ಮಂಗಳೂರು: ಸೌಜನ್ಯ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ವಂಚಿಸಿದ ಮಹಿಳೆ

ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ಎಂಬುವರು "ಸೌಜನ್ಯ ಹೆಲ್ಪ್‌ಲೈನ್" ಎಂಬ ಹೆಸರಿನಲ್ಲಿ ವಂಚಿಸಿದ್ದಾರೆ. ವಂಚನೆ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜೇಶ್ ಅವರ ಬಂಟ್ವಾಳ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಬಗೆಹರಿಸುವುದಾಗಿ ಹೇಳಿ ಹಣ ಪಡೆದಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಂಗಳೂರು: ಸೌಜನ್ಯ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ವಂಚಿಸಿದ ಮಹಿಳೆ
ಆರೋಪಿ ಸಂಧ್ಯಾ ಪವಿತ್ರ ನಾಗರಾಜ್
Edited By: ವಿವೇಕ ಬಿರಾದಾರ

Updated on: Jun 21, 2025 | 4:00 PM

ಮಂಗಳೂರು, ಜೂನ್​ 21: ಸೌಜನ್ಯ (Soujanya) ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ಲಕ್ಷ ಲಕ್ಷ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ (Bengaluru) ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್​ನ ಮಾಲಾಡಿ ನಿವಾಸಿ ಕೆ.ರಾಜೇಶ್ ಎಂಬುವರು ನೀಡಿದ ದೂರಿನ‌ ಅನ್ವಯ ಪ್ರಕರಣ ದಾಖಲಾಗಿದೆ.

ದೂರುದಾರ ರಾಜೇಶ್ ವೃತ್ತಿಯಲ್ಲಿ ಗಾಯಕರಾಗಿದ್ದು, ಅರವಿಂದ್ ವಿವೇಕ್​ ಎಂಬ ಫೇಸ್​ಬುಕ್​ ಪೇಜ್​​ನಲ್ಲಿ ರಾಜೇಶ್ ಲೈವ್ ಸಂಗೀತ ಕಾರ್ಯಕ್ರಮ ನೀಡುತ್ತಿದ್ದರು. ರಾಜೇಶ್​ ಅವರಿಗೆ ಸಂಧ್ಯಾ 2024ರಲ್ಲಿ ಫೇಸ್​ಬುಕ್​ ಮೂಲಕ ಪರಿಚಯವಾಗಿದ್ದಾಳೆ. ಸೌಜನ್ಯ ಹೆಲ್ಪ್​​ಲೈನ್​ ಹೆಸರಿನಲ್ಲಿ ವಂಚನೆಗೊಳಗಾದವರಿಗೆ ನೆರವು ನೆರವಾಗುತ್ತಿದ್ದೇನೆ. ಅಮಾಯಕರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಬಗೆಹರಿಸಿದ್ದೇನೆ ಅಂತ ರಾಜೇಶ್​ ಅವರಿಗೆ ನಂಬಿಸಿದ್ದಾಳೆ.

ಆಗ, ರಾಜೇಶ್​ ಅವರು ಬಂಟ್ವಾಳ‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಬಗ್ಗೆ ಸಂಧ್ಯಾ ಪವಿತ್ರ ನಾಗರಾಜ್​ಗೆ ತಿಳಿಸಿದ್ದಾರೆ. ಆಗ, ಸಂಧ್ಯಾ ಹೈಕೋರ್ಟ್​ನಲ್ಲಿ ಕೇಸ್ ಬಗೆಹರಿಸುತ್ತೇನೆ, ಆದರೆ, ಸ್ವಲ್ಪ ಖರ್ಚು ಇದೆ ಎಂದಿದ್ದಾಳೆ.
ನಂತರ, ರಾಜೇಶ್​ ಅವರಿಂದ ಸಂಧ್ಯಾ ಹಂತ ಹಂತವಾಗಿ 3.20 ಲಕ್ಷ ರೂ. ಪಡೆದಿದ್ದಾಳೆ. ಹಣ ನೀಡಿದ ನಂತರವೂ ಸಮಸ್ಯೆ ಬಗೆಹರಿಯದ ಕಾರಣ ರಾಜೇಶ್​ ಅವರು ಸಂಧ್ಯಾಗೆ ಪ್ರಶ್ನಸಿದ್ದಾರೆ.

ಇದನ್ನೂ ಓದಿ
ಭಾರತದ ಅತಿದೊಡ್ಡ ಭೂಗತ ಎಲ್​ಪಿಜಿ ಸಂಗ್ರಹಾಗಾರ ಮಂಗಳೂರಿನಲ್ಲಿ ಸಿದ್ಧ
ಮಂಗಳೂರು: ಹೆಡ್ ಕಾನ್ಸ್‌ಟೇಬಲ್ ರಶೀದ್ ಸೇರಿ 56 ಪೊಲೀಸ್ ಸಿಬ್ಬಂದಿ ವರ್ಗಾವಣೆ
ಇಸ್ರೇಲ್​ನಲ್ಲಿ ಸಿಲುಕಿದ ಕನ್ನಡಿಗರು ಬಂಕರ್​ನಲ್ಲಿ ಸೇಫ್
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ

ಇದನ್ನೂ ಓದಿ: ವಿನಾ ಕಾರಣ ಆರ್​ಎಸ್​ಎಸ್ ಮುಖಂಡ, ಹಿಂದೂಗಳ ಮನೆಗೆ ಮಧ್ಯರಾತ್ರಿ ರೇಡ್: ದಕ್ಷಿಣ ಕನ್ನಡ ಎಸ್ಪಿಗೆ ಬಿಸಿ ತುಪ್ಪವಾದ ಪ್ರಕರಣ

ಆಗ, ಸಂಧ್ಯಾ ಇನ್ನೂ ಹೆಚ್ಚಿನ ಹಣ ನೀಡುವಂತೆ ಸಂಧ್ಯಾ ಹೇಳಿದ್ದಾಳೆ. ಸಂಧ್ಯಾ ಮಾತು ಕೇಳಿ ಸಂಶಯಗೊಂಡ ರಾಜೇಶ್​ ಅವರು ಕೋರ್ಟ್​ಗೆ ಸಲ್ಲಿಸಿರುವ ದಾಖಲೆಗಳ ಬಗ್ಗೆ ಕೇಳಿದ್ದಾರೆ. ಸಂಧ್ಯಾ ಕೈಕಾಲು ಮುರಿಸುವುದಾಗಿ ಬೆದರಿಕೆ ಹಾಕಿದ್ದಾಳೆ. ಬಳಿಕ ರಾಜೇಶ್​ ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ದಾಖಸಿದ್ದಾರೆ. ಬಿಎನ್​ಎಸ್​ ಕಾಯ್ದೆ 318(4) ಮತ್ತು 351(2) ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:53 pm, Sat, 21 June 25

ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Loading...
Unable to load recommendations.
Follow Us