ಬಂಟ್ವಾಳದ ದೇವಸ್ಥಾನದಲ್ಲಿ ಲಕ್ಷಾಂತರ ರೂ. ಮೌಲ್ಯದ ಬೆಳ್ಳಿ, ಚಿನ್ನಾಭರಣ ದರೋಡೆ

ದಕ್ಷಿಣ ಕನ್ನಡ ಜಿಲ್ಲೆಯ ಪುದು ಗ್ರಾಮದಲ್ಲಿನ ದೇವಸ್ಥಾನವೊಂದರಲ್ಲಿ ಕಳ್ಳರು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಬೆಳ್ಳಿ, ಚಿನ್ನಾಭರಣವನ್ನು ಕಳ್ಳರು ಕದ್ದಿದ್ದಾರೆ. ಮೂವರು ಕಳ್ಳರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರ ಬಗ್ಗೆ ನಾಯಿ ಸುಳಿವು ಕೊಟ್ಟಿದೆ. ಅವರ ಕೈಯಲ್ಲಿ ಮಾರಕಾಸ್ತ್ರಗಳನ್ನು ನೋಡಿ ಅರ್ಚಕರು ಆತಂಕಗೊಂಡಿದ್ದಾರೆ.

ಬಂಟ್ವಾಳದ ದೇವಸ್ಥಾನದಲ್ಲಿ ಲಕ್ಷಾಂತರ ರೂ. ಮೌಲ್ಯದ ಬೆಳ್ಳಿ, ಚಿನ್ನಾಭರಣ ದರೋಡೆ
ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಸುಷ್ಮಾ ಚಕ್ರೆ

Updated on: Nov 05, 2024 | 9:04 PM

ಮಂಗಳೂರು: ದಕ್ಷಿಣ ಕನ್ನಡದ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಲಕ್ಷಾಂತರ ಮೌಲ್ಯದ ಬೆಳ್ಳಿ, ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ. ಮೂವರು ಕಳ್ಳರ ಚಹರೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾಮದಲ್ಲಿ‌ ಈ ಘಟನೆ ನಡೆದಿದೆ. ಪುದುವಿನ ಶ್ರೀ ದೇವಕಿ ಕೃಷ್ಣ ರವಳನಾಥ ದೇವಸ್ಥಾನದಲ್ಲಿ ತಡರಾತ್ರಿ ಕಳ್ಳತನ ಪ್ರಕರಣ ನಡೆದಿದೆ. ದೇವಸ್ಥಾನದ ಬಾಗಿಲು ಮುರಿದು ದೇವರ ಗರ್ಭಗುಡಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಳ್ಳರು ದೋಚಿದ್ದಾರೆ.

ದೇವಸ್ಥಾನದ ಹಿಂಬಾಗಿಲು ಮುರಿದು ಒಳನುಗ್ಗಿದ್ದ ಮೂವರು ಆಗಂತುಕರು ಈ ದರೋಡೆಯನ್ನು ಮಾಡಿದ್ದಾರೆ. ಗರ್ಭಗುಡಿಯೊಳಗೆ ನುಗ್ಗಿ ದೇವರ ಬೆಳ್ಳಿಯ ಪೀಠ ಹಾಗೂ ಬಂಗಾರದ ವಸ್ತುಗಳನ್ನು ತೆಗೆದು ಹೊರತಂದು ಗೋಣಿಯಲ್ಲಿ ತುಂಬಿದ ಆಗಂತುಕರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗೋಣಿ ಹೆಗಲಿಗೇರಿಸಿ ಹೋಗುತ್ತಿರವ ಆಗಂತುಕರ ಚಲನವಲನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದೇವಾಲಯದೊಳಗೆ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಸುತ್ತಾಡಿದ ಆಗಂತುಕರನ್ನು ವಿಡಿಯೋದಲ್ಲಿ ನೋಡಬಹುದು. ಘಟನೆ ನಡೆದಿ ಸ್ಥಳಕ್ಕೆ ಆಗಮಿಸಿ ಬಂಟ್ವಾಳ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ: ಸಾಲ ವಾಪಸ್ ಕೇಳಲು ಹೋದ ಬ್ಯಾಂಕ್ ಮ್ಯಾನೇಜರ್​​ಗೆ ಗನ್ ತೋರಿಸಿ ಬೆದರಿಕೆ

ಬಂಟ್ವಾಳ ತಾಲೂಕಿನ ಪುದು ಗ್ರಾಮದ ಸುಜೀರ್ ಎಂಬಲ್ಲಿ ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನದ ಬಾಗಿಲು ಮುರಿದು ದೇವರ ಗರ್ಭಗುಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಳ್ಳರು ದರೋಡೆ ಮಾಡಿದ್ದಾರೆ. ನೂರಾರು ವರ್ಷ ಹಳೆಯದಾದ ಸುಮಾರು ಒಂದೂವರೆ ಕೇಜಿ ತೂಕದ ದೇವರ ಬೆಳ್ಳಿಯ ಪೀಠ, ಚಿನ್ನದ ಮೂಗುತಿ, ದೇವರಿಗೆ ಸಂಬಂಧಿಸಿದ ಕೊಡ, 2 ಕೆಜಿ ತೂಕದ ಬೆಳ್ಳಿಯ ಆಭರಣಗಳು ಹಾಗೂ 3 ಪವನ್ ತೂಕದ ಚಿನ್ನದ ಆಭರಣ ಕಳ್ಳತನವಾಗಿದೆ.

ಇದನ್ನೂ ಓದಿ: ಹಾಸನಾಂಬೆ ದೇವಸ್ಥಾನದಲ್ಲಿ ಡಿಸಿ ಮತ್ತು ಎಂಎಲ್​ಎ ಮಧ್ಯೆ ವಾಗ್ವಾದ

ಅಕ್ಟೋಬರ್ 4ರ ಸೋಮವಾರ ಈ ಘಟನೆ ನಡೆದಿದೆ. ಮೂವರು ಆಗಂತುಕರು ದೇವಸ್ಥಾನದ ಹಿಂಬಾಗಿಲನ್ನು ಮುರಿದು ಒಳಗೆ ನುಗ್ಗಿದ್ದಾರೆ. ದೇವಸ್ಥಾನದೊಳಗೆ ಸುತ್ತಾಡಿ ಗರ್ಭಗುಡಿಯೊಳಗೆ ನುಗ್ಗಿ ದೇವರ ಬೆಳ್ಳಿಯ ಪೀಠ ಹಾಗೂ ಚಿನ್ನದ ವಸ್ತುಗಳನ್ನು ಗೋಣಿಯಲ್ಲಿ ತುಂಬಿಸಿದ್ದಾರೆ. ಕಳ್ಳರು ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ತಿರುಗಾಡುತ್ತಿರುವುದು ಕಂಡುಬಂದಿದೆ. ಈ ವೇಳೆ ದೇವಸ್ಥಾನದ ಅರ್ಚಕರ ಮನೆಯ ಸಾಕುನಾಯಿ ಜೋರಾಗಿ ಬೊಗಳಲಾರಂಭಿಸಿದೆ. ಅದನ್ನು ನೋಡಿದ ಅರ್ಚಕರು ಹೊರಬಂದು ನೋಡಿದಾಗ ಮುಸುಕುಧಾರಿಗಳು ಕಂಡಿದ್ದಾರೆ. ಆದರೆ, ಅವರಿಗೆ ದರೋಡೆಯನ್ನು ತಡೆಯಲು ಸಾಧ್ಯವಾಗಿಲ್ಲ.

ಇನ್ನಷ್ಟು ಕರ್ನಾಟಕದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ