AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿಗೆ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್, ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧವೂ ಕ್ರಮ: ಪರಮೇಶ್ವರ್

ಸುಹಾಸ್ ಶೆಟ್ಟಿ ಕೊಲೆಯ ನಂತರ ಮಂಗಳೂರಿನಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯನ್ನು ಗಮನಿಸಿ, ಗೃಹ ಸಚಿವರು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಪ್ರತ್ಯೇಕವಾದ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ರಚಿಸುವ ಘೋಷಣೆ ಮಾಡಿದರು. ಜತೆಗೆ, ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಕರಾವಳಿಗೆ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್, ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧವೂ ಕ್ರಮ: ಪರಮೇಶ್ವರ್
ಗೃಹ ಸಚಿವ ಡಾ. ಜಿ ಪರಮೇಶ್ವರ್
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: May 03, 2025 | 1:07 PM

Share

ಮಂಗಳೂರು, ಮೇ 3: ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ (Suhas Shettyಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಹೆಚ್ಚಾಗಿದ್ದು, ಗೃಹ ಸಚಿವ ಡಾ. ಜಿ ಪರಮೇಶ್ವರ್ (G Parameshwara) ಶನಿವಾರ ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಪೊಲೀಸ್ ಅಧಿಕಾರಿಗಳ ಜೊತೆ ಮಂಗಳೂರಿನ ಸರ್ಕ್ಯೂಟ್ ಹೌಸ್​ನಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗೆ ಸೀಮಿತವಾಗಿ ಪ್ರತ್ಯೇಕವಾಗಿ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಆರಂಭಿಸಲಾಗುವುದು ಎಂದರು.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಪಟ್ಟ 8 ಮಂದಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಆ ಕುರಿತು ಹೆಚ್ಚಿನ ಮಾಹಿತಿಯನ್ನು ಪೊಲೀಸರೇ ನೀಡಲಿದ್ದಾರೆ. ಕರಾವಳಿ ಜಿಲ್ಲೆಗಳಲ್ಲಿ ಕೋಮುಗಲಭೆ ನಡೆಯುವ ನಿಟ್ಟಿನಲ್ಲಿ ಐಜಿ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಮಂದಿರ ಎರಡು ವಾರಗಳಲ್ಲಿ ಆರಂಭವಾಗಲಿದೆ. ಈ ಟಾಸ್ಕ್ ಫೋರ್ಸ್ ಪೊಲೀಸರ ಜೊತೆಗೂಡಿ ಕಾರ್ಯನಿರ್ವಹಿಸಲಿದೆ ಎಂದು ಪರಮೇಶ್ವರ ತಿಳಿಸಿದರು.

ಸುಹಾಸ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾದ 8 ಮಂದಿಯ ಪೈಕಿ ಚಿಕ್ಕಮಗಳೂರಿನ ಇಬ್ಬರು ಹಿಂದೂಗಳು ಇದ್ದಾರೆ ಎಂಬ ವದಂತಿ ಇದ್ದು, ಈ ಬಗ್ಗೆ ಪರಮೇಶ್ವರ ಯಾವುದೇ ಹೇಳಿಕೆ ನೀಡಿಲ್ಲ.

ಇದನ್ನೂ ಓದಿ
Image
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
Image
ಸುಹಾಸ್​ ಶೆಟ್ಟಿ ಕೊಲೆ: ಮಂಗಳೂರು ಸುತ್ತಮುತ್ತ 3 ಮಂದಿಗೆ ಚಾಕು ಇರಿತ
Image
ಸುಹಾಸ್ ಹತ್ಯೆ ಬೆನ್ನಲ್ಲೇ ಉಡುಪಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನ
Image
ಮಂಗಳೂರು: ಸುಹಾಸ್ ಹತ್ಯೆ ಬೆನ್ನಲ್ಲೇ 'ಫಿನೀಶ್' ಎಂಬ ಪೋಸ್ಟ್ ಬಹಿರಂಗ!

ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ

ಕೋಮು ಗಲಭೆಗೆ ಕಾರಣವಾಗುವ ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕೂಡ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪರಮೇಶ್ವರ ಭರವಸೆ ನೀಡಿದರು. ಕೇರಳ ಮೂಲದ ಅಶ್ರಫ್ ಹತ್ಯೆ ಪ್ರಕರಣದಲ್ಲಿ ಈಗಾಗಲೇ 21 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿದೆ. ಯಾವುದೇ ಸಮುದಾಯದವರು ಆಗಲೀ, ಕಾನೂನು ಉಲ್ಲಂಘನೆ ಮಾಡಲು ಬಿಡುವುದಿಲ್ಲ. ಇನ್ನು ಮುಂದೆ ಇಂತಹ ಘಟನೆಗಳು ಜಿಲ್ಲೆಯಲ್ಲಿ ನಡೆಯಬಾರದು. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡಲು ಬಿಡುವುದಿಲ್ಲ ಎಂದು ಪರಮೇಶ್ವರ್ ಹೇಳಿದರು.

ಇದನ್ನೂ ಓದಿ: ಸುಹಾಸ್ ಶೆಟ್ಟಿ ಕೊಲೆ ಕೇಸ್‌: 8 ಜನ ಶಂಕಿತರು ವಶಕ್ಕೆ, ಮಂಗಳೂರು ಪೊಲೀಸರಿಂದ ತೀವ್ರ ವಿಚಾರಣೆ

ಪರಮೇಶ್ವರ್ ನೇತೃತ್ವದ ಸಭೆಯಲ್ಲಿ ಗದ್ದಲ

ಮಂಗಳೂರಿನ ಸರ್ಕ್ಯೂಟ್ ಹೌಸ್​ನಲ್ಲಿ ನಡೆದ ಸಭೆಯ ವೇಳೆ ಮುಸ್ಲಿಂ ಮುಖಂಡರು ಗದ್ದಲ ಸೃಷ್ಟಿಸಿದರು. ಗೃಹ ಸಚಿವರ ಜೊತೆ ಚರ್ಚಿಸಲು ತೆರಳಿದ್ದ ಕಾಂಗ್ರೆಸ್ ಪಕ್ಷದ ಮುಸ್ಲಿಂ ಮುಖಂಡರು ಟೇಬಲ್ ಬಡೆದು ಆಕ್ರೋಶ ವ್ಯಕ್ತಪಡಿಸಿದರು. ನಂತರ ಅಶ್ರಫ್ ಕೊಲೆ ಬಗ್ಗೆ ಸ್ಥಳೀಯರಿಂದ ಪರಮೇಶ್ವರ ಮಾಹಿತಿ ಪಡೆದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ