ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಇನ್ನೆರಡು ತಿಂಗಳಲ್ಲಿ ಸಂಚಾರಕ್ಕೆ ಮುಕ್ತ-NHAI

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನಡುವಿನ ಬಿ.ಸಿ. ರಸ್ತೆ -ಅಡ್ಡಹೊಳೆ ಬಳಿಯ 63 ಕಿ.ಮೀ ಉದ್ದದ ಚತುಷ್ಪಥದ ಯೋಜನೆಯಲ್ಲಿ ಸುಮಾರು 20 ಕಿ.ಮೀ ಕಾಮಗಾರಿ ಇನ್ನೆರಡು ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಇನ್ನೆರಡು ತಿಂಗಳಲ್ಲಿ ಸಂಚಾರಕ್ಕೆ ಮುಕ್ತ-NHAI
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75
Follow us
ಆಯೇಷಾ ಬಾನು
|

Updated on:Mar 24, 2023 | 2:24 PM

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನಡುವಿನ ಬಿ.ಸಿ. ರಸ್ತೆ -ಅಡ್ಡಹೊಳೆ ಬಳಿಯ 63 ಕಿ.ಮೀ ಉದ್ದದ ಚತುಷ್ಪಥದ ಯೋಜನೆಯಲ್ಲಿ ಸುಮಾರು 20 ಕಿ.ಮೀ ಕಾಮಗಾರಿ ಇನ್ನೆರಡು ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಅಧಿಕಾರಿ ತಿಳಿಸಿದ್ದಾರೆ. ಈಗಾಗಲೇ 14 ಕಿ.ಮೀ ಚತುಷ್ಪಥ ಕಾಮಗಾರಿ ಪೂರ್ಣಗೊಂಡಿದ್ದು, ಮಳೆಗಾಲದ ವೇಳೆಗೆ ಇನ್ನೂ 6 ಕಿ.ಮೀ ಸಿದ್ಧಗೊಳ್ಳಲಿದೆ ಎಂದು ಯೋಜನಾ ನಿರ್ದೇಶಕರು ತಿಳಿಸಿದ್ದಾರೆ.

ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಮಂಗಳೂರು ಯೋಜನಾ ಕಚೇರಿಯ ಎನ್‌ಎಚ್‌ಎಐ ಯೋಜನಾ ನಿರ್ದೇಶಕ ಲಿಂಗೇಗೌಡ ಮಾತನಾಡಿ, 14 ಕಿಮೀ ಚತುಷ್ಪಥ ಕಾಮಗಾರಿ ಮುಗಿದಿದೆ. ಮಳೆಗಾಲದ ವೇಳೆಗೆ ಇನ್ನೂ 6 ಕಿ.ಮೀ ಸಿದ್ಧಗೊಳ್ಳುವ ನಿರೀಕ್ಷೆ ಇದೆ. ಮಳೆಗಾಲದಲ್ಲೂ ಕಾಮಗಾರಿ ಮುಂದುವರಿಯುತ್ತಿತ್ತು. ಕಲ್ಲಡ್ಕ ಮೇಲ್ಸೇತುವೆಯ ಶೇ.30ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, 2024ರ ಜನವರಿ ವೇಳೆಗೆ ಮೇಲ್ಸೇತುವೆ ಸಿದ್ಧಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು.

ಇದನ್ನೂ ಓದಿ: ಮಂಗಳೂರು-ಬೆಂಗಳೂರು ಶಿರಾಡಿ ಸುರಂಗ ಮಾರ್ಗಕ್ಕೆ ಯೋಜನೆ ಸಿದ್ಧ: ನಿತಿನ್ ಗಡ್ಕರಿ

ಬಿಕರ್ನಕಟ್ಟೆ (ಮಂಗಳೂರು)-ಸಾಣೂರು (ಕಾರ್ಕಳ) ಚತುಷ್ಪಥ ಯೋಜನೆ ಕುರಿತು ಉಲ್ಲೇಖಿಸಿದ ಅವರು, ಯೋಜನೆಗೆ ಅಗತ್ಯವಿರುವ ಸುಮಾರು 62.5 ಎಕರೆ ಭೂಮಿ ವ್ಯಾಜ್ಯದಲ್ಲಿದೆ ಎಂದರು. 14 ಗ್ರಾಮಗಳಿಗೆ ಸಂಬಂಧಿಸಿದಂತೆ 15 ರಿಟ್ ಅರ್ಜಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಹೀಗಾಗಿ ಈ ಯೋಜನೆಯ ಪ್ರಗತಿಯಲ್ಲಿ ವಿಳಂಬವಾಗಿದೆ. 6.5 ಕಿ.ಮೀ ರಸ್ತೆ ಸಿದ್ಧವಾಗಿದೆ. 45 ಕಿಮೀ ಯೋಜನೆಯ ಪ್ರಗತಿಯು ಕಳೆದ ಐದು ತಿಂಗಳಲ್ಲಿ 12% ರಷ್ಟಿದೆ ಎಂದು ಮಾಹಿತಿ ನೀಡಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:24 pm, Fri, 24 March 23

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್