ವಿವಾದದ ನಡುವೆಯೂ ಮಂಗಳೂರು ವಿವಿಯ ಮಂಗಳಾ ಆಡಿಟೋರಿಯಂನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಸಾಕಷ್ಟು ವಿವಾದಗಳ ನಡುವೆಯೂ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದೆ. ವಿಶ್ವವಿದ್ಯಾಲಯದ ಉಪಕುಲಪತಿ ಜಯರಾಜ್ ಅಮೀನ್ ಅವರು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಅರ್ಚಕರ ಸಮ್ಮುಖದಲ್ಲಿ ಸಕಲ ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಿದರು.

ವಿವಾದದ ನಡುವೆಯೂ ಮಂಗಳೂರು ವಿವಿಯ ಮಂಗಳಾ ಆಡಿಟೋರಿಯಂನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ
ಮಂಗಳೂರು ವಿವಿಯಲ್ಲಿ ಗಣೇಶ ಪ್ರತಿಷ್ಠಾಪನೆ
Follow us
| Edited By: ವಿವೇಕ ಬಿರಾದಾರ

Updated on:Sep 19, 2023 | 1:08 PM

ಮಂಗಳೂರು ಸೆ.19: ವಿವಾದಗಳ ನಡುವೆಯೂ ಕೊನೆಗೂ ಮಂಗಳೂರು ವಿಶ್ವವಿದ್ಯಾಲಯದ (Mangaluru University) ಮಂಗಳಾ ಆಡಿಟೋರಿಯಂನಲ್ಲಿ ಗಣೇಶ (Ganesha) ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ವಿಶ್ವವಿದ್ಯಾಲಯದ ಉಪಕುಲಪತಿ ಜಯರಾಜ್ ಅಮೀನ್ ಅವರು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಅರ್ಚಕರ ಸಮ್ಮುಖದಲ್ಲಿ ಸಕಲ ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಿದರು. ಈ ವೇಳೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿ, ಸ್ಥಳೀಯರು ಭಾಗಿಯಾಗಿದ್ದರು.

ವಿಶ್ವವಿದ್ಯಾಲಯದ ಸುತ್ತಮುತ್ತ ಹಾಗೂ ಮಂಗಳಾ ಆಡಿಟೋರಿಯಂ ಒಳಭಾಗದಲ್ಲಿ ಡಿಸಿಪಿ ಸಿದ್ದಾರ್ಥ್ ಗೋಯಲ್ ನೇತೃತ್ವದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕೆಎಸ್ಆರ್​​ಪಿ ಸೇರಿದಂತೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಗಣೇಶ ಪ್ರತಿಷ್ಠಾಪನೆ ವಿವಾದ

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕಳೆದ 40 ವರ್ಷಗಳಿಂದ ಗಣೇಶೋತ್ಸವ ನಡೆಯುತ್ತಿದೆ. ಕಳೆದ ಎರಡು ವರ್ಷಗಳಿಂದ ವಿವಿಯ ಮಂಗಳಾ ಆಡಿಟೋರಿಯಂನಲ್ಲೇ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತಿದ್ದು, ಆದರೆ ಈ ಬಾರಿ ಇದಕ್ಕೆ ವಿಘ್ನ ಎದುರಾಗಿತ್ತು.

ಇದನ್ನೂ ಓದಿ: ನೂರೆಂಟು ವಿಘ್ನ ಎದುರಿಸಿ ಇಂದು ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ವಿರಾಜಮಾನನಾಗಿ ಕುಳಿತು ಕುಳಿತುಕೊಳ್ಳಲಿರುವ ಗಣೇಶ

ಸಮಾನ ಮನಸ್ಕರ ನಿಯೋಗ, ಕಾಂಗ್ರೆಸ್ ಮುಖಂಡರು, ಎನ್ಎಸ್ ಯುಐ, ಡಿವೈಎಫ್ಐ ಹಾಗೂ ಮಾಜಿ ಸಿಂಡಿಕೇಟ್ ಸದಸ್ಯರು ವಿಶ್ವವಿದ್ಯಾಲಯದ ಉಪಕುಲಪತಿ ಜಯರಾಜ್ ಅಮೀನ್ ಅವರನ್ನು ಭೇಟಿಯಾಗಿ ವಿಶ್ವವಿದ್ಯಾಲಯದಕ್ಕೆ ಅದರದ್ದೇ ಆದ ಗೌರವ ಹಾಗೂ ನಿಯಮ ಇದೆ. ಇಲ್ಲಿ ಧಾರ್ಮಿಕ ಆಚರಣೆ ಸರಿಯಲ್ಲ. ಈ ಹಿಂದೆ ವಿಶ್ವವಿದ್ಯಾಲಯದ ಹಾಸ್ಟೆಲ್​ನಲ್ಲಿ ಗಣೇಶೋತ್ಸವ ಆಚರಣೆ ಆಗುತ್ತಿತ್ತು. ಆದರೆ ಈಗ ಮಂಗಳ ಆಡಿಟೋರಿಯಂನಲ್ಲೇ ಆಗಬೇಕು ಅನ್ನೋದು ಸರಿಯಲ್ಲ ಎಂದು ವಿರೋಧ ವ್ಯಕ್ತಪಡಿಸಿದ್ದರು.

ಗಣಪನನ್ನು ಕೂರಿಸುವ ಜಾಗ, ಖರ್ಚು ವೆಚ್ಚಕ್ಕೆ ಬಳಸುವ ಹಣ ಯಾವುದು ಎಂಬುದೇ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿತ್ತು. ಭಾರಿ ವಿರೋಧದ ನಡುವೆಯೂ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಗಣೇಶೋತ್ಸವಕ್ಕೆ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಹಾಸ್ಟೆಲ್ ವಾರ್ಡನ್​​ಗಳ ಉಸ್ತುವಾರಿಯಲ್ಲಿ ಗಣೇಶೋತ್ಸವ ಆಚರಿಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:19 pm, Tue, 19 September 23

ತಾಜಾ ಸುದ್ದಿ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ