ಸ್ವತಂತ್ರ ಹೋರಾಟಗಾರ ವೆಂಕಣ್ಣ ನಾಯಕ ವಿಧಿವಶ
ಸ್ವಾತಂತ್ರ್ಯ ಹೋರಾಟಗಾರ ವೆಂಕಣ್ಣ ನಾಯಕ್ ಅವರು ಅಂಕೋಲಾ ತಾಲೂಕಿನ ಸೂರ್ವೆ ಗ್ರಾಮದ ಸ್ವಗೃಹದಲ್ಲಿ (102) ನಿಧನರಾಗಿದ್ದಾರೆ.
ಉತ್ತರ ಕನ್ನಡ: ಸ್ವಾತಂತ್ರ್ಯ ಹೋರಾಟಗಾರ ವೆಂಕಣ್ಣ ನಾಯಕ್ ಅವರು ಅಂಕೋಲಾ ತಾಲೂಕಿನ ಸೂರ್ವೆ ಗ್ರಾಮದ ಸ್ವಗೃಹದಲ್ಲಿ (102) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಸಾವನ್ನಪ್ಪಿದ್ದಾರೆ.ವೆಂಕಣ್ಣ ನಾಯಕ್ ಅವರು ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ವೆಂಕಣ್ಣ ನಾಯಕ್ ಅವರು ಉಪ್ಪಿನ ಸತ್ಯಾಗ್ರಹ, ಕರ ಬಂಧಿ ಹೋರಾಟದಲ್ಲಿ ಭಾಗವಹಿಸಿದ್ದರು. ವೆಂಕಣ್ಣ ನಾಯಕ ಅವರನ್ನು ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ, ಜನಪ್ರತಿನಿಧಿಗಳು ಸನ್ಮಾನಿಸಿದ್ದರು.