ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್; ಬಾಲಕಿಗೆ ಮತ್ತುಬರಿಸಿ ಅತ್ಯಾಚಾರವೆಸಗಿದ ಆರೋಪಿಗಳು
ಬಾಲಕಿಗೆ ಮತ್ತುಬರಿಸಿ ಅತ್ಯಾಚರವೆಸಗಿರುವ ಆರೋಪ ಸದ್ಯ ಕೇಳಿಬಂದಿದೆ. ಸಂತ್ರಸ್ತ ಅಪ್ರಾಪ್ತೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ದಕ್ಷಿಣ ಕನ್ನಡ: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಅಪ್ರಾಪ್ತೆಯನ್ನು ಅಪಹರಿಸಿದ ಐವರು ಆರೋಪಿಗಳು ಈ ದುಷ್ಕೃತ್ಯ ಎಸಗಿದ್ದಾರೆ. ಬಾಲಕಿಗೆ ಮತ್ತುಬರಿಸಿ ಅತ್ಯಾಚರವೆಸಗಿರುವ ಆರೋಪ ಸದ್ಯ ಕೇಳಿಬಂದಿದೆ. ಸಂತ್ರಸ್ತ ಅಪ್ರಾಪ್ತೆಯನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಬಂಟ್ವಾಳದಿಂದ ಬಾಲಕಿಯನ್ನು ಅಪಹರಿಸಿ ಅಮ್ಟಾಡಿಯ ರೂಂ ಒಂದಕ್ಕೆ ಕರೆದೊಯ್ದು ಆರೋಪಿಗಳು ಅತ್ಯಾಚಾರವೆಸಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಬಂಟ್ವಾಳ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೋಕ್ಸೊ ಕಾಯ್ದೆಯಡಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಿನ್ನೆ (ಅಕ್ಟೋಬರ್ 8) ಬೆಳಗ್ಗೆ 7 ಗಂಟೆ ಸುಮಾರಿಗೆ ಶಾಲೆಗೆ ಹೋಗುತ್ತಿದ್ದ 16 ವರ್ಷ ವಯಸ್ಸಿನ ವಿದ್ಯಾರ್ಥಿನಿ ಅಪಹರಣವಾಗಿತ್ತು.
ಪ್ರಕರಣದ ಎಫ್ಐಆರ್ನ ಸಾರಾಂಶ ಟಿವಿ9 ಡಿಜಿಟಲ್ಗೆ ಲಭ್ಯ ಪರಿಚಿತ ಯುವಕನೊಬ್ಬ ಅಪರಿಚಿತರೊಂದಿಗೆ ಬಂದು ಅಪಹರಣ ಮಾಡಿದ್ದಾನೆ. ಬಿಳಿ ಕಾರಿನಲ್ಲಿ ಬಂದು ಅಪಹರಣ ಮಾಡಿದ್ದಾಗಿ ದೂರು ನೀಡಲಾಗಿದೆ. ಐಪಿಸಿ ಸೆಕ್ಷನ್ 366(A), 376(D), 506 ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:
ತುಮಕೂರು: ಪೊಲೀಸ್ ಎಂದು ಹೆದರಿಸಿ ಅತ್ಯಾಚಾರವೆಸಗಿದ್ದ ಆರೋಪಿಯ ಬಂಧನ
ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಇಬ್ಬರು ಆರೋಪಿಗಳ ಬಂಧನ
Published On - 11:50 am, Sat, 9 October 21