ಜೆರೋಸಾ ಶಾಲೆಯಲ್ಲಿ ಹಿಂದೂ ಅವಹೇಳನ ಪ್ರಕರಣ; ಬಿಜೆಪಿಯ ಇಬ್ಬರು ಶಾಸಕರ ವಿರುದ್ಧ FIR
ಮಂಗಳೂರಿನ ಜೆರೋಸಾ ಶಾಲೆಯ ಶಿಕ್ಷಕಿ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಒಟ್ಟು 5 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಂಗಳೂರು, ಫೆ.15: ಮಂಗಳೂರಿನ ಜೆರೋಸಾ ಶಾಲೆಯಲ್ಲಿ (Gerosa School) ಹಿಂದೂ ಅವಹೇಳನ ಪ್ರಕರಣ ಸಂಬಂಧ ಬಿಜೆಪಿಯ ಇಬ್ಬರು ಶಾಸಕರ (BJP MLA) ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ FIR ದಾಖಲಾಗಿದೆ. ಶಿಕ್ಷಕಿ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ (Vedavyasa Kamath) ಮತ್ತು ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿ (Bharath Shetty) ವಿರುದ್ಧ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಅಲ್ಲದೆ ಅನಿಲ್ ಜೆರಾಲ್ಡ್ ಲೋಬೋ ಎಂಬುವವರ ದೂರಿನ ಮೇರೆಗೆ VHP ಮುಖಂಡ ಶರಣ್ ಪಂಪ್ವೆಲ್, ಪಾಲಿಕೆ ಸದಸ್ಯ ಸಂದೀಪ್ ಗರೋಡಿ, ಭರತ್ ಕುಮಾರ್ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 143, 153A, 295A, 505(2), 506, 149ರಡಿ ಕೇಸ್ ದಾಖಲಾಗಿದೆ. ಈ ಪ್ರಕರಣದಲ್ಲಿ A1 ಬಿಜೆಪಿ ಶಾಸಕ ವೇದವ್ಯಾಸ ಕಾಮತ್, A2 ಬಿಜೆಪಿ ಶಾಸಕ ಭರತ್ ಶೆಟ್ಟಿ, A3 ಶರಣ್ ಪಂಪ್ವೆಲ್, A4 ಸಂದೀಪ್ ಗರೋಡಿ, A5 ಭರತ್ ಕುಮಾರ್ ಎಂದು ಹೆಸರು ಉಲ್ಲೇಖಿಸಲಾಗಿದೆ. ಆರೋಪಿಗಳು ಶಾಲೆಯ ಮುಂದೆ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದರೆಂದು FIRನಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಶಾಲೆ ಮುಂದೆ ಅಕ್ರಮವಾಗಿ ಗುಂಪುಗೂಡಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ.
ಶಾಲೆ ಆಡಳಿತ ಮಂಡಳಿ ನಿಯಮ ಉಲ್ಲಂಘಿಸುವಂತೆ ವಿದ್ಯಾರ್ಥಿಗಳನ್ನು ಪ್ರಚೋದನೆ ಮಾಡಿದ್ದಾರೆ. ಕ್ರೈಸ್ತ ಧರ್ಮದ ವಿರುದ್ಧ ಮಾತನಾಡಿದ್ದಾರೆ. ಹಿಂದೂ, ಕ್ರೈಸ್ತರ ನಡುವೆ ಗಲಭೆ ಸೃಷ್ಟಿಸಲು ಪ್ರಚೋದಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದ್ದು. ದಕ್ಷಿಣ ಕನ್ನಡ ಜಿಲ್ಲೆ ಶಾಂತಿ, ನೆಮ್ಮದಿಗೆ ಭಂಗ ತರಲು ಪ್ರಯತ್ನಿಸಿದ್ದರು ಎಂದು ಪಾಂಡೇಶ್ವರ ಠಾಣೆ ಪೊಲೀಸರು ದಾಖಲಿಸಿರುವ ಎಫ್ಐಆರ್ನಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ: ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ
ಮಂಗಳೂರಿನ ಜೆರೋಸಾ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಿಂದ ಧರ್ಮದ ಅವಹೇಳನ ಆರೋಪ ವಿಚಾರದಲ್ಲಿ ಶಾಸಕ ವೇದವ್ಯಾಸ ಕಾಮತ್ ವಿರುದ್ದ ಮಾಜಿ ಎಂ.ಎಲ್.ಸಿ ಐವನ್ ಡಿಸೋಜಾ ಕಿಡಿಕಾರಿಕಾರಿದ್ದಾರೆ. ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೊ ಜೊತೆ ಸೇರಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು ಶಾಸಕರು ಶಾಲೆಯ ಒಳಗೆ ಹೋಗಿ ವಿಚಾರಿಸಬಹುದಿತ್ತು. ಅದು ಬಿಟ್ಟು ಗೇಟು ಮುಂದೆ ನಿಂತು ಬೊಬ್ಬೆ ಹೊಡೆದ್ರೆ ಅವರ ಜವಬ್ದಾರಿ ಏನು. ಬೀದಿಯಲ್ಲಿ ನಿಂತು ಬಂದವರ ಬಳಿ ಬೊಬ್ಬೆ ಹಾಕಿಸಿ, ಗಲಾಟೆ ಮಾಡಿ ವಿದ್ಯಾದೇಗುಲಕ್ಕೆ ಅವಮಾನ ಮಾಡಿದ್ದಾರೆ. ಇದನ್ನ ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದರು. ಚುನಾಹಿತ ಪ್ರತಿನಿಧಿಯ ಗೌರವವನ್ನು ವೇದವ್ಯಾಸ್ ಕಾಮತ್ ಹಾಳು ಮಾಡಿದ್ದಾರೆ. ಈ ಬಗ್ಗೆ ಸ್ಪೀಕರ್, ಮುಖ್ಯಮಂತ್ರಿಗಳಿಗೆ ದೂರು ನೀಡುತ್ತೇನೆ ಎಂದರು. ಎಲ್ಲಾ ದಾಖಲೆಗಳನ್ನು ಇಟ್ಟು ದೂರು ನೀಡುತಿದ್ದು ಹಕ್ಕುಬಾಧ್ಯತ ಸಮಿತಿ ಈ ಬಗ್ಗೆ ತನಿಖೆ ಮಾಡಲಿ. ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿ. ಶಾಸಕರ ವಿರುದ್ದ ಕ್ರಮ ಕೈಗೊಳಲಿ ಎಂದವರು ಒತ್ತಾಯಿಸಿದ್ರು.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 6:56 am, Thu, 15 February 24