Mangaluru News: ಲಾಡ್ಜ್​​ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ.

Mangaluru News: ಲಾಡ್ಜ್​​ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Updated on: Mar 31, 2023 | 10:13 AM

ಮುಖ್ಯಾಂಶಗಳು

  • ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
  • ಕೆ.ಎಸ್.ರಾವ್ ರಸ್ತೆಯ ಕರುಣಾ ಲಾಡ್ಜ್​​ನಲ್ಲಿ ನಡೆದ ಘಟನೆ
  • ಮಂಗಳೂರಿನ ಕೆಎಸ್ ರಾವ್ ರೋಡ್ ಬಳಿ ಇರುವ ಕರುಣಾ ಲಾಡ್ಜ್

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ದಾರುಣ ಘಟನೆ ಇಂದು (ಮಾರ್ಚ್ 31)  ಮಂಗಳೂರಿನ (Mangaluru) ಕೆ.ಎಸ್.ರಾವ್ ರಸ್ತೆಯ ಕರುಣಾ ಲಾಡ್ಜ್​​ನಲ್ಲಿ ನಡೆದಿದೆ. ದಂಪತಿ ಸೇರಿದಂತೆ ಇಬ್ಬರು ಹೆಣ್ಣು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಿಜಯನಗರ ನಿವಾಸಿಗಳು ಎಂದು ತಿಳಿದುಬಂದಿದೆ. ದೇವೇಂದ್ರಪ್ಪ(48), ನಿರ್ಮಲಾ(48), ಚೈತ್ರಾ(9), ಚೈತನ್ಯ(9) ಮೃತರು. ಪತ್ನಿ, ಮಕ್ಕಳಿಗೆ ವಿಷಕುಡಿಸಿದ ಬಳಿ ದೇವೇಂದ್ರಪ್ಪ ನೇಣಿಗೆ ಶರಣಾಗಿದ್ದಾನೆ.  ಮಾರ್ಚ್​ 27ರಂದು ರೂಮ್​ ಬುಕ್ ಮಾಡಿದ್ದ ಕುಟುಂಬ, ನಿನ್ನೆ (ಮಾರ್ಚ್ 30) ಸಂಜೆ ರೂಮ್​ ಚೆಕ್ ಔಟ್ ಮಾಡಬೇಕಾಗಿತ್ತು. ಆದರೆ ಇಂದು ಬೆಳಗ್ಗೆ ಆದರೂ ಬಾಗಿಲು ತೆರೆಯದ ಕಾರಣ ಅನುಮಾನಗೊಂಡು ಸಿಬ್ಬಂದಿ ಪರಿಶೀಲಿಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.  ಸ್ಥಳಕ್ಕೆ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಭೇಟಿ, ಪರಿಶೀಲನೆ ನಡೆಸಿದ್ದು, ಡೆತ್​ನೋಟ್​​ ಪತ್ತೆಯಾಗಿದೆ. ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ ನೋಟ್ ನಲ್ಲಿ ಉಲ್ಲೇಖವಾಗಿದೆ.

ಮಂಡ್ಯದಲ್ಲಿ ದಂಪತಿ ಆತ್ಮಹತ್ಯೆಗೆ ಶರಣು

ಮಂಡ್ಯ: ಕೌಟುಂಬಿಕ ಕಲಹಕ್ಕೆ ಮನನೊಂದು ದಂಪತಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಪುರುಷೋತ್ತಮ (45), ವಿದ್ಯಾ(32) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ದಂಪತಿಗಳ ನಡುವಿನ ಕಲಹದಿಂದ ಬೇಸತ್ತು ಪುರುಷೋತ್ತಮ ಹಾಗೂ ವಿದ್ಯಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಪತಿ ಕೆಲಸಕ್ಕೆ ತೆರಳಿದಾಗ ಪತ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರೆ, ವಿಷಯ ತಿಳಿದು ಮನೆಗೆ ಬಂದ ಪತಿ ಮನೆ ಪಕ್ಕದ ಜಮೀನಿಗೆ ತೆರಳಿ ನೇಣಿಗೆ ಕೊರಳೊಡ್ಡಿದ್ದಾರೆ. ಮೃತ ಪುರುಷೋತ್ತಮ್ ಮೈಸೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದರು.

ಮೃತ ದಂಪತಿಗೆ 7 ಹಾಗೂ 5 ವರ್ಷದ ಇಬ್ಬರು ಮಕ್ಕಳಿದ್ದಾರೆ. ಇದೀಗ ತಂದೆ-ತಾಯಿ ಕಳೆದುಕೊಂಡು ಮಕ್ಕಳು ಅನಾಥರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನ ನಡೆಸಿದ್ದಾರೆ. ಮೃತ ದೇಹಗಳನ್ನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:08 am, Fri, 31 March 23

ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Loading...
Unable to load recommendations.
Follow Us