ಸತತ 28ಗಂಟೆಗಳ ಕಾರ್ಯಾಚರಣೆ ಬಳಿಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆ

| Updated By: ಆಯೇಷಾ ಬಾನು

Updated on: Oct 07, 2024 | 11:49 AM

ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. 28 ಗಂಟೆಗಳ ಕಾರ್ಯಾಚರಣೆ ಬಳಿಕ ಕೂಳೂರಿನ ಸೇತುವೆ ಬಳಿ ಮುಮ್ತಾಜ್ ಅಲಿ ಶವ ಪತ್ತೆಯಾಗಿದೆ. ಮುಳುಗು‌ ತಜ್ಞರು ಮೃತದೇಹವನ್ನು ಹೊರತೆಗೆದಿದ್ದು ಮೃತದೇಹ ಕಂಡು ಮಾಜಿ ಶಾಸಕ ಮೊಯಿದ್ದೀನ್ ಬಾವಾ ಕಣ್ಣೀರು ಹಾಕಿದ್ದಾರೆ.

ಸತತ 28ಗಂಟೆಗಳ ಕಾರ್ಯಾಚರಣೆ ಬಳಿಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆ
ಸತತ 28ಗಂಟೆಗಳ ಕಾರ್ಯಾಚರಣೆ ಬಳಿಕ ಮುಮ್ತಾಜ್ ಅಲಿ ಮೃತದೇಹ ಪತ್ತೆ
Follow us on

ಮಂಗಳೂರು, ಅ.07: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಅಲಿ (Mumtaz Ali) ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಇದೀಗ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. ಮಂಗಳೂರಿನ ಕೂಳೂರಿನ ಸೇತುವೆ ಬಳಿ ಮುಮ್ತಾಜ್ ಅಲಿ ಶವ ಪತ್ತೆಯಾಗಿದೆ. ಮುಳುಗು‌ ತಜ್ಞರು ಮೃತದೇಹವನ್ನು (Dead Body) ಹೊರತೆಗೆದಿದ್ದು ಮೃತದೇಹ ಕಂಡು ಮಾಜಿ ಶಾಸಕ ಮೊಯಿದ್ದೀನ್ ಬಾವಾ ಕಣ್ಣೀರು ಹಾಕಿದ್ದಾರೆ.

ನಿನ್ನೆ ಮಂಗಳೂರಿನ ಕುಳೂರಿನ ಸೇತುವೆ ಮೇಲೆ ಮುಮ್ತಾಜ್​ರ ಕಾರು ಪತ್ತೆಯಾಗಿತ್ತು. ಬ್ರಿಡ್ಜ್ ಮೇಲೆ KA19 MG0004 ಸಂಖ್ಯೆಯ BMW X5 ಕಾರು ಪತ್ತೆಯಾಗಿತ್ತು. ಈಜು ತಜ್ಞ ಈಶ್ವರ್ ಮಲ್ಪೆ ಅವರು ಮುಮ್ತಾಜ್​ ಶೋಧ ಕಾರ್ಯಾಚರಣೆ ನಡೆಸಿದ್ದರು. ಫಲ್ಗುಣಿ ನದಿಯಲ್ಲಿ ಸ್ಕೂಬಾ ಡೈವ್ ಮಾಡಿ ಶೋಧ ನಡೆಸ್ತಿದ್ದರು. ಸದ್ಯ ಈಗ ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ.

ಸಹೋದರನನ್ನ ನೆನೆದು ಮಾಜಿ ಶಾಸಕ ಮೊಯಿದ್ದೀನ್ ಬಾವ ಕಣ್ಣೀರು‌ ಹಾಕಿದ್ದಾರೆ. ಬ್ಲಾಕ್ ಮೇಲ್ ನಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ನನ್ನ ಸಹೋದರ ಶೈಕ್ಷಣಿಕವಾಗಿ, ಧಾರ್ಮಿಕ ಕಾರ್ಯಗಳಿಂದ ಹೆಸರು ಗಳಿಸಿದ್ದ. ಆತನ ಪ್ರಚಾರವನ್ನ ಸಹಿಸದ ಕೆಲವು ಶಕ್ತಿಗಳು ಕುತಂತ್ರ ಮಾಡಿದ್ದಾರೆ. ಈ ಕಾರಣದಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ಆತನ ಫೋನ್ ಹಾಗೂ ವಾಟ್ಸ್ ಅಪ್ ಪರಿಶೀಲನೆ ಮಾಡುತ್ತಿದ್ದಾರೆ. ನನ್ನ ಸಹೋದರನ ಈ ಸ್ಥಿತಿಗೆ ಕಾರಣರಾದವರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಕಣ್ಣೀರು ಹಾಕಿದ್ದಾರೆ.

ಘಟನೆ ಹಿನ್ನೆಲೆ

ಮೃತ ಮುಮ್ತಾಜ್ ಅಲಿ ಅವರು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಮೊಯಿದ್ದೀನ್ ಬಾವ ಮತ್ತು ಮಾಜಿ MLC ಆಗಿರುವ ಬಿ.ಎಮ್.ಫಾರೂಕ್ ಅವರ ತಮ್ಮ. ಇವರು ಭಾನುವಾರ ಬೆಳ್ಳಂಬೆಳಗ್ಗೆ ನಾಪತ್ತೆಯಾಗಿದ್ದರು. ಕೂಳೂರು ಸೇತುವೆ ಮೇಲೆ ತಮ್ಮ ಐಷಾರಾಮಿ BMW ಕಾರು ನಿಲ್ಲಿಸಿ ನಿಗೂಡವಾಗಿ ನಾಪತ್ತೆಯಾಗಿದ್ದರು. ಹೀಗಾಗಿ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಕೋಸ್ಟ್ ಗಾರ್ಡ್, ಎಫ್,ಎಸ್ ಡಿಆರ್ ಎಫ್, ಅಗ್ನಿಶಾಮಕ ದಳ, ಈಶ್ವರ್ ಮಲ್ಪೆ ಸೇರಿದಂತೆ ಮುಳುಗು ತಜ್ಞರು ಶೋಧ ಕಾರ್ಯ ನಡೆಸಿದ್ದರು. ಸದ್ಯ ಈಗ ಮೃತದೇಹ ಪತ್ತೆಯಾಗಿದೆ.

ಇದನ್ನೂ ಓದಿ: ಮಾಜಿ ಶಾಸಕ ಮೊಯಿದ್ದೀನ್ ಬಾವ ಸೋದರ ನಾಪತ್ತೆ ಕೇಸ್​: ಮಹಿಳೆ ಸೇರಿ 6 ಮಂದಿ ವಿರುದ್ಧ ಎಫ್​ಐಆರ್

ಇನ್ನು ಈ ಕೇಸ್ ಹಿಂದೆ ಮಹಿಳೆಯ ಕೈವಾಡ ಇದೆ ಎಂಬ ವಿಚಾರ ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಸುರತ್ಕಲ್ ಕೃಷ್ಣಾಪುರ ನಿವಾಸಿ ಮಹಿಳೆ ಕಳೆದ ಒಂದು ವರ್ಷದಿಂದ ಮುಮ್ತಾಜ್ ಅಲಿ ಗೆ ಬ್ಲಾಕ್ ಮೇಲ್ ಮಾಡುತ್ತಿದ್ದಳು ಎನ್ನಲಾಗಿದೆ. ಮುಮ್ತಾಜ್ ಅಲಿ ಖಾಸಗಿ ವಿಡಿಯೋ ಇಟ್ಟುಕೊಂಡು ಮದುವೆ ಆಗುವಂತೆ ಬ್ಲಾಕ್ ಮೇಲ್ ಮಾಡುತ್ತಿದ್ದರು. ಈ ವಿಚಾರ ಮನೆಯವರಿಗೆ ಗೊತ್ತಾಗಿ ನಿತ್ಯ ಕಿರಿಕಿರಿಯಾಗುತ್ತಿತ್ತು. ಇನ್ನು ಇತ್ತೀಚೆಗೆ ಮಸೀದಿ ಕಮಿಟಿ ವಿಚಾರದಲ್ಲಿ ಕಾಟಿಪಳ್ಳದ ಮೂವರು ಯುವಕರು ಆ ಮಹಿಳೆಗೆ ಸಾಥ್ ನೀಡಿ ಹೆಸರು ಕೆಡಿಸಲು ತಯಾರಿ ನಡೆಸಿದ್ದರು. ಇದ್ರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿತ್ತು. ಸದ್ಯ ಘಟನೆ ಸಂಬಂಧ 6 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:08 am, Mon, 7 October 24