AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ ಹಾಕಿ ವಂಚಿಸುತ್ತಿದ್ದ ಮನೀಶ್ ಎಂಬ ವ್ಯಕ್ತಿಯ ಕಪಟ ಪ್ರೇಮದಾಟ ಬಯಲಾಗಿದೆ. ಮದುವೆ ಮತ್ತು ಪ್ರೀತಿ ಹೆಸರಿನಲ್ಲಿ ಯುವತಿಯರಿಂದ ಹಣ ಪಡೆದು, ಬ್ರೈನ್ ಟ್ಯೂಮರ್ ನಾಟಕವಾಡಿದ್ದ ಈತನ ವಿರುದ್ಧ ಪತ್ನಿಯೇ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಇಂತಹ ವಂಚಕನ ಬಗ್ಗೆ ಎಚ್ಚರದಿಂದಿರಿ ಎಂದು ಮನವಿ ಮಾಡಿದ್ದಾರೆ.

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ
ಯುವತಿಯರ ಜೊತೆ ಆರೋಪಿ ಮನೀಶ್Image Credit source: Tv9 Kannada
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Feb 15, 2026 | 10:59 AM

Share

ಮಂಗಳೂರು, ಫೆಬ್ರವರಿ 15: ಮ್ಯಾಟ್ರಿಮೋನಿಯಲ್ಲಿ ಪರಿಚಯ ಮಾಡಿಕೊಂಡು ಮದುವೆಯಾಗಿ ನಂಬಿಸಿ ಹಣ ಪಡೆದು ವ್ಯಕ್ತಿಯೋರ್ವ ವಂಚಿಸಿರುವ ಘಟನೆ ಮಾಸುವ ಮುನ್ನವೇ ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ ಹಾಕುತ್ತಿದ್ದ ಮತ್ತೊಬ್ಬನ ಕಹಾನಿ ಬಯಲಾಗಿದೆ. ಗಂಡನ ಪ್ರೇಮ, ಪ್ರೀತಿ, ಪ್ರಣಯದಾಟವನ್ನು ಸ್ವತಃ ಪತ್ನಿಯೇ ಬಟಾ ಬಯಲು ಮಾಡಿದ್ದು, ಬಜೆಪೆ ನಿವಾಸಿ ಮನೀಶ್ ವಿರುದ್ಧ ಪತ್ನಿ ಪ್ರೀತಿ ಮಂಗಳೂರು ಮಹಿಳಾ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ.

ಸಂತ್ರಸ್ತೆ ಪ್ರೀತಿಗೆ ಫೇಸ್​​ಬುಕ್​​ನಲ್ಲಿ ಪರಿಚಯವಾಗಿದ್ದ ಮನೀಶ್​​, ಬ್ಲ್ಯಾಕ್​​ಮೇಲ್​​ ಮಾಡಿ ಆಕೆಯನ್ನು ಮದುವೆ ಆಗಿದ್ದ ಎಂದು ದೂರಲಾಗಿದೆ. ಮದುವೆಗೆ ಮೂರು ದಿನ ಇರುವಾಗ ಹಣ ಇಲ್ಲ ಎಂದು ಈತ ಆತ್ಮಹತ್ಯೆ ನಾಟಕವಾಡಿದ್ದ. ಹೀಗಾಗಿ ಮದುವೆಯ ಎಲ್ಲ ಖರ್ಚನ್ನು ತಾವೇ ನೋಡಿಕೊಂಡು ಪ್ರೀತಿ ಪೋಷಕರು ವಿವಾಹ ಕಾರ್ಯ ನಡೆಸಿದ್ದರು. ಮದುವೆಯಾದ ಬಳಿಕ ಎರಡು ಲಕ್ಷ ಹಣ ಕೊಟ್ಟು ವಿದೇಶದಲ್ಲಿ ಮನೀಶ್​​ಗೆ ಕೆಲಸ ಕೊಡಿಸಲು ಕೂಡ ಪ್ರೀತಿ ಸಹಾಯ ಮಾಡಿದ್ದರು. ಆದ್ರೆ ದುಬೈಗೆ ಹೋದ ಈತ ಬಹರೇನ್​​ನಲ್ಲಿರೋ ಮಹಿಳೆ ಜೊತೆ ಲವ್ವಿಡವ್ವಿ ಶುರುಮಾಡಿದ್ದಾನೆ. ವಿಚಾರ ತಿಳಿದು ಈತನ ಇತಿಹಾಸವನ್ನು ಪ್ರೀತಿ ಕೆದಕಿದ್ದು, ಈ ವೇಳೆ ಮನೀಶ್​​ನ ನಿಜರೂಪ ಬಯಲಾಗಿದೆ.

ಇದನ್ನೂ ಓದಿ: ಸೊಸೆ ಮೇಲೆ ಮಾವನಿಂದಲೇ ಲೈಂಗಿಕ ದೌರ್ಜನ್ಯ; ಆಸೆ ಈಡೇರಿಸು ಎಂದು ಪೀಡನೆ

ಮದುವೆಗೂ ಮುನ್ನ ಹಲವರ ಜೊತೆ ಲವ್ ಅಫೇರ್​​

ಪ್ರೀತಿ ಜೊತೆ ಮದುವೆಗೂ ಮುನ್ನ ಹಲವು ಯುವತಿಯರ ಜೊತೆ ಲವ್ ಅಫೇರ್​​ ಹೊಂದಿದ್ದ ಮನೀಶ್​​, ಅವರ ಬಳಿ ಕೂಡ ಹಣ ಪಡೆದು ಮೋಸ ಮಾಡಿದ್ದ. ಈ ವಿಚಾರವನ್ನು ಆ ಯುವತಿಯರೇ ಪ್ರೀತಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಹಣ ವಾಪಾಸ್ ಕೇಳಿದ್ರೆ ಎಲ್ಲ ಯುವತಿಯರ ಬಳಿ ಒಂದೇ ನಾಟಕ ಆಡಿದ್ದ ಆರೋಪಿ, ತನಗೆ ಬ್ರೈನ್​ ಟ್ಯೂಮರ್ ಇದೆ ಎಂದು ಹೇಳಿ ಹಣ ಕೊಡದೇ ಲವ್ ಬ್ರೇಕ್ ಅಪ್ ಮಾಡಿಕೊಂಡಿದ್ದ. ಟಿಕ್ ಟಾಕ್ ಮಾಡಿ ಯುವತಿಯರಿಗೆ ಗಾಳ ಹಾಕುವ ಮನೀಶ್ ನಡೆತೆಯಿಂದ ಬೇಸತ್ತ ಪತ್ನಿ ಪ್ರೀತಿ, ಇಂತಹ ಗಂಡ ಬೇಡ. ಈತನ ನಂಬಿ ಮತ್ತೆ ಯಾರು ಮೋಸ ಹೋಗಬಾರದು ಎಂದು ಅಲವತ್ತುಕೊಂಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ