯ ಈ ಅಜಾಗರೂಕತೆ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ